ಆ ದಿವಸದಲ್ಲಿ ಅವನ ಬಲ ವಾದ ಪಟ್ಟಣಗಳು ಬಿಟ್ಟುಬಿಟ್ಟ ಅರಣ್ಯಗಳ ಹಾಗೆಯೂ ಇಸ್ರಾಯೇಲಿನ ಮಕ್ಕಳ ಮುಂದೆ ಬಿಡಲ್ಪಟ್ಟ ಕೊನೆಗಳ ಹಾಗೆಯೂ ಇದ್ದು ಹಾಳಾಗಿರುವದು.
Cross references
ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
ಆ ಮಗುವು ಕೆಟ್ಟದ್ದನ್ನು ನಿರಾಕರಿಸಿ ಒಳ್ಳೆಯದನ್ನು ಆರಿಸಿಕೊಳ್ಳುವದಕ್ಕಿಂತ ಮುಂಚೆಯೇ ನೀನು ಹೇಸಿಕೊಳ್ಳುವ ದೇಶವನ್ನು ಅವಳ ಇಬ್ಬರು ಅರಸರು ತ್ಯಜಿಸಿಬಿಡುವರು.
ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು;
ಆ ದಿವಸದಲ್ಲಿ ಆಗುವದೇನಂದರೆ--ಯಾಕೋ ಬಿನ ವೈಭವ ತಗ್ಗುವದು; ಅದರ ಮಾಂಸದ ಕೊಬ್ಬು ಕರಗಿಸಲ್ಪಡುವದು.
ಇಗೋ, ಕರ್ತನು ಭೂಮಿಯನ್ನು (ಲೋಕವನ್ನು) ಬರಿದುಮಾಡಿ ನಿರ್ಜನ ಪ್ರದೇಶ ವನ್ನಾಗಿ ಮಾಡಿ ತಲೆಕೆಳಕಾಗಿ ತಿರುಗಿಸಿ ಅದರ ನಿವಾಸಿ ಗಳನ್ನು ಚದರಿಸಿಬಿಡುವವನಾಗಿದ್ದಾನೆ.
ಕೋಟೆಯ ಪಟ್ಟಣವಾಗಿದ್ದಾಗ್ಯೂ ಹಾಳಾಗಿ ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸಸ್ಥಾನವಾಗಿದೆ; ಅಲ್ಲಿ ಕರುಗಳು ಮೇದು ಮಲಗುವವು. ಅಲ್ಲಿನ ಚಿಗುರುಗಳನ್ನು ತಿಂದು ಬಿಡು ವವು.
ಎಫ್ರಾಯಾಮ್ಯರ ಕುಡುಕರ ಗರ್ವದ ಕಿರೀಟಕ್ಕೆ ಅಯ್ಯೋ! ದ್ರಾಕ್ಷಾರಸದಿಂದ ಅಮಲೇರಿದವರ ಕೊಬ್ಬುಳ್ಳ ತಗ್ಗಿನ ತಲೆಯ ಮೇಲಿ ರುವ ಅವರ ಅಹಂಕಾರದ ಕಿರೀಟವು ಬಾಡಿದ ಹೂವಾಗಿದೆ.
ನಿನ್ನ ಜನರಲ್ಲಿ ಗಲಭೆ ಉಂಟಾಗುವದು; ಶಲ್ಮಾನನು ಬೇತ್ ಅರ್ಬೇ ಲನ್ನು ನಾಶಮಾಡಿದ ಪ್ರಕಾರ ನಿನ್ನ ಕೋಟೆಗಳೆಲ್ಲಾ ನಾಶಮಾಡಲ್ಪಡುವವು; ತಾಯಿಯು ತನ್ನ ಮಕ್ಕಳ ಮೇಲೆ ಅಪ್ಪಳಿಸಿ ಪುಡಿಪುಡಿಯಾಗಿ ಮಾಡಲ್ಪಟ್ಟಳು.ಹಾಗೆಯೇ ನಿಮ್ಮ ಬಹಳ ದುಷ್ಟತ್ವದ ನಿಮಿತ್ತ ಬೇತೇಲು ನಿಮಗೆ ಹೀಗೆ ಮಾಡುವದು. ಬೆಳಗಿನ ಜಾವದಲ್ಲಿ ಇಸ್ರಾಯೇಲಿನ ಅರಸನು ಸಂಪೂರ್ಣವಾಗಿ ಕಡಿಯಲ್ಪ ಡುವನು (ಹಾಳಾಗುವನು).
ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ವಿರೋಧಿಯು ದೇಶದ ಸುತ್ತಲೂ ಇರುವನು; ನಿನ್ನಲ್ಲಿರುವ ನಿನ್ನ ಬಲವನ್ನು ತಗ್ಗಿಸುವನು; ನಿನ್ನ ಅರಮನೆಗಳು ಸೂರೆಯಾಗುವವು.
ಇಸಾಕನ ಉನ್ನತ ಸ್ಥಳಗಳು ನಾಶವಾಗುವವು; ಇಸ್ರಾಯೇಲ್ಯನ ಪರಿಶುದ್ಧ ಸ್ಥಳಗಳು ಹಾಳಾಗುವವು; ನಾನು ಕತ್ತಿಯೊಂದಿಗೆ ಯಾರೊ ಬ್ಬಾಮನ ಮನೆತನಕ್ಕೆ ವಿರುದ್ಧವಾಗಿ ಏಳುವೆನು ಅಂದನು.
ನಿನ್ನ ದೇಶದ ಪಟ್ಟಣಗಳನ್ನು ಕಡಿದುಬಿಟ್ಟು ನಿನ್ನ ಕೋಟೆಗಳನ್ನೆಲ್ಲಾ ಕೆಡವಿಹಾಕುವೆನು.
ಒಮ್ರಿಯ ನಿಯಮಗಳನ್ನೂ ಅಹಾಬನ ಮನೆಯ ಸಮಸ್ತ ಕ್ರಿಯೆಗಳನ್ನೂ ಕೈಕೊಳ್ಳುತ್ತೀರಿ; ನಾನು ನಿನ್ನನ್ನು ಹಾಳಾ ಗಿಯೂ ಅದರ ನಿವಾಸಿಗಳನ್ನು ಸಿಳ್ಳಿಡುವಿಕೆಗಾಗಿಯೂ ಮಾಡುವ ಹಾಗೆ ಅವರ ಆಲೋಚನೆಗಳಲ್ಲಿ ನಡ ಕೊಳ್ಳುತ್ತೀರಿ; ಆದದರಿಂದ ನನ್ನ ಜನರ ನಿಂದೆಯನ್ನು ಹೊರುವಿರಿ.
ಆದರೂ ದೇಶವು ಅದರ ನಿವಾಸಿಗಳ ನಿಮಿತ್ತ ಅವರ ದುಷ್ಕ್ರಿಯೆಗಳ ಫಲದಿಂದ ಹಾಳಾಗುವದು.