Home Bibles ಯೆಶಾಯ 28:12 · ಕನ್ನಡ ಬೈಬಲ್
ಯೆಶಾಯ 28:12 · ಕನ್ನಡ ಬೈಬಲ್

ಆತನು ಮೊದಲು--ಇದೇ ನಿಮಗೆ ಅವಶ್ಯಕವಾದ ವಿಶ್ರಾಂತಿ. ಬಳಲಿದವರನ್ನು ವಿಶ್ರಮಗೊಳಿಸಿರಿ, ನಿಮಗೆ ಅನುಕೂಲವಾದ ಉಪ ಶಮನ ಇದೇ ಎಂದು ಹೇಳಿದಾಗ್ಯೂ ಅವರು ಕೇಳ ಲಿಲ್ಲ.

Cross references

2 ದಿನವೃತ್ತಾಂತ 14:11

ಆಗ ಆಸನು ತನ್ನ ದೇವರಾದ ಕರ್ತನನ್ನು ಕರೆದು--ಕರ್ತನೇ, ಅನೇಕರ ಮಧ್ಯದಲ್ಲಿ ಬಲಹೀನರಿಗೆ ಸಹಾಯಕೊಡು ವವನು ನಮ್ಮ ದೇವರಾದ ಕರ್ತನೇ, ನಮಗೆ ಸಹಾಯ ಕೊಡು; ಯಾಕಂದರೆ ನಾವು ನಿನ್ನ ಮೇಲೆ ಆತುಕೊಂಡಿ ದ್ದೇವೆ; ನಿನ್ನ ಹೆಸರಿನಲ್ಲಿ ನಾವು ಈ ಗುಂಪಿನ ಮೇಲೆ ಹೋಗುತ್ತೇವೆ; ಓ ಕರ್ತನೇ, ನಿನ್ನ ಹೊರತು ಬೇರೆ ಯಾರೂ ಇಲ್ಲ, ನೀನೇ ನಮ್ಮ ದೇವರು; ಮನುಷ್ಯನು ನಿನ್ನೆದುರಿನಲ್ಲಿ ಬಲಗೊಳ್ಳದಿರಲಿ ಅಂದನು.

2 ದಿನವೃತ್ತಾಂತ 16:8

ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು.

ಕೀರ್ತನೆಗಳು 81:11

ಆದರೆ ನನ್ನ ಜನರು ನನ್ನ ಸ್ವರವನ್ನು ಕೇಳಲಿಲ್ಲ; ಇಸ್ರಾಯೇಲು ನನ್ನ ಮೇಲೆ ಮನಸ್ಸಿಡಲಿಲ್ಲ.

ಯೆಶಾಯ 11:10

ಆ ದಿನದಲ್ಲಿ ಹುಡುಕುವ ಅನ್ಯಜನರಿಗೆ ಇಷ ಯನ ಬೇರು ಒಂದು ಗುರುತಾಗಿ ನಿಲ್ಲುವದು; ಅವನ ವಿಶ್ರಾಂತಿ ವೈಭವವುಳ್ಳದ್ದಾಗಿರುವದು.

ಯೆಶಾಯ 29:12

ಅಕ್ಷರವಿಲ್ಲದವನಿಗೆ ಆ ಪುಸ್ತಕವನ್ನು ಒಪ್ಪಿಸಿದರೆ ಅವನು--ನನಗೆ ವಿದ್ಯೆಯಿಲ್ಲ ಅನ್ನುವನು.

ಯೆಶಾಯ 30:15

ಇಸ್ರಾಯೇಲಿನ ಪರಿಶುದ್ಧ ಕರ್ತನಾದ ದೇವರು ಹೇಳುವದೇನೆಂದರೆ--ನೀವು ತಿರುಗಿಕೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗು ವದು. ಶಾಂತರಾಗಿ ಭರವಸದಿಂದಿರುವದೇ ನಿಮಗೆ ಬಲ ಎಂದು ಹೇಳಿದ್ದರೂ ನೀವು ಒಪ್ಪಿಕೊಂಡಿಲ್ಲ.

ಯೆರೆಮಿಯ 6:16

ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.

ಜೆಕರ್ಯ 7:11

ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.

ಜೆಕರ್ಯ 7:14

ಇದಲ್ಲದೆ ಅವರು ಅರಿಯದ ಎಲ್ಲಾ ಜನಾಂಗಗಳೊಳಗೆ ಅವರನ್ನು ಸುಂಟರ ಗಾಳಿಯಿಂದ ಚದರಿಸಿಬಿಟ್ಟೆನು. ಹೀಗೆ ಅವರ ಹಿಂದೆ ದೇಶವು ನಾಶವಾಯಿತು; ಹಾದುಹೋಗುವವನೂ ತಿರುಗಿಕೊಳ್ಳುವವನೂ ಇಲ್ಲದೆ ಹೋದರು. ರಮ್ಯವಾದ ದೇಶವನ್ನು ಹಾಳಾಗಿ ಮಾಡಿದರು.

ಮತ್ತಾಯ 11:28

ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.

ಹೆಬ್ರಿಯರಿಗೆ 12:25

ನೀವು ಮಾತನಾಡು ತ್ತಿರುವಾತನನ್ನು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಯಾಕಂದರೆ ಭೂಮಿಯ ಮೇಲೆ ಮಾತನಾಡಿದವನನ್ನು ಅಸಡ್ಡೆ ಮಾಡಿದ್ದಕ್ಕೆ ಅವರು ತಪ್ಪಿಸಿಕೊಳ್ಳದಿದ್ದರೆ ಪರ ಲೋಕದಿಂದ ಮಾತನಾಡುವಾತನಿಂದ ನಾವು ತೊಲಗಿ ದರೆ ಎಷ್ಟೋ ಹೆಚ್ಚಾಗಿ ನಾವು ತಪ್ಪಿಸಿಕೊಳ್ಳಲಾರೆವು.

Interlinear

Choose Theme