Home Bibles ಯೆಶಾಯ 21:9 · ಕನ್ನಡ ಬೈಬಲ್
ಯೆಶಾಯ 21:9 · ಕನ್ನಡ ಬೈಬಲ್

ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್‌ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.

Cross references

ಯೆಶಾಯ 13:19

ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್‌ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.

ಯೆಶಾಯ 14:4

ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.

ಯೆಶಾಯ 46:1

ಬೇಲ್‌(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು.

ಯೆರೆಮಿಯ 50:2

ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.

ಯೆರೆಮಿಯ 50:9

ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.

ಯೆರೆಮಿಯ 50:29

ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.

ಯೆರೆಮಿಯ 50:38

ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು, ಸಿಂಹದ ಮರಿಗಳ ಹಾಗೆ ಶಬ್ದ ಮಾಡುವರು.

ಯೆರೆಮಿಯ 50:42

ಬಾಬೆಲಿನ ಮೇಲೆ ಸಮುದ್ರವು ಬಂತು; ಅದರ ತೆರೆಗಳ ಸಮೂಹದಿಂದ ಮುಚ್ಚಲ್ಪಟ್ಟಿದೆ.

ಯೆರೆಮಿಯ 51:8

ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.

ಯೆರೆಮಿಯ 51:27

ಆಗ ಬಾಬೆಲಿನ ಅರಸನು ಅವರನ್ನು ಹೊಡಿಸಿ, ಹಮಾತ್‌ ದೇಶದ ರಿಬ್ಲದಲ್ಲಿ ಕೊಂದು ಹಾಕಿಸಿದನು. ಈ ಪ್ರಕಾರ ಯೆಹೂದನು ತನ್ನ ದೇಶದಿಂದ ಸೆರೆಯಾಗಿ ಒಯ್ಯಲ್ಪಟ್ಟನು.

ಪ್ರಕಟನೆ 14:8

ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.

ಪ್ರಕಟನೆ 18:2

ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್‌ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.

ಪ್ರಕಟನೆ 18:21

ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.

Interlinear

Choose Theme