ಯೆಶಾಯ 28:25 · ಕನ್ನಡ ಬೈಬಲ್
ಅದರ ಮೇಲ್ಭಾಗವನ್ನು ಹಸನು ಮಾಡಿದ ಮೇಲೆ ಅಗಸೆಯನ್ನು ಚೆಲ್ಲಿ ಜೀರಿಗೆಯನ್ನು ಚದರಿಸಿ ಗೋದಿಯನ್ನು ಸಾಲು ಸಾಲಾಗಿಯೂ ಜವೆ ಗೋಧಿಯನ್ನು ನೇಮಕವಾದ ಸ್ಥಳದಲ್ಲಿಯೂ ಕಡಲೆ ಯನ್ನು ಅಂಚಿನಲ್ಲಿಯೂ ಹಾಕುವನಲ್ಲವೇ.
Cross references
ನಿರ್ಗಮಕಾಂಡ 9:31
ಈ ಮೇರೆಗೆ ಜವೆಗೋದಿಗೆ ತೆನೆಗಳೂ ಸೆಣಬಿಗೆ ಮೊಗ್ಗೆಗಳೂ ಇದ್ದದರಿಂದ ಸೆಣಬೂ ಜವೆಗೋದಿಯೂ ಹಾಳಾದವು.
ಯೆಹೆಜ್ಕೇಲ 4:9
ಇದಲ್ಲದೆ ನೀನು ಗೋಧಿ, ಬಾರ್ಲಿ, ಅವರೆ, ಅಲ ಸಂದಿ, ನವಣೆ, ಸಜ್ಜೆಗಳನ್ನು ತೆಗೆದುಕೊಂಡು ಅವುಗಳನ್ನು ಒಂದು ಮಡಿಕೆಯಲ್ಲಿಟ್ಟು ನೀನು ನಿನ್ನ ಪಾರ್ಶ್ವದಲ್ಲಿ ಮಲಗುವ ದಿವಸಗಳ ಲೆಕ್ಕದ ಪ್ರಕಾರ ನಿನಗಾಗಿ ರೊಟ್ಟಿಯನ್ನು ಮಾಡಿಕೊಂಡು ಮುನ್ನೂರ ತೊಂಭತ್ತು ದಿನಗಳು ಅದರಿಂದಲೇ ತಿನ್ನಬೇಕು.
ಮತ್ತಾಯ 23:23
ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ನೀವು ಮರುಗ ಸೋಪು ಜೀರಿಗೆ ಗಳಲ್ಲಿ ದಶಮ ಭಾಗವನ್ನು ಸಲ್ಲಿಸುತ್ತೀರಿ. ಆದರೆ ನ್ಯಾಯ ಪ್ರಮಾಣದ ತೀರ್ಪು ಕರುಣೆ ನಂಬಿಕೆ ಎಂಬ ಈ ಪ್ರಾಮುಖ್ಯವಾದವುಗಳನ್ನು ಬಿಟ್ಟುಬಿಟ್ಟಿದ್ದೀರಿ. ಇವುಗ ಳೊಂದಿಗೆ ಆ ಬೇರೆಯವುಗಳನೂ