ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?
Cross references
ಫರೋಹನು ತನ್ನ ಸೇವಕರಿಗೆಯೋಸೇಫನಂತೆ ದೇವರಾತ್ಮವುಳ್ಳ ಮನುಷ್ಯನು ಸಿಕ್ಕಾನೋ ಅಂದನು.
ನಿನ್ನ ಮೇಲೆಯೂ ನಿನ್ನ ಜನರ ಮೇಲೆಯೂ ನಿನ್ನ ಎಲ್ಲಾ ಸೇವಕರ ಮೇಲೆಯೂ ಕಪ್ಪೆಗಳು ಏರಿ ಬರುವವು ಎಂದು ಹೇಳು ಅಂದನು.
ಅವರು ಅವುಗಳನ್ನು ರಾಶಿಗಳಾಗಿ ಕೂಡಿಸಿಟ್ಟಿದ್ದರಿಂದ ದೇಶವು ದುರ್ವಾಸನೆಯಿಂದ ತುಂಬಿತು.
ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.
ಹೀಗೆ ಹೀರಾಮನು ತನ್ನ ಇಚ್ಚೆಯ ಪ್ರಕಾರ ಸೊಲೊಮೋನನಿಗೆ ದೇವದಾರು ಮರಗ ಳನ್ನೂ ತುರಾಯಿ ಮರಗಳನ್ನೂ ಕೊಟ್ಟನು.
ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ.
ಆತನು ಸಲಹೆಗಾರ ರನ್ನು ಕೇಡಿಗೆ ನಡಿಸುತ್ತಾನೆ; ನ್ಯಾಯಾಧಿಪತಿಗಳನ್ನು ಮೂರ್ಖರನ್ನಾಗಿ ಮಾಡುತ್ತಾನೆ.
ಕರ್ತನು ಜನಾಂಗಗಳ ಆಲೋಚನೆಯನ್ನು ವ್ಯರ್ಥ ಮಾಡುವನು; ಜನರ ಕಲ್ಪನೆಗಳನ್ನು ನಿಷ್ಫಲಮಾಡು ತ್ತಾನೆ.
ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿನ್ನ ಮುಂದೆ ಪಶು ವಿನಂತೆ ಇದ್ದೆನು.
ಅವರ ತಂದೆಗಳ ಮುಂದೆ ಐಗುಪ್ತ ದೇಶ ದಲ್ಲಿ, ಸೋನ್ ಬೈಲಿನಲ್ಲಿ ಆತನು ಅದ್ಭುತಗಳನ್ನು ಮಾಡಿದನು.
ಐಗುಪ್ತದಲ್ಲಿ ಆದ ಸೂಚಕ ಕಾರ್ಯಗಳನ್ನೂ ಸೋನ್ ಬೈಲಿನಲ್ಲಿ ನಡಿಸಿದ ಅದ್ಭುತ ಗಳನ್ನೂ ಮಾಡಿದ ದಿವಸವನ್ನೂ ಆತನ ಕೈಯನ್ನೂ ಅವರು ಜ್ಞಾಪಕಮಾಡಿಕೊಳ್ಳಲಿಲ್ಲ.
ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ.
ಐಗುಪ್ತದ ಆತ್ಮವು ಅದರ ಮಧ್ಯದಲ್ಲಿ ಕುಂದುವದು; ಅದರ ಆಲೋಚನೆಯನ್ನು ಕೆಡಿಸಿಬಿಡುವೆನು; ಅಲ್ಲಿಯ ವರು ವಿಗ್ರಹಗಳನ್ನೂ ಮಾಟಗಾರರನ್ನೂ ಯಕ್ಷಣಿಗಾರ ರನ್ನೂ ಮಂತ್ರವಾದಿಗಳನ್ನೂ ಹುಡುಕುವರು.
ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.
ಹೀಗಿರುವದ ರಿಂದ ಇಗೋ, ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ ಅದ್ಭುತವೂ ಆದ ಕಾರ್ಯವನ್ನು ಮಾಡು ವೆನು; ಅವರ ಜ್ಞಾನಿಗಳ ಜ್ಞಾನವು ಅಳಿಯುವದು (ನಾಶ), ಅವರ ವಿವೇಕಿಗಳ ತಿಳುವಳಿಕೆಯು ಅಡಗಿ ಕೊಳ್ಳುವದು ಅಂದನು.
ಅವನ ಪ್ರಧಾ ನರು ಚೋವನಿನಲ್ಲಿ ಇದ್ದರು. ಅವನ ರಾಯಭಾರಿ ಗಳು ಹಾನೇಸಿಗೆ ಬಂದಿದ್ದಾರೆ.
ಸುಳ್ಳುಗಾರರ ಗುರುತುಗಳನ್ನು ನಿರರ್ಥಕಮಾಡುವವನೂ ಕಣಿ ಹೇಳು ವವರನ್ನು ಹುಚ್ಚರನ್ನಾಗಿ ಮಾಡುವವನೂ ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳುವಳಿಕೆಯನ್ನು ಬುದ್ದಿಹೀನ ವಾಗ ಮಾಡುವವನೂ
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ; ಅವರು ತಮ್ಮ ಕೇಡಿನ ನಿಮಿತ್ತ ನನ್ನನ್ನು ಕೂಗುವ ಸಮಯದಲ್ಲಿ ನಾನು ಕೇಳೆನು.
ಆದ ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ--ನೀನು ನಮ್ಮ ಕೈಯಿಂದ ಸಾಯದ ಹಾಗೆ ಕರ್ತನ ಹೆಸರಿನಲ್ಲಿ ಪ್ರವಾದನೆ ಹೇಳಬೇಡ ಎಂದು ಅನ್ನುವವರಿಗೆ ಕರ್ತನು ಹೇಳುವದೇನಂದರೆ--
ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.
ಕೇಡಿನ ಮೇಲೆ ಕೇಡು ಬರು ವದು; ಸುದ್ದಿಯ ಮೇಲೆ ಸುದ್ದಿ ಬರುವದು. ಆಗ ಅವರು ಪ್ರವಾದಿಯ ದರ್ಶನವನ್ನು ಹುಡುಕುವರು. ಆದರೆ ನ್ಯಾಯಪ್ರಮಾಣವು ಯಾಜಕರನ್ನೂ ಆಲೋ ಚನೆಯು ಪೂರ್ವಿಕರನ್ನೂ ಬಿಟ್ಟು ನಾಶವಾಗುವದು.ಅರಸನು ದುಃಖಿಸುವನು, ಪ್ರಧಾನನು ನಿರ್ಗತಿಕನಾ ಗುವನು; ದೇಶದ ಜನರ ಕೈಗಳು ತೊಂದರೆಗೊಳ್ಳು ವವು; ಅವರ ಮಾರ್ಗಗಳ ಪ್ರಕಾರ ಅವರ ಹಾಗೆಯೇ ಮಾಡುವೆನು; ಅವರ ನ್ಯಾಯಗಳ ಪ್ರಕಾರ ಅವರಿಗೆ ನ್ಯಾಯತೀರಿಸುವೆನು. ನಾನೇ ಕರ್ತನೆಂದು ಅವರಿಗೆ ತಿಳಿಯುವದು.
ನಾನು ಪತ್ರೋಸನ್ನು ಹಾಳು ಮಾಡುವೆನು; ಚೋವನಿನಲ್ಲಿ ಬೆಂಕಿಯಿಡುವೆನು, ನೋಪುರದಲ್ಲಿ ನ್ಯಾಯಗಳನ್ನು ತೀರಿಸುವೆನು.
ಕರ್ತನು ಅನ್ನುವದೇನಂದರೆ--ನಾನು ಆ ದಿನದಲ್ಲಿ ಎದೋಮಿ ನೊಳಗಿಂದ ಜ್ಞಾನಿಗಳನ್ನೂ ಏಸಾವನ ಬೆಟ್ಟದೊಳಗಿಂದ ವಿವೇಕವನ್ನೂ ನಾಶಮಾಡದಿರುವೆನೋ?
ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.
ನಾನು ಜ್ಞಾನಿಗಳ ಜ್ಞಾನವನ್ನು ನಾಶಮಾಡುವೆನು; ವಿವೇಕಿಗಳ ವಿವೇಕವನ್ನು ಇಲ್ಲದಂತಾಗ ಮಾಡುವೆನು ಎಂದು ಬರೆಯಲ್ಪಟ್ಟಿದೆ.