ಇದ ಲ್ಲದೆ ಐಗುಪ್ತವನ್ನು ಕ್ರೂರನಾದ ಒಡೆಯನ ಕೈಗೆ ಒಪ್ಪಿಸುವೆನು; ಭಯಂಕರನಾದ ರಾಜನು ಅವರ ನ್ನಾಳುವನು ಎಂದು ಸೈನ್ಯಗಳ ಕರ್ತನಾದ ಕರ್ತನು ಹೇಳುತ್ತಾನೆ.
Cross references
ದಾವೀದನು ಕೆಯಾಲಾಕ್ಕೆ ಬಂದಿದ್ದಾನೆಂದು ಸೌಲನಿಗೆ ತಿಳಿಸಲ್ಪಟ್ಟಾಗ ಸೌಲನು--ದೇವರು ಅವನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟನು, ಯಾಕಂದರೆ ಅವನು ಬಾಗಲುಗಳೂ ಅಗುಳಿಗಳೂ ಇರುವ ಪಟ್ಟಣದ ಒಳಗೆ ಪ್ರವೇಶಿಸಿದ್ದರಿಂದ ಮುಚ್ಚಲ್ಪಟ್ಟಿ ದ್ದಾನೆ ಅಂದುಕೊಂಡನು.
ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿಬಿಡಲಿಲ್ಲ; ನನ್ನ ಪಾದಗಳನ್ನು ಅಗಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀ.
ಇದಲ್ಲದೆ ನಾನು ಐಗುಪ್ತಕ್ಕೆ ವಿರೋಧವಾಗಿ ಐಗುಪ್ತ ವನ್ನು ಎಬ್ಬಿಸುವೆನು; ಸಹೋದರನಿಗೆ ವಿರೋದವಾಗಿ ಸಹೋದರನೂ ನೆರೆಯವನಿಗೆ ವಿರೋದವಾಗಿ ನೆರೆ ಯವನೂ ಪಟ್ಟಣಕ್ಕೆ ವಿರೋಧವಾಗಿ ಪಟ್ಟಣವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಹೋರಾಡುವವು.
ಕರ್ತನು ಹೇಳಿದ್ದೇನಂದರೆ, ನನ್ನ ಸೇವಕ ನಾದ ಯೆಶಾಯನು ಐಗುಪ್ತಕ್ಕೂ ಐಥಿಯೋಪಿ ಯಕ್ಕೂ ಗುರುತಾಗಿಯೂ ಆಶ್ಚರ್ಯವಾಗಿಯೂ ಹೀಗೆ ಮೂರು ವರ್ಷ ಬೆತ್ತಲೆಯಾಗಿ ಕೆರವಿಲ್ಲದೆ ನಡೆದನು.
ಹಾಗೆಯೇ ಅಶ್ಶೂರಿನ ಅರಸನು ಐಗುಪ್ತ್ಯರನ್ನು ಬಂಧಿಸಿ ಐಥಿಯೋಪಿಯಾದ ಕೈದಿಗಳನ್ನು ಅವರು ದೊಡ್ಡವರಾಗಲಿ ಸಣ್ಣವರಾಗಲಿ ಬಟ್ಟೆ ಕೆರಗಳಿಲ್ಲದೆ ಬರಿ ಕುಂಡಿಯವರಾಗಿ ಐಗುಪ್ತದ ಮಾನಭಂಗಕ್ಕೋ ಸ್ಕರ ಸೆರೆಗೆ ನಡೆಯುವಂತೆ ಮಾಡುವನು.
ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.