ರಾತ್ರಿಯಲ್ಲಿ ನಿನ್ನನ್ನು ಮನಃಪೂರ್ವಕವಾಗಿ ಬಯಸಿದ್ದೇನೆ, ಹೌದು, ನನ್ನಲ್ಲಿ ರುವ ನನ್ನ ಆತ್ಮದೊಂದಿಗೆ ನಿನ್ನನ್ನು ಮುಂಜಾನೆಯಲ್ಲಿ ಹುಡುಕುತ್ತಿದ್ದೇನೆ; ಭೂಮಿಗೆ ನಿನ್ನ ನ್ಯಾಯತೀರ್ವಿಕೆ ಗಳು ನಡೆಯುವಾಗಲೇ ಭೂಲೋಕದ ನಿವಾಸಿಗಳು ನೀತಿಯನ್ನು ಕಲಿಯುತ್ತಾರೆ.
Cross references
ಆದಾಗ್ಯೂ ನನ್ನ ಜೀವದಾಣೆ, ಭೂಮಿಯೆಲ್ಲಾ ಕರ್ತನ ಮಹಿಮೆಯಿಂದ ತುಂಬಿರುವದು.
ಆತನೇ ನಮ್ಮ ದೇವರಾದ ಕರ್ತನಾಗಿದ್ದಾನೆ; ಆತನ ನ್ಯಾಯಗಳು ಸಮಸ್ತ ಭೂಮಿಯಲ್ಲಿ ಅವೆ.
ನಿಶ್ಚಯವಾಗಿ ನೀತಿವಂತನಿಗೆ ಪ್ರತಿಫಲವಿದೆ; ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯ ತೀರಿಸುವ ದೇವರು ಆತನೇ ಎಂದು ಮನುಷ್ಯನು ಹೇಳುವನು.
ಓ ದೇವರೇ, ನೀನೇ ನನ್ನ ದೇವರು ಹೊತ್ತಾರೆ ನಿನ್ನನ್ನು ಹುಡುಕುತ್ತೇನೆ; ನೀರಿಲ್ಲದೆ ಒಣಗಿದ ಭೂಮಿಯಲ್ಲಿದ್ದವನು ನೀರಿ ಗಾಗಿಯೋ ಎಂಬಂತೆ ನನ್ನ ಆತ್ಮವು ನಿನಗಾಗಿ ಆತುರ ಗೊಳ್ಳುತ್ತದೆ; ಶರೀರವು ಕಂದಿಹೋಗುತ್ತದೆ.
ಸಾರದಿಂದಲೂ ಕೊಬ್ಬಿನಿಂದಲೂ ನನ್ನ ಪ್ರಾಣವು ತೃಪ್ತಿಯಾಗುವದು; ಆಗ ನನ್ನ ಬಾಯಿಯು ಉತ್ಸಾಹದ ತುಟಿಗಳಿಂದ ನಿನ್ನನ್ನು ಸ್ತುತಿಸುವದು.
ಎಲ್ಲಾ ಮನುಷ್ಯರು ಭಯಪಟ್ಟು ದೇವರ ಕಾರ್ಯವನ್ನು ತಿಳಿಸುವರು; ಆತನ ಕೆಲಸ ವನ್ನು ಬುದ್ಧಿಯಿಂದ ಗ್ರಹಿಸುವರು;ನೀತಿವಂತನು ಕರ್ತನಲ್ಲಿ ಸಂತೋಷಪಟ್ಟು ಆತನಲ್ಲಿ ಭರವಸವಿ ಡುವನು. ಯಥಾರ್ಥ ಹೃದಯವುಳ್ಳವರೆಲ್ಲರು ಹೆಚ್ಚಳ ಪಡುವರು.
ನನ್ನ ಇಕ್ಕ ಟ್ಟಿನ ದಿವಸದಲ್ಲಿ ಕರ್ತನನ್ನು ಹುಡುಕಿದೆನು; ನಾನು ರಾತ್ರಿಯೆಲ್ಲಾ ವ್ಯಥೆಪಟ್ಟದ್ದರಿಂದ ನನ್ನ ಪ್ರಾಣವು ಆದರಣೆ ಹೊಂದಲೊಲ್ಲದು.
ಅವರನ್ನು ಕೊಲ್ಲುವಾಗ ಅವರು ಆತನನ್ನು ಹುಡುಕಿ ತಿರುಗಿಕೊಂಡು ದೇವರನ್ನು ಹೊತ್ತಾರೆ ವಿಚಾರಿಸಿ
ನೀನು ಮಾತ್ರ ಯೆಹೋವ ನೆಂಬ ಹೆಸರುಳ್ಳ ನೀನು ಸಮಸ್ತ ಭೂಮಿಯ ಮೇಲೆ ಮಹೋನ್ನತನಾಗಿದ್ದೀ ಎಂದು ತಿಳುಕೊಳ್ಳಲಿ.
ನಿನ್ನ ನೀತಿಯ ನ್ಯಾಯವಿಧಿಗಳಿಗೋಸ್ಕರ ನಿನ್ನನ್ನು ಕೊಂಡಾಡುವದಕ್ಕೆ ಮಧ್ಯರಾತ್ರಿಯಲ್ಲಿ ಏಳುತ್ತೇನೆ.
ಉದಯಕ್ಕಾಗಿ ಕಾದುಕೊಳ್ಳುವವ ರಿಗಿಂತ ಹೌದು, ಉದಯಕ್ಕಾಗಿ ಕಾದುಕೊಳ್ಳುವವರಿ ಗಿಂತ ನನ್ನ ಪ್ರಾಣವು ಕರ್ತನಿಗಾಗಿ ನಿರೀಕ್ಷಿಸುತ್ತದೆ.
ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ. ಶೀಘ್ರವಾಗಿ ನನ್ನನ್ನು ಹುಡುಕುವವರು ನನ್ನನ್ನು ಕಂಡುಕೊಳ್ಳುವರು.
ರಾತ್ರಿಯಲ್ಲಿ ನನ್ನ ಹಾಸಿಗೆಯ ಮೇಲೆ ನನ್ನ ಪ್ರಾಣ ಪ್ರಿಯನನ್ನು ಹುಡುಕಿದೆನು; ಅವನನ್ನು ಹುಡುಕಿದೆನು, ಆದರೆ ಕಾಣದೆಹೋದೆನು.