ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಪರೀಕ್ಷಿತವಾಗಿಯೂ ಅಮೂಲ್ಯವಾಗಿಯೂ ಇರುವ ಮೂಲೆಗಲ್ಲನ್ನು ಚೀಯೋನಿನಲ್ಲಿ ಸ್ಥಿರವಾದ ಆಸ್ತಿವಾರವನ್ನಾಗಿ ಇಡು ತ್ತೇನೆ; ವಿಶ್ವಾಸವಿಡುವವನು ಆತುರಪಡನು (ಆಶಾ ಭಂಗ ಪಡುವದಿಲ್ಲ).
Cross references
ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.
ಆದರೆ ಅವನ ಬಿಲ್ಲು ಬಲವಾಗಿ ನೆಲೆಸಿತ್ತು. ಅವನ ಕೈತೋಳುಗಳು ಯಾಕೋಬನ ಪರಾಕ್ರಮಿಯಾದ ದೇವರ ಕೈಗಳಿಂದ,
ಅವರು ಉದಯದಲ್ಲಿ ಎದ್ದು ತೆಕೋವದ ಅರ ಣ್ಯಕ್ಕೆ ಹೊರಟರು. ಅವರು ಹೊರಟು ಹೋಗುತ್ತಿ ರುವಾಗ ಯೆಹೋಷಾಫಾಟನು ನಿಂತುಕೊಂಡು--ಓ ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ನನ್ನ ಮಾತನ್ನು ಕೇಳಿರಿ. ನಿಮ್ಮ ದೇವರಾದ ಕರ್ತನನ್ನು ನಂಬಿಕೊಳ್ಳಿರಿ, ಸ್ಥಿರವಾಗಿರ್ರಿ; ಆತನ ಪ್ರವಾದಿಗಳನ್ನು ನಂಬಿಕೊಳ್ಳಿರಿ; ಆಗ ಜಯಹೊಂದುವಿರಿ ಅಂದನು.
ಅವನು ಕೆಟ್ಟಸುದ್ದಿಗೆ ಭಯಪಡನು; ಅವನ ಹೃದಯವು ಕರ್ತನಲ್ಲಿ ಭರವಸವಿಟ್ಟು ಸ್ಥಿರವಾಗಿದೆ.
ಮನೆ ಕಟ್ಟುವವರು ತಳ್ಳಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
ಹೀಗಿರಲು ಕರ್ತನು ನಿಮಗೆ ಕೃಪೆಯನ್ನು ತೋರಿಸ ಬೇಕೆಂದು ಕಾದಿರುವನು. ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು. ಕರ್ತನು ನ್ಯಾಯಾಧಿಪತಿಯಾದ ದೇವರಾಗಿದ್ದಾನೆ. ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
ಆ, ಕಲ್ಲು ಕೈಗಳ ಸಹಾಯವಿಲ್ಲದೆ ಬೆಟ್ಟದೊಳಗಿಂದ ಒಡೆಯಲ್ಪಟ್ಟು ಕಬ್ಬಿಣವನ್ನೂ ಹಿತ್ತಾಳೆಯನ್ನೂ ಮಣ್ಣನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಧ್ವಂಸ ಮಾಡಿತೆಂದು ನೀನು ನೋಡಿದ್ದು ಇದೇ. ಮಹಾದೇವರು ಇನ್ನು ಮೇಲೆ ಸಂಭವಿಸುವಂಥದ್ದನ್ನು ಅರಸನಿಗೆ ತಿಳಿಯಪಡಿಸಿ ದ್ದಾನೆ; ಕನಸು ನಿಶ್ಚಯವಾಗಿದೆ; ಅದರ ಅರ್ಥಗಳೂ ಸತ್ಯವಾಗಿವೆ ಅಂದನು.
ದರ್ಶನವು ಇನ್ನು ನೇಮಕವಾದ ಕಾಲಕ್ಕೆ ಉಂಟು; ಆದರೆ ಕಡೆಯಲ್ಲಿ ಅದು ಸುಳ್ಳಾಗದೆ ಮಾತನಾಡುವದು; ಅದು ತಡವಾ ದರೂ ಅದಕ್ಕೆ ಕಾದುಕೊಂಡಿರು; ಅದು ತಡಮಾಡದೆ ನಿಶ್ಚಯವಾಗಿ ಬರುವದು.
ನಾನು ಯೆಹೋಶುವನ ಮುಂದೆ ಇಟ್ಟಿರುವ ಕಲ್ಲನ್ನು ನೋಡು. ಒಂದು ಕಲ್ಲಿನ ಮೇಲೆ ಏಳು ಕಣ್ಣುಗಳು ಇರುವವು; ಇಗೋ, ನಾನು ಅದರ ಕೆತ್ತನೆಯಿಂದ ಕೆತ್ತುವೆನು; ಆ ದೇಶದ ಅಪರಾಧ ವನ್ನು ಒಂದೇ ದಿನದಲ್ಲಿ ತೊಲಗಿಸುವೆನು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.ಆ ದಿನದಲ್ಲಿ ನೀವು ನಿಮ್ಮ ನಿಮ್ಮ ನೆರೆಯವರನ್ನು ದ್ರಾಕ್ಷೇಬಳ್ಳಿಯ ಕೆಳಗೂ ಅಂಜೂರ ಮರದ ಕೆಳಗೂ ಕರೆಯುವಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
ಆತ ನಿಂದ ಮೂಲೆಗಲ್ಲೂ ಆತನಿಂದ ಮೊಳೆಯೂ ಆತನಿಂದ ಯುದ್ಧದ ಬಿಲ್ಲೂ ಆತನಿಂದ ಹಿಂಸಿಸುವವರೆಲ್ಲರೂ ಕೂಡಿಕೊಂಡು ಹೊರಡುತ್ತಾರೆ.
ಯೇಸು ಅವರಿಗೆ--ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು; ಮತ್ತು ಇದು ಕರ್ತನಿಂದಲೇ ಆಯಿತು. ಅದು ನಮ್ಮ ದೃಷ್ಟಿಯಲ್ಲಿ ಆಶ್ಚರ್ಯವಾದದ್ದು ಎಂದು ಬರಹಗಳಲ್ಲಿ ಎಂದಾದರೂ ನೀವು ಓದಲಿಲ್ಲವೋ?
ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು.
ಆಗ ಆತನು ಅವರನ್ನು ನೋಡಿ--ಹಾಗಾದರೆ ಮನೇ ಕಟ್ಟುವವರು ತಿರಸ್ಕರಿಸಿದ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರು ವದು ಏನು?
ಮನೆ ಕಟ್ಟುವವರಾದ ನಿಮ್ಮಿಂದ ಹೀನೈಸಲ್ಪಟ್ಟ ಈ ಕಲ್ಲೇ ಮುಖ್ಯವಾದ ಮೂಲೆಗಲ್ಲಾ ಯಿತು.
ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.
ಹಾಕಿರುವ ಅಸ್ತಿವಾರವು ಯೇಸು ಕ್ರಿಸ್ತನೇ; ಆ ಅಸ್ತಿವಾರವನ್ನಲ್ಲದೆ ಮತ್ತೊಂದು ಅಸ್ತಿವಾರವನ್ನು ಯಾರೂ ಹಾಕಲಾರರಷ್ಟೆ.
ಅಪೊಸ್ತಲರೂ ಪ್ರವಾದಿಗಳೂ ಎಂಬ ಅಸ್ತಿವಾರದ ಮೇಲೆ ನೀವು ಕಟ್ಟಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನೇ ಮುಖ್ಯ ವಾದ ಮೂಲೆಗಲ್ಲು;
ಸಹೋದರರೇ, ಕರ್ತನು ಬರುವ ತನಕ ದೀರ್ಘ ಶಾಂತಿಯಿಂದಿರ್ರಿ. ವ್ಯವಸಾಯಗಾರನನ್ನು ನೋಡಿರಿ; ಅವನು ಭೂಮಿಯ ಅಮೂಲ್ಯವಾದ ಫಲಕ್ಕಾಗಿ ಕಾದಿದ್ದು ಮುಂಗಾರು ಹಿಂಗಾರು ಮಳೆಗಳು ಬರುವ ತನಕ ದೀರ್ಘಶಾಂತಿಯಿಂದಿರುವನು.
ಇದಲ್ಲದೆ--ಇಗೋ, ಚೀಯೋನಿನಲ್ಲಿ ಮೂಲೆ ಗಲ್ಲನ್ನು ಇಡುತ್ತೇನೆ; ಅದು ಆಯಲ್ಪಟ್ಟದ್ದು, ಅಮೂಲ್ಯ ವಾದದ್ದು; ಆತನ ಮೇಲೆ ನಂಬಿಕೆಯಿಡುವವನು ಆಶಾಭಂಗ ಪಡುವದೇ ಇಲ್ಲ ಎಂದು ಬರಹದಲ್ಲಿ ಇರುತ್ತದೆ.