ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸದ ಅವರ ಶಬ್ದವು ಕೊನೆಗೊಂಡಿತು. ಕಿನ್ನರಿಯ ಆನಂದ ಸ್ವರವು ತೀರಿತು.
Cross references
ಇಗೋ, ಆ ರಾತ್ರಿಯು ಒಂಟಿಯಾಗಿರಲಿ; ಆನಂದ ಸ್ವರವು ಅದಕ್ಕೆ ಬಾರದಿರಲಿ.
ಅದರ ನಡುವೆ ಇರುವ ನೀರವಂಜಿ ಮರಗಳ ಮೇಲೆ ನಮ್ಮ ಕಿನ್ನರಿಗಳನ್ನು ತೂಗಹಾಕಿದೆವು.
ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
ಆ ದಿವಸದಲ್ಲಿ ಆಗುವದೇನಂದರೆ, ತೂರ್ ಪಟ್ಟಣವು ಒಬ್ಬ ಅರಸನ ದಿವಸಗಳ ಪ್ರಕಾರ ಎಪ್ಪತ್ತು ವರುಷಗಳ ತನಕ (ಮೂಲ ದಿನಗಳು) ಜ್ಞಾಪಕಕ್ಕೆ ಬಾರದೇ ಇರುವದು; ಎಪ್ಪತ್ತು ವರುಷಗಳ ಕೊನೆಯಲ್ಲಿ ತೂರ್ ಪಟ್ಟಣವು ಸೂಳೆಯರ ವಿಷಯವಾದ ಗೀತೆಯ ಹಾಗಾಗುವದು.
ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾ ಗಿಯೂ ಮಹಾದುಷ್ಟತನದ್ದೂ ಆಗಿದೆ, ಅದನ್ನು ತಿಳಿಯುವವನಾರು?
ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.
ಆಗ ನಿನ್ನ ಹಾಡು ಗಳ ಶಬ್ದವನ್ನು ನಿಲ್ಲಿಸುವೆನು, ಇನ್ನು ನಿನ್ನ ಕಿನ್ನರಿಗಳ ಧ್ವನಿ ಕೇಳಲ್ಪಡುವದಿಲ್ಲ.
ನಾನು ಅವಳ ಉಲ್ಲಾಸವನ್ನೆಲ್ಲಾ ಅಂದರೆ ಅವಳ ಹಬ್ಬ ಅವಳ ಅಮಾವಾಸ್ಯೆ ಅವಳ ಸಬ್ಬತ್ತು ಅವಳ ಪರಿಶುದ್ಧ ಹಬ್ಬಗಳನ್ನೆಲ್ಲಾ ನಿಲ್ಲಿಸಿಬಿಡುವೆನು.
ಅದರಿಂದ ಸೆರೆಗೆ ಒಯ್ಯಲ್ಪಡುವವರಿಗೆ ಮೊದಲು ತಾವೇ ಸೆರೆಗೆ ಹೋಗುವರು; ಭೋಗ ಮಾಡುವವರ ಹರ್ಷಧ್ವನಿಯು ಬಿಟ್ಟು ಹೋಗುವದು.
ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ.