ಆದರೆ ಕರ್ತನು ಮಾತನಾಡಿ--ಮೂರು ವರುಷ ಗಳಲ್ಲಿ ಕೂಲಿಯಾಳಿನ ವರುಷಗಳಂತೆ ಮೋವಾಬಿನ ಮಹಿಮೆಯು ಆ ಎಲ್ಲಾ ದೊಡ್ಡ ಸಮೂಹದೊಂದಿಗೆ ತಿರಸ್ಕರಿಸಲ್ಪಡುವ ಹಾಗೆ ಉಳಿದವರು ಚಿಕ್ಕ ಗುಂಪಾಗಿ ಬಲಹೀನರಾಗುವರು ಎಂದು ಹೇಳಿದ್ದಾನೆ.
Cross references
ನಮ್ಮ ತಂದೆಗೆ ಇದ್ದವುಗಳನ್ನೆಲ್ಲಾ ಯಾಕೋಬನು ತಕ್ಕೊಂಡಿದ್ದಾನೆ, ನಮ್ಮ ತಂದೆಗಿದ್ದವುಗಳಿಂದ ಈ ಘನತೆಯನ್ನೆಲ್ಲಾ ಪಡೆದಿದ್ದಾನೆ ಎಂದು ಲಾಬಾನನ ಮಕ್ಕಳು ಹೇಳುವ ಮಾತುಗಳನ್ನು ಯಾಕೋಬನು ಕೇಳಿದನು.
ನಿನ್ನ ಕೈಯನ್ನು ಅವನಿಗೆ ವಿಶಾಲವಾಗಿ ತೆರೆಯಬೇಕು; ಅವನಿಗೆ ಬೇಕಾಗುವದರಲ್ಲಿ ಬೇಕಾದಷ್ಟು ಸಾಲ ಅವನಿಗೆ ಕೊಡಬೇಕು.
ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
ಭೂಮಿಯ ಮೇಲೆ ಮನುಷ್ಯನಿಗೆ ನೇಮಿಸಲ್ಪಟ್ಟ ಕಾಲ ಉಂಟಲ್ಲವೋ? ಅವನ ದಿವಸಗಳು ಕೂಲಿಯವನ ದಿವಸಗಳ ಹಾಗಲ್ಲವೋ?
ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು.
ನನ್ನ ಹೃದಯವು ಮೋವಾಬಿನ ನಿಮಿತ್ತ ಕೂಗು ತ್ತದೆ; ಅಲ್ಲಿಂದ ಪಲಾಯನವಾದವರು ಮೂರು ವರುಷದ ಕಡಸಿನಂತೆ ಚೋಯರಿಗೆ ಓಡಿಹೋಗು ವರು; ಲೂಹೀಥ್ ದಿಣ್ಣೆಯನ್ನು ಅಳುತ್ತಾ ಹತ್ತುತ್ತಾರೆ; ಯಾಕಂ ದರೆ ಹೊರೊನಯಿಮಿನ ದಾರಿಯಲ್ಲಿ ನಡೆಯುತ್ತಾ ನಾಶವಾದೆವಲ್ಲಾ ಎಂದು ಸ್ವರಗೈಯು ತ್ತಾರೆ.
ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.
ಕರ್ತನು ನನಗೆ ಹೀಗೆ ಹೇಳುತ್ತಾನೆ--ಕೂಲಿಯವನ ವರುಷಗಳಂತೆ ಒಂದು ವರುಷದೊಳಗೆ ಕೇದಾರಿನ ವೈಭವವು ತೀರಿಹೋಗುವದು.ಬಿಲ್ಲುಗಾರರಲ್ಲಿ ಉಳಿದವರು ಕೇದಾರಿನ ಮಕ್ಕಳ ಬಲಿಷ್ಠರು ಕುಗ್ಗಿಸಲ್ಪಡು ವರು ಎಂದು ಇಸ್ರಾಯೇಲ್ಯರ ದೇವರಾದ ಕರ್ತನು ಇದನ್ನು ನುಡಿದಿದ್ದಾನೆ.
ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇ ಕೆಂತಲೂ ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವ ಮಾನಪಡಿಸಬೇಕೆಂತಲೂ ಸೈನ್ಯಗಳ ಕರ್ತನೇ, ಹೀಗೆ ಸಂಕಲ್ಪಿಸಿದ್ದಾನೆ.
ಈ ಪರ್ವತದಲ್ಲಿ ಕರ್ತನ ಕೈ ವಿಶ್ರ ಮಿಸಿಕೊಳ್ಳುವದು; (ನೆಲೆಯಾಗಿರುವದು) ಒಣ ಹುಲ್ಲ ನ್ನು ತಿಪ್ಪೆಗುಂಡಿಯಲ್ಲಿ ತುಳಿಯುವಂತೆ ಮೋವಾಬು ಆತನ ಕೆಳಗೆ ತುಳಿಯಲ್ಪಡುವದು.
ಕರ್ತನೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ ತನ್ನ ಹೆಜ್ಜೆ ನೆಟ್ಟಗೆ ಮಾಡುವದು ನಡೆಯುವ ಮನುಷ್ಯನದಲ್ಲವೆಂದೂ ಬಲ್ಲೆನು.
ಬೆಳ್ಳಿಯನ್ನು ಸುಲುಕೊಳ್ಳಿರಿ; ಬಂಗಾರವನ್ನು ಸುಲುಕೊಳ್ಳಿರಿ; ಕೂಡಿಸಿಟ್ಟ ಧನಕ್ಕೂ ಸಕಲ ವಿಧವಾದ ಶ್ರೇಷ್ಠ ವಸ್ತುಗಳ ನಿಧಿಗೂ ಪಾರವೇ ಇಲ್ಲ.