ಆದರೂ ಎಣ್ಣೇ ಮರವನ್ನು ಅಲ್ಲಾಡಿಸಿದ ಬಳಿಕ ಮೇಲಿನ ಕೊಂಬೆಯ ತುಟ್ಟತುದಿ ಯಲ್ಲಿ ಎರಡು ಮೂರು ಕಾಯಿಗಳು, ಫಲವತ್ತಾದ ಆ ಮರದ ಕೊಂಬೆಗಳಲ್ಲೆಲ್ಲಾ ನಾಲ್ಕೈದು ಕಾಯಿಗಳು ಉಳಿದಿರುವಂತೆ ಹಕ್ಕಲು ಹಣ್ಣುಗಳು ಅದರಲ್ಲಿ ಉಳಿ ಯುವವು ಎಂದು ಇಸ್ರಾಯೇಲಿನ ದೇವರಾದ ಕರ್ತನು ಹೇಳುತ್ತಾನೆ.
Cross references
ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
ಅವನು ಅವರಿಗೆನೀವು ಮಾಡಿದ್ದಕ್ಕೆ ಸಮಾನವಾಗಿ ನಾನೇನು ಮಾಡಿ ದೆನು? ಅಬೀಯೆಜೆರನ ದ್ರಾಕ್ಷೇ ಫಲ ಕೂಡಿಸುವ ದಕ್ಕಿಂತ ಎಫ್ರಾಯಾಮನ ದ್ರಾಕ್ಷೇ ಹಕ್ಕಲು ಉತ್ತಮ ವಲ್ಲವೇ?
ಆದರೆ ಬಾಳನಿಗೆ ಬೊಗ್ಗದೆ ಇರುವ ಸಕಲ ಮೊಣ ಕಾಲುಗಳೂ ಅದನ್ನು ಮುದ್ದಿಡದ ಸಕಲ ಬಾಯಿಗಳೂ ಆಗಿರುವ ಏಳು ಸಾವಿರ ಮಂದಿಯನ್ನು ಇಸ್ರಾಯೇ ಲಿನಲ್ಲಿ ನನಗೋಸ್ಕರ ಉಳಿಸಿಕೊಂಡಿದ್ದೇನೆ ಅಂದನು.
ಸೈನ್ಯ ಗಳ ಕರ್ತನು ನಮಗೆ ಮಿಕ್ಕಿದ್ದರಲ್ಲಿ ಸ್ವಲ್ಪವನ್ನಾದರೂ ಉಳಿಸದೆ ಹೋಗಿದ್ದರೆ, ಸೊದೋಮಿನ ಹಾಗೆಯೂ ಗೊಮೋರಕ್ಕೆ ಸಮಾನವಾಗಿಯೂ ಇರುತ್ತಿದ್ದೆವು.
ತನ್ನ ಜನರಾದ ಇಸ್ರಾಯೇಲ್ಯರು ಸಮುದ್ರದ ಮರಳಿನಂತೆ ಇದ್ದರೂ ಅವರಲ್ಲಿ ಉಳಿದವರು ಮಾತ್ರ ಹಿಂತಿರು ಗುವರು; ನಾಶವಾಗುವದಕ್ಕೆ ವಿಧಿಸಲ್ಪಟ್ಟದ್ದು ನೀತಿ ಯೊಂದಿಗೆ ತುಂಬಿ ತುಳುಕುವದು.
ಎಣ್ಣೇ ಮರವನ್ನು ಬಡಿದ ಮೇಲೆಯೂ ದ್ರಾಕ್ಷೇ ಸುಗ್ಗಿಯು ತೀರಿದ ನಂತರವು ನಿಲ್ಲುವ ಉಳಿದ ಕಾಯಿಗಳ ಹಾಗೆ ದೇಶದಲ್ಲಿರುವದು.
ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
ಆದರೆ ಓ ಇಸ್ರಾಯೇಲ್ ಪರ್ವತಗಳೇ, ನೀವು ನಿಮ್ಮ ಕೊಂಬೆಗಳನ್ನು ಹೊರಡಿಸಿ ನನ್ನ ಜನರಾದ ಇಸ್ರಾಯೇಲ್ಯರಿಗೆ ಫಲಕೊಡುವಿರಿ; ಅವರ ಬರುವಿಕೆಯು ಸವಿಾಪವಾಗಿದೆ.
ಇಗೋ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆಂದು ಅವರಿಗೆ ಹೇಳು--ನಾನು ಎಫ್ರಾಯಾಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲ್ಯರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು ಎಂಬದು;
ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಕಳ್ಳರು ನಿನ್ನ ಬಳಿಗೆ ಬಂದಿದ್ದರೆ ಸುಲುಕೊಳ್ಳುವವರು ರಾತ್ರಿಯಲ್ಲಿ ಬಂದಿದ್ದರೆ ಎಷ್ಟೋ ಹಾಳಾಗುತ್ತಿದ್ದಿಯಲ್ಲಾ! ಅವರು ತಮಗೆ ಸಾಕಾಗುವಷ್ಟು ಕದ್ದುಕೊಳ್ಳುವರಲ್ಲವೋ? ದ್ರಾಕ್ಷೇಹಣ್ಣನ್ನು ಕೂಡಿಸುವ ವರು ನಿನ್ನ ಬಳಿಗೆ ಬಂದಿದ್ದರೆ ಅವರು ಕೆಲವು ದ್ರಾಕ್ಷೇ ಹಣ್ಣನ್ನು ಬಿಡುವರಲ್ಲವೋ?
ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
ಯೆಶಾಯನು ಸಹ ಇಸ್ರಾಯೇಲ್ಯರ ವಿಷಯವಾಗಿ--ಇಸ್ರಾಯೇಲ್ಯರ ಮಕ್ಕಳ ಸಂಖ್ಯೆಯು ಸಮುದ್ರದ ಮರಳಿನೋಪಾದಿಯಲ್ಲಿದ್ದರೂ ಒಂದು ಅಂಶ ಮಾತ್ರ ರಕ್ಷಣೆ ಹೊಂದುವದು ಎಂದು ಕೂಗಿ ಹೇಳುತ್ತಾನೆ.
ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
ಹೀಗೆ ಇಸ್ರಾಯೇಲ್ ಜನರೆಲ್ಲಾ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ--ಬಿಡಿಸು ವಾತನು ಚೀಯೋನಿನೊಳಗಿಂದ ಹೊರಟುಬಂದು ಯಾಕೋಬಿನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆ ಮಾಡುವನು.