Home Bibles ಯೆಶಾಯ 27:2 · ಕನ್ನಡ ಬೈಬಲ್
ಯೆಶಾಯ 27:2 · ಕನ್ನಡ ಬೈಬಲ್

ಆ ದಿನದಲ್ಲಿ ದ್ರಾಕ್ಷಾ ರಸವುಳ್ಳ ತೋಟದ ವಿಷಯವಾಗಿ ಅವಳಿಗೆ ಹಾಡಿರಿ;

Cross references

ಅಂಕೆಗಳ ಪುಸ್ತಕ 21:17

ಆಗ ಇಸ್ರಾಯೇಲ್ಯರು ಈ ಹಾಡನ್ನು ಹಾಡಿದರು; ಏನಂದರೆ--ಓ ಬಾವಿಯೇ, ಉಕ್ಕು; ಅದಕ್ಕೆ ನೀವು ಹಾಡಿರಿ.

ಕೀರ್ತನೆಗಳು 80:8

ನೀನು ದ್ರಾಕ್ಷೇಗಿಡವನ್ನು ಐಗುಪ್ತದಿಂದ ತಂದಿ; ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿ.

ಕೀರ್ತನೆಗಳು 80:9

ಅದರ ಮುಂದೆ ಸ್ಥಳ ಸಿದ್ಧಮಾಡಿದಿ; ಆಗ ಅದು ಬೇರೂರಿ ದೇಶವನ್ನು ತುಂಬಿತು.

ಯೆಶಾಯ 5:1

ನನ್ನ ಪ್ರಿಯನ ದ್ರಾಕ್ಷೇ ತೋಟದ ವಿಷಯವಾದ ಹಾಡನ್ನು ನನ್ನ ಅತಿ ಪ್ರಿಯನಿಗೆ ನಾನು ಹಾಡುವೆನು. ಫಲವತ್ತಾದ ಗುಡ್ಡದಲ್ಲಿ ನನ್ನ ಅತಿಪ್ರಿಯನಿಗೆ ದ್ರಾಕ್ಷೆಯ ತೋಟವಿದೆ.

ಯೆರೆಮಿಯ 2:21

ಆದಾಗ್ಯೂ ನಾನು ನಿನ್ನನ್ನು ಉತ್ತಮ ದ್ರಾಕ್ಷೇಬಳ್ಳಿಯಾಗಿಯೂ ಪೂರ್ಣ ವಾಗಿ ನಿಜ ಬೀಜವಾಗಿಯೂ ನೆಟ್ಟಿದ್ದೆನು; ಆದರೆ ನೀನು ಹೀಗೆ ನನಗೆ ಅನ್ಯ ದ್ರಾಕ್ಷೇ ಬಳ್ಳಿಯ ಹಾಗೆ ಕೆಟ್ಟುಹೋಗಿ ಬದಲಾದಿ?

ಮತ್ತಾಯ 21:33

ಮತ್ತೊಂದು ಸಾಮ್ಯವನ್ನು ಕೇಳಿರಿ: ಒಬ್ಬ ಮನೇ ಯಜಮಾನನು ದ್ರಾಕ್ಷೇತೋಟವನ್ನು ನೆಟ್ಟು ಅದರ ಸುತ್ತಲೂ ಬೇಲಿಹಾಕಿ ಅದರೊಳಗೆ ತೊಟ್ಟಿಯನ್ನು ಅಗೆದು ಗೋಪುರವನ್ನು ಕಟ್ಟಿ ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ದೂರದೇಶಕ್ಕೆ ಹೋದನು.

ಲೂಕ 20:9

ಇದಲ್ಲದೆ ಆತನು ಜನರಿಗೆ ಈ ಸಾಮ್ಯವನ್ನು ಹೇಳುವದಕ್ಕೆ ಪ್ರಾರಂಭಿಸಿ--ಒಬ್ಬಾನೊಬ್ಬ ಮನುಷ್ಯನು ದ್ರಾಕ್ಷೇತೋಟವನ್ನು ನೆಟ್ಟು ಅದನ್ನು ಒಕ್ಕಲಿಗರಿಗೆ ವಾರಕ್ಕೆ ಕೊಟ್ಟು ಬಹುಕಾಲದ ವರೆಗೆ ಒಂದು ದೂರ ದೇಶಕ್ಕೆ ಹೊರಟುಹೋದನು.

Interlinear

Choose Theme