Home Bibles ☰ Books ಯೆಶಾಯ 26:11 · ಕನ್ನಡ ಬೈಬಲ್
ಯೆಶಾಯ 26:11 · ಕನ್ನಡ ಬೈಬಲ್

ಕರ್ತನೇ, ನಿನ್ನ ಕೈ ಎತ್ತಿರಲು ಅವರು ನೋಡುವದಿಲ್ಲ, ಆದರೆ ಅವರು ನೋಡಿ ನಿನ್ನ ಜನರಿಗೋಸ್ಕರ ಹೊಟ್ಟೆಕಿಚ್ಚು ಪಟ್ಟದ್ದಕ್ಕೆ ನಾಚಿಕೆ ಪಡುವರು. ಹೌದು, ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.

Cross references

ನಿರ್ಗಮಕಾಂಡ 9:14

ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.

1 ಸಮುವೇಲ 5:6

ಆದರೆ ಕರ್ತನ ಕೈ ಅಷ್ಡೋದಿನವರ ಮೇಲೆ ಭಾರ ವಾಗಿದ್ದು ಅವರನ್ನು ನಾಶಮಾಡಿ ಅಷ್ಡೋದನ್ನೂ ಅದರ ಮೇರೆಗಳನ್ನೂ ಗಡ್ಡೆರೋಗದಿಂದ ಹೊಡೆದನು.

1 ಸಮುವೇಲ 6:9

ಅದು ತನ್ನ ಮೇರೆಯಾದ ಬೇತ್ಷೆಮೆಷಿನ ಮಾರ್ಗವನ್ನು ಹಿಡಿದು ಹೋದರೆ ಆತನು ಈ ದೊಡ್ಡ ಕೇಡನ್ನು ನಮಗೆ ಮಾಡಿದ್ದಾನೆ; ಇಲ್ಲದೆ ಹೋದರೆ ಆತನ ಹಸ್ತವು ನಮ್ಮನ್ನು ಮುಟ್ಟಲಿಲ್ಲ; ಅದು ನಮಗೆ ಪ್ರಾಪ್ತಿಯಾಯಿತೆಂದು ತಿಳುಕೊಳ್ಳಿರಿ ಅಂದರು.

ಯೋಬ 34:27

ಅವರು ಆತನಿಂದ ಹಿಂತಿರುಗಿ ಆತನ ಮಾರ್ಗಗಳನ್ನು ಲಕ್ಷಿಸಲಿಲ್ಲ.

ಕೀರ್ತನೆಗಳು 10:12

ಓ ಕರ್ತನೇ, ಏಳು; ಓ ದೇವ ರೇ, ನಿನ್ನ ಕೈ ಎತ್ತು, ದೀನರನ್ನು ಮರೆತು ಬಿಡಬೇಡ.

ಕೀರ್ತನೆಗಳು 21:8

ನಿನ್ನ ಶತ್ರು ಗಳೆಲ್ಲಾ ನಿನ್ನ ಕೈಗೆ ಸಿಕ್ಕುವರು; ನಿನ್ನ ಬಲಗೈಗೆ ನಿನ್ನನ್ನು ಹಗೆಮಾಡುವವರು ಸಿಕ್ಕುವರು.

ಕೀರ್ತನೆಗಳು 28:5

ಕರ್ತನ ಕೃತ್ಯಗಳನ್ನೂ ಆತನ ಕೈಗಳ ಕೆಲಸವನ್ನೂ ಅವರು ಲಕ್ಷಿಸುವದಿಲ್ಲ, ಆದದರಿಂದ ಅವರನ್ನು ವೃದ್ಧಿಗೊಳಿಸದೆ ನಿರ್ಮೂಲಮಾಡು.

ಕೀರ್ತನೆಗಳು 86:17

ಒಳ್ಳೇದಕ್ಕಾಗಿ ನನಗೆ ಒಂದು ಗುರುತು ಕೊಡು; ಆಗ ನನ್ನ ಹಗೆಮಾಡುವವರು ನೋಡಿ, ನಾಚಿಕೆಪಡುವರು; ಕರ್ತನೇ, ನೀನು ನನಗೆ ಸಹಾಯ ಮಾಡಿ ನನ್ನನ್ನು ಆದರಿಸಿದ್ದೀ.

ಯೆಶಾಯ 5:24

ಅವರು ಸೈನ್ಯಗಳ ಕರ್ತನ ನ್ಯಾಯ ಪ್ರಮಾಣವನ್ನು ನಿರಾಕರಿಸಿದ್ದರಿಂದಲೂ ಇಸ್ರಾಯೇ ಲಿನ ಪರಿಶುದ್ಧನ ವಾಕ್ಯವನ್ನು ಅಸಡ್ಡೆಮಾಡಿದ್ದ ರಿಂದಲೂ ಬೆಂಕಿಯು ಕೊಳ್ಳಿಯನ್ನು ನುಂಗಿಬಿಡುವ ಹಾಗೂ ಜ್ವಾಲೆಯು ಹೊಟ್ಟನ್ನು ಸುಟ್ಟುಬಿಡುವಂತೆಯೂ ಅದರ ಬೇರು ಕೊಳೆಯುವಂತೆಯೂ ಚಿಗುರು ಅವರ ಧೂಳಿನಂತೆಯೂ ತೂರಿಹೋಗುವವು.

ಯೆಶಾಯ 10:16

ಆದಕಾರಣ ಸೈನ್ಯಗಳ ಕರ್ತನಾದ ಕರ್ತನು ಅವನ ಕೊಬ್ಬಿನಲ್ಲಿ ಕ್ಷಯವನ್ನುಂಟುಮಾಡುವನು; ದಹಿ ಸುವ ಅಗ್ನಿಯಂತಿರುವ ಉರಿಯೊಂದು ಅವನ ವೈಭ ವದ ಕೆಳಗೆ ಹತ್ತಿಕೊಳ್ಳುವದು.

ಯೆಶಾಯ 11:13

ಎಫ್ರಾಯಾಮಿನ ಹೊಟ್ಟೇಕಿಚ್ಚು ತೊಲಗಿ ಯೆಹೂದದ ವಿರೋಧಿಗಳು ಕಡಿದುಹಾಕಲ್ಪಡುವರು; ಹೀಗೆ ಎಫ್ರಾಯಾಮು ಯೆಹೂದದ ಮೇಲೆ ಹೊಟ್ಟೇ ಕಿಚ್ಚುಪಡದು, ಯೆಹೂದವು ಎಫ್ರಾಯಾಮನ್ನು ಹಿಂಸಿ ಸದು.

ಯೆಶಾಯ 18:3

ಭೂಲೋಕದ ನಿವಾಸಿಗಳೆಲ್ಲರೇ! ಭೂಮಿಯಲ್ಲಿ ವಾಸ ವಾಗಿರುವವರೆಲ್ಲರೇ! ಬೆಟ್ಟಗಳಲ್ಲಿ ಆತನು ಧ್ವಜವನ್ನು ಎತ್ತುವಾಗ ನೋಡಿರಿ; ಅವನು ತುತೂರಿಯನ್ನೂದು ವಾಗ ಕೇಳಿರಿ.

Interlinear

Choose Theme