ತಾರ್ಷೀಷಿನ ಮಗಳೇ, ನದಿಯಂತೆ ನಿನ್ನ ದೇಶದಲ್ಲಿ ಹಾದುಹೋಗು, ಅಲ್ಲಿ ಇನ್ನು ಬಲವು ಇರುವುದೇ ಇಲ್ಲ.
Cross references
ಆಗ ಸೌಲನು ನೆಲದ ಮೇಲೆ ಬೋರ್ಲ ಬಿದ್ದು ಸಮುವೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯ ಪಟ್ಟನು. ಆ ದಿನವೆಲ್ಲಾ ಊಟ ಮಾಡದೆ ಇದ್ದದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು.
ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾನೆ; ಬಲಿಷ್ಠರ ಬಲವನ್ನು ಕುಂದಿಸುತ್ತಾನೆ.
ಪರಾ ಕ್ರಮದಿಂದ ನನ್ನ ನಡುವನ್ನು ಕಟ್ಟಿ ನನ್ನ ಮಾರ್ಗವನ್ನು ಸಂಪೂರ್ಣ ಮಾಡುವ ದೇವರು ಆತನೇ.
ತಾರ್ಷೀಷಿನ ಹಡಗುಗಳೇ, ಗೋ ಳಾಡಿರಿ! ನಮ್ಮ ಆಶ್ರಯಸ್ಥಾನವು ಹಾಳಾಯಿತು.
ಚೀಯೋನಿನ ಮಗಳ ಎಲ್ಲಾ ಸೌಂದರ್ಯವು ಅವಳನ್ನು ಬಿಟ್ಟು ಹೋಯಿತು. ಅವಳ ಪ್ರಧಾನರು ಮೇವು ಕಾಣದ ಜಿಂಕೆಗಳ ಹಾಗಾದರು. ಅವರು ಹಿಂದಟ್ಟುವವನ ಮುಂದೆ ತ್ರಾಣವಿಲ್ಲದವರ ಹಾಗೆ ಹೋದರು.
ರಾಜ್ಯಗಳ ಸಿಂಹಾಸನವನ್ನು ಕೆಡವಿಹಾಕುವೆನು; ಅನ್ಯ ಜನಾಂಗಗಳ ರಾಜ್ಯಗಳ ಬಲವನ್ನು ನಾಶಮಾಡುವೆನು, ರಥಗಳನ್ನೂ ಅವುಗಳಲ್ಲಿ ಸವಾರಿ ಮಾಡುವವರನ್ನೂ ಕೆಡವಿಹಾಕುವೆನು; ಕುದುರೆಗಳೂ ಅದರ ಸವಾರರೂ ಪ್ರತಿಯೊಬ್ಬನೂ ತನ್ನ ಸಹೋದರನ ಕತ್ತಿಯಿಂದ ಬೀಳು ವನು.ಸೈನ್ಯಗಳ ಕರ್ತನು ಅನ್ನುತ್ತಾನೆ--ಆ ದಿನದಲ್ಲಿ ಶೆಯಲ್ತೀಯೇಲನ ಮಗನಾದ ನನ್ನ ಸೇವಕನಾದ ಜೆರು ಬ್ಬಾಬೆಲನೇ, ಆ ದಿನದಲ್ಲಿ ನಾನು ನಿನ್ನನ್ನು ತೆಗೆದು ಕೊಂಡು ಮುದ್ರೆಯ ಹಾಗೆ ಇಡುವೆನು; ನಿನ್ನನ್ನು ನಾನೇ ಆದುಕೊಂಡಿದ್ದೇನೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇಮಿತ ಕಾಲ ದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು.