Home Bibles ☰ Books ಯೆಶಾಯ 2:13 · ಕನ್ನಡ ಬೈಬಲ್
ಯೆಶಾಯ 2:13 · ಕನ್ನಡ ಬೈಬಲ್

ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಏಲಾಮರಗಳ ಮೇಲೆಯೂ

Cross references

ಕೀರ್ತನೆಗಳು 29:5

ಕರ್ತನ ಸ್ವರವು ದೇವ ದಾರುಗಳನ್ನು ಮುರಿಯುತ್ತದೆ; ಹೌದು, ಕರ್ತನು ಲೆಬನೋನಿನ ದೇವದಾರುಗಳನ್ನು ಮುರಿಯುತ್ತಾನೆ.

ಯೆಶಾಯ 10:33

ಇಗೋ, ಕರ್ತನೂ ಸೈನ್ಯಗಳ ಕರ್ತನು ಭಯಂಕರ ವಾಗಿ ಕೊಂಬೆಯನ್ನು ಕತ್ತರಿಸುವನು. ಉನ್ನತ ವೃಕ್ಷಗಳು ಕಡಿದು ಕೆಳಗೆ ಬೀಳುವವು; ಗರ್ವಿಷ್ಠರು ತಗ್ಗಿಸಲ್ಪಡು ವರು.ಆತನು ಅಡವಿಯ ಪೊದೆಗಳನ್ನು ಕಬ್ಬಿಣ ದಿಂದ ಕಡಿದುಬಿಡುವನು; ಲೆಬನೋನು ಒಬ್ಬ ಬಲಿಷ್ಠ ನಿಂದ ಬಿದ್ದುಹೋಗುವದು.

ಯೆಶಾಯ 14:8

ಹೌದು, ತುರಾಯಿ ಮರಗಳೂ ಲೆಬನೋನಿನ ದೇವದಾರು ಮರಗಳೂ ನೀನು ಬಿದ್ದಂದಿನಿಂದ ಕಡಿಯುವವನು ಯಾವನೂ ತಮ್ಮ ಮೇಲೆ ಬರಲಿಲ್ಲವೆಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.

ಯೆಶಾಯ 37:24

ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ--ನನ್ನ ರಥಸಮೂಹದೊಡನೆ ಪರ್ವತ ಶಿಖರಗಳನ್ನು ಹತ್ತಿದ್ದೇನೆ; ಲೆಬನೋನಿನ ಭಾಗಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು, ಶ್ರೇಷ್ಠವಾದ ತುರಾಯಿ ಮರಗಳನ್ನು ಕಡಿದುಬಿಟ್ಟಿದ್ದೇನೆ; ಅಂಚಿನ ಉನ್ನತವಾದ ಸ್ಥಳವನ್ನೂ ಮತ್ತು ಅದರ ಕರ್ಮೇಲಿನ ಅಡವಿಯನ್ನೂ ಪ್ರವೇಶಿಸಿದ್ದೇನೆ;

ಯೆಹೆಜ್ಕೇಲ 31:3

ಇಗೋ, ಅಶ್ಶೂರ್ಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವ ದಾರು ಆಗಿದೆ. ಅದರ ನೆರಳು ದಟ್ಟವಾಗಿದೆ, ಎತ್ತರವು ನೀಳವಾಗಿದೆ; ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.

ಆಮೋಸ 2:5

ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.

ಜೆಕರ್ಯ 11:1

ಓ ಲೆಬನೋನೇ, ಬೆಂಕಿ ನಿನ್ನ ದೇವದಾರುಗಳನ್ನು ನುಂಗುವ ಹಾಗೆ ನಿನ್ನ ಬಾಗಲು ಗಳನ್ನು ತೆರೆ.

ಜೆಕರ್ಯ 11:2

ತುರಾಯಿ ಗಿಡವೇ, ಗೋಳಿಡು; ದೇವದಾರು ಬಿದ್ದುಹೋಯಿತು, ಬಲವಾದವುಗಳು ಹಾಳಾದವು; ಬಾಷಾನಿನ ಓಕ್‌ ಮರಗಳೇ, ಗೋಳಾ ಡಿರಿ; ದ್ರಾಕ್ಷೆಯ ಅಡವಿಯು ಇಳಿದು ಬಂದಿದೆ.

Interlinear

Choose Theme