Home Bibles ಯೆಶಾಯ 19:13 · ಕನ್ನಡ ಬೈಬಲ್
ಯೆಶಾಯ 19:13 · ಕನ್ನಡ ಬೈಬಲ್

ಚೋಯನಿನ ಶ್ರೇಷ್ಠರು (ಪ್ರಧಾನರು) ಮೂರ್ಖರಾಗಿದ್ದಾರೆ. ನೋಫಿನ ಶ್ರೇಷ್ಠರು ಮೋಸ ಹೋಗಿದ್ದಾರೆ. ಐಗುಪ್ತದ ಗೋತ್ರಗಳ ಪ್ರಮುಖರು ಅದನ್ನು ಭ್ರಮೆಗೊಳಿಸಿ ತಪ್ಪುದಾರಿಗೆಳೆದಿದ್ದಾರೆ.

Cross references

ಅಂಕೆಗಳ ಪುಸ್ತಕ 24:17

ನಾನು ಅವನನ್ನು ನೋಡು ವೆನು, ಈಗಲ್ಲ; ಅವನನ್ನು ದೃಷ್ಟಿಸುವೆನು, ಸವಿಾಪದಲ್ಲಿ ಅಲ್ಲ; ಯಾಕೋಬನಿಂದ ನಕ್ಷತ್ರ ಉದಯಿಸುವದು; ಇಸ್ರಾಯೇಲ್‌ನಿಂದ ರಾಜದಂಡ ಏಳುವದು; ಅದು ಮೋವಾಬಿನ ಮೂಲೆಗಳನ್ನು ಹೊಡೆದು ಶೇತನ ಸಕಲ ಮಕ್ಕಳನ್ನು ಸಂಹರಿಸುವದು.

1 ಸಮುವೇಲ 14:38

ಆಗ ಸೌಲನು--ಜನರ ಎಲ್ಲಾ ಮುಖ್ಯಸ್ಥರೇ, ಇಲ್ಲಿ ಬನ್ನಿರಿ; ಈಹೊತ್ತು ಈ ಪಾಪ ಯಾವದರಿಂದ ಉಂಟಾಯಿತೆಂದು ತಿಳುಕೊಂಡು ನೋಡಿರಿ.

ಯೆಶಾಯ 19:11

ಚೋಯನಿನ ಪ್ರಧಾನರು ನಿಜ ವಾಗಿ ಮೂರ್ಖರು, ಫರೋಹನ ಜ್ಞಾನವುಳ್ಳ ಸಲಹೆ ಗಾರರ ಆಲೋಚನೆಯು ಬುದ್ಧಿಹೀನವೇ. ನಾನು ಜ್ಞಾನಿಗಳ ಮಗನೆಂದು ಪುರಾತನ ರಾಜವಂಶಿಯನು ಎಂದು ನೀವು ಫರೋಹನಿಗೆ ಹೇಳುವದು ಹೇಗೆ?

ಯೆರೆಮಿಯ 2:16

ನೋಫ್‌ ಮತ್ತು ತಪನೆಯ ಮಕ್ಕಳೂ ಸಹ ನಿನ್ನ ತಲೆಯ ಕಿರೀಟವನ್ನು ಮುರಿದುಬಿಟ್ಟಿದ್ದಾರೆ.

ಯೆರೆಮಿಯ 44:1

ಯೆಹೂದದ ಅರಸನಾದ ಯೋಷೀಯನ ಮಗನಾದ ಯೆಹೋಯಾಕೀಮನ ನಾಲ್ಕನೇ ವರುಷದಲ್ಲಿ ನೇರೀಯನ ಮಗನಾದ ಬಾರೂಕನ ಈ ಮಾತುಗಳನ್ನು ಯೆರೆವಿಾಯನ ಬಾಯಿಂದ ಬಂದ ಹಾಗೆ ಪುಸ್ತಕದಲ್ಲಿ ಬರೆದ ಮೇಲೆ ಯೆರೆವಿಾಯನು ಅವನಿಗೆ ಹೇಳಿದ ವಾಕ್ಯವೆನಂದರೆ,

ಯೆಹೆಜ್ಕೇಲ 30:13

ದೇವರಾದ ಕರ್ತನು ಹೀಗೆ ಹೇಳುತ್ತಾನೆ. ನಾನು ವಿಗ್ರಹಗಳನ್ನು ಹಾಳು ಮಾಡಿ ಬೊಂಬೆಗಳನ್ನು ನೋಫಿನಲ್ಲಿ ತೀರಿಸಿಬಿಡುವೆನು; ಐಗುಪ್ತದೇಶದ ಪ್ರಭುವು ಇನ್ನು ಇರುವದಿಲ್ಲ, ನಾನು ಐಗುಪ್ತ ದೇಶದಲ್ಲಿ ಭಯವನ್ನು ಉಂಟುಮಾಡುತ್ತೇನೆ.

ಯೆಹೆಜ್ಕೇಲ 30:16

ನಾನು ಐಗುಪ್ತಕ್ಕೆ ಕಿಚ್ಚನ್ನು ಹೆಚ್ಚಿಸಲು ಸೀನ್‌ ಪ್ರಾಣಸಂಕಟಪಡುವದು, ನೋಪುರವು ಭಾಗಭಾಗ ವಾಗಿ ಸೀಳಲ್ಪಡುವದು, ನೋಫಿನ ಮೇಲೆ ಪ್ರತಿ ದಿನವೂ ಇಕ್ಕಟ್ಟು ಇರುವದು.

ಹೊಶೇಯ 9:6

ಅವರು ಹಾಳಾದ ದೇಶವನ್ನು ಬಿಟ್ಟು ಹೋಗುವರು; ಐಗುಪ್ತವು ಅವರನ್ನು ಕೂಡಿಸುವದು, ಮೋಫ್‌ ಪಟ್ಟಣವು ಅವರನ್ನು ಹೂಣುವದು; ಅಪೇಕ್ಷಿ ಸಲ್ಪಟ್ಟ ಅವರ ಬೆಳ್ಳಿಯ ಒಡವೆಗಳು ದಬ್ಬೆಗಳ್ಳಿಗಳ ಪಾಲಾಗುವವು. ತುರುಚಿಯ ಗಿಡಗಳು ಅವರನ್ನು ಆವರಿಸಿಕೊಂಡಿವೆ; ಮುಳ್ಳುಗಳು ಅವರ ಗುಡಾರಗಳಲ್ಲಿ ಇರುವವು.

ಜೆಕರ್ಯ 10:4

ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.

ರೋಮಾಪುರದವರಿಗೆ 1:22

ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚ ರಾದರು;

1 ಪೇತ್ರ 2:7

ಆದದರಿಂದ ನಂಬುವವರಾದ ನಿಮಗೆ ಆತನು ಅಮೂಲ್ಯನಾಗಿದ್ದಾನೆ. ಅವಿಧೇಯರಿಗಾ ದರೋ ಮನೆಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.

Interlinear

Choose Theme