ಮೋವಾಬಿನ ವಿಷಯವಾದ ದೈವೋಕ್ತಿ. ಆ ರಾತ್ರಿಯಲ್ಲಿ ಮೋವಾಬಿನ ಆರ್ ಹಾಳಾಗಿ ನಿಶ್ಯಬ್ದವಾಯಿತು; ಆ ರಾತ್ರಿಯಲ್ಲಿ ಮೋವಾ ಬಿನ ಕಿರ್ ಹಾಳಾಗಿ ನಿಶ್ಯಬ್ಧವಾಯಿತು
Cross references
ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.
ಬೆಂಕಿ ಹೆಷ್ಬೋನಿನಿಂದಲೂ ಜ್ವಾಲೆಯು ಸೀಹೋನನ ಪಟ್ಟಣದಿಂದಲೂ ಹೊರಟು ಮೋವಾಬಿನ ಆರ್ ಎಂಬ ಪಟ್ಟಣವನ್ನೂ ಅರ್ನೋನಿನ ಎತ್ತರ ಸ್ಥಳಗಳ ಪ್ರಭುಗಳನ್ನೂ ದಹಿಸಿಬಿಟ್ಟಿತು.
ಆಗ ಕರ್ತನು ನನಗೆ--ಮೋವಾಬ್ಯರಿಗೆ ಉಪದ್ರಕೊಡಬೇಡ; ಅವರ ಸಂಗಡ ಜಗಳವಾಡಿ ಯುದ್ಧಮಾಡಬೇಡ; ನಾನು ಅವರ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ; ನಾನು ಆರ್ ಅನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲವೇ ಅಂದನು.
ಅಮ್ಮೋನನ ಮಕ್ಕಳೆದುರಿಗೆ ನೀನು ಬಂದರೆ ಅವರಿಗೆ ಉಪದ್ರ ಕೊಡಬೇಡ; ಅವರ ಸಂಗಡ ಜಗಳವಾಡ ಬೇಡ;
ನಾನು ಅಮ್ಮೋನನ ಮಕ್ಕಳ ದೇಶದಲ್ಲಿ ನಿನಗೆ ಸ್ವಾಸ್ತ್ಯವನ್ನು ಕೊಡುವದಿಲ್ಲ. ನಾನು ಅದನ್ನು ಲೋಟನ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಟ್ಟೆನಲ್ಲಾ ಅಂದನು.
ಇದಲ್ಲದೆ ಅವರು ಪಟ್ಟಣ ಗಳನ್ನು ಕೆಡವಿಹಾಕಿ ಉತ್ತಮವಾದ ಹೊಲಗಳ ಮೇಲೆ ಕಲ್ಲನ್ನು ಹಾಕಿ ತುಂಬಿಸಿ ನೀರು ಬಾವಿಗಳನ್ನೆಲ್ಲಾ ಮುಚ್ಚಿ, ಎಲ್ಲಾ ಉತ್ತಮವಾದ ಮರಗಳನ್ನು ಬೀಳಮಾಡಿದರು. ಕೀರ್ಹರೆಷೆತಿನಲ್ಲಿ ಮಾತ್ರ ಅದರ ಕಲ್ಲುಗಳನ್ನು ಉಳಿಸಿ ಬಿಟ್ಟರು. ಆದರೆ ಕಲ್ಲೆಸೆಯುವವರು ಅದನ್ನೂ ಸುತ್ತಿ ಕೊಂಡು ಹೊಡೆದುಬಿಟ್ಟರು.
ಆದರೆ ಅವರು ಪಶ್ಚಿಮ ದಿಕ್ಕಿಗೆ ಫಿಲಿಷ್ಪಿಯರ ಹೆಗಲಿನ ಮೇಲೆ ಎರಗುವರು; ಅವರು ಜೊತೆಯಾಗಿ ಪೂರ್ವದವರನ್ನು ಹಾಳುಮಾಡುವರು; ಅವರು ಎದೋಮಿನ ಮತ್ತು ಮೋವಾಬಿನ ಮೇಲೆ ತಮ್ಮ ಕೈಯನ್ನು ಹಾಕುವರು; ಅಮ್ಮೋನ್ಯರ ಮಕ್ಕಳು ಅವರಿಗೆ ವಿಧೇಯರಾಗುವರು.
ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ.
ಅರಸನಾದ ಆಹಾಜನು ಸತ್ತ ವರುಷದಲ್ಲಿ ಈ ದೇವವಾಣಿಯಾಯಿತು.
ಮೋವಾಬಿನ ಗರ್ವವನ್ನು ನಾವು ಕೇಳಿದ್ದೇವೆ; ಅವನಿಗೆ ಬಹಳ ಗರ್ವವುಂಟು, ಅಹಂಕಾರವು, ಗರ್ವ ವು ಕೋಪವು ಸಹ ಉಂಟು; ಆದರೆ ಅವನು ಕೊಚ್ಚಿ ಕೊಳ್ಳುವದು ವ್ಯರ್ಥ.
ಆದದರಿಂದ ಮೋವಾಬಿನ ನಿಮಿತ್ತ ಮೋವಾಬೇ ಗೋಳಾಡುವದು, ಪ್ರತಿಯೊ ಬ್ಬನೂ ಗೋಳಾಡುವನು; ಕೀರ್ ಹರೆಷೆಥಿನ ಅಸ್ತಿವಾರ ಗಳಿಗೋಸ್ಕರ ನೀವು ದುಃಖಿಸುವಿರಿ; ನಿಜವಾಗಿಯೂ ಅವರು ನೊಂದುಹೋಗಿದ್ದಾರೆ.
ಆದದರಿಂದ ಮೋವಾಬಿನ ನಿಮಿತ್ತ ನನ್ನ ಕರುಳುಗಳು ಮತ್ತು ಕೀರ್ ಹರೇಷೆಥಿನ ನಿಮಿತ್ತ ನನ್ನ ಅಂತರಿಂದ್ರಿಯಗಳು ಕಿನ್ನರಿಯಂತೆ ಸ್ವರಗೈಯುವವು.
ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ?
ದೇವರಾದ ಕರ್ತನು ಹೀಗೆ ಹೇಳುತ್ತಾನೆ, ಮೋವಾಬು ಮತ್ತು ಸೇಯಾರು--ಇಗೋ, ಯೆಹೂ ದನ ಮನೆಯು ಸಮಸ್ತ ಅನ್ಯಜನಾಂಗಗಳ ಹಾಗಿದೆ ಎಂದು ಹೇಳುವರು.
ಕರ್ತನು ಹೀಗೆ ಹೇಳುತ್ತಾನೆ--ಮೋವಾಬಿನ ಮೂರು ಮತ್ತು ನಾಲ್ಕರ ಅಪರಾಧ ಗಳ ನಿಮಿತ್ತವಾಗಿ ನಾನು ಅದಕ್ಕಾಗುವ ದಂಡನೆಯಿಂದ ತಪ್ಪಿಸುವದಿಲ್ಲ; ಅವನು ಎದೋಮಿನ ಅರಸನ ಎಲುಬುಗಳನ್ನು ಸುಟ್ಟು ಸುಣ್ಣ ಮಾಡಿದ್ದಾನೆ.
ನನ್ನ ಜನರನ್ನು ನಿಂದಿಸಿ, ಅವರ ಮೇರೆಗೆ ಮೋವಾ ಬ್ಯರೂ ಅಮ್ಮೋನ್ಯರೂ ವಿರೋಧವಾಗಿ ತಮ್ಮನ್ನು ಹೆಚ್ಚಿಸಿ ಕೊಂಡದ್ದನ್ನು ನಾನು ಕೇಳಿದ್ದೇನೆ.
ಸಹೋದರರೇ, ಈ ಕಾಲಗಳನ್ನೂ ಗಳಿಗೆಗಳನ್ನೂ ಕುರಿತು ನಿಮಗೆ ಬರೆಯು ವದು ಅವಶ್ಯವಿಲ್ಲ.