Home Bibles ಯೆಶಾಯ 29:11 · ಕನ್ನಡ ಬೈಬಲ್
ಯೆಶಾಯ 29:11 · ಕನ್ನಡ ಬೈಬಲ್

ದರ್ಶನವೆಲ್ಲಾ ನಿಮಗೆ ಮುದ್ರೆ ಹಾಕಿ ದ ವಾಕ್ಯಗಳ ಪುಸ್ತಕದ ಹಾಗಾಯಿತು; ಅದನ್ನು ಅಕ್ಷರ ಬಲ್ಲವನಿಗೆ ಕೊಟ್ಟು ಇದನ್ನು ಓದು ಎಂದು ಬೇಡಿದರೆ ಅವನು--ಮುದ್ರೆ ಹಾಕಿದೆಯಲ್ಲಾ, ಆಗುವದಿಲ್ಲ ಅನ್ನು ವನು;

Cross references

ಯೆಶಾಯ 8:16

ಸಾಕ್ಷಿಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ನ್ಯಾಯ ಪ್ರಮಾಣವನ್ನು ಮುದ್ರಿಸು.

ದಾನಿಯೇಲ 12:4

ಆದರೆ ಓ ದಾನಿಯೇಲನೇ, ನೀನು ಅಂತ್ಯ ಕಾಲದ ವರೆಗೂ ಈ ಮಾತುಗಳನ್ನು ಮುಚ್ಚಿಡು; ಅವುಗಳನ್ನು ಬರೆಯುವ ಆ ಗ್ರಂಥಕ್ಕೆ ಮುದ್ರೆಹಾಕು; ಅನೇಕರು ಅತ್ತಿತ್ತ ಓಡಾಡುವರು ಮತ್ತು ಜ್ಞಾನವು ಹೆಚ್ಚಾಗುವದು ಎಂದು ಹೇಳಿದನು.

ದಾನಿಯೇಲ 12:9

ದಾನಿಯೇಲನೇ, ನಿನ್ನ ದಾರಿಯಲ್ಲಿ ಹೋಗು; ಈ ಮಾತುಗಳು ಅಂತ್ಯಕಾಲದ ವರೆಗೂ ಮುಚ್ಚಲ್ಪಟ್ಟು ಮುದ್ರೆ ಹಾಕಲ್ಪ ಟ್ಟಿವೆ.

ಮತ್ತಾಯ 11:25

ಆ ಸಮಯದಲ್ಲಿ ಯೇಸು--ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಈ ಸಂಗತಿಗಳನ್ನು ಜ್ಞಾನಿಗಳಿಗೂ ಬುದ್ಧಿವಂತ ರಿಗೂ ಮರೆಮಾಡಿ ಶಿಶುಗಳಿಗೆ ಪ್ರಕಟಮಾಡಿ ರುವದಕ್ಕಾಗಿ ನಾನು ನಿನ್ನನ್ನು ಕೊಂಡಾಡುತ್ತೇನೆ.

ಮತ್ತಾಯ 13:11

ಆತನು ಪ್ರತ್ಯುತ್ತರವಾಗಿ ಅವ ರಿಗೆ--ಪರಲೋಕರಾಜ್ಯದ ಮರ್ಮಗಳನ್ನು ತಿಳುಕೊಳ್ಳು ವದಕ್ಕೆ ನಿಮಗೆ ಕೊಡಲ್ಪಟ್ಟಿದೆ; ಆದರೆ ಅವರಿಗೆ ಕೊಡ ಲ್ಪಟ್ಟಿಲ್ಲ.

ಮತ್ತಾಯ 16:17

ಆಗ ಯೇಸು ಪ್ರತ್ಯುತ್ತರವಾಗಿ ಅವನಿಗೆ--ಯೋನನ ಮಗನಾದ ಸೀಮೋನನೇ, ನೀನು ಧನ್ಯನು; ಯಾಕಂದರೆ ರಕ್ತಮಾಂಸವಲ್ಲ (ಮನುಷ್ಯರಲ್ಲ), ಪರಲೋಕದಲ್ಲಿರುವ ನನ್ನ ತಂದೆಯೇ ಅದನ್ನು ನಿನಗೆ ಪ್ರಕಟಿಸಿದನು ಎಂದು ಹೇಳಿದನು.

ಪ್ರಕಟನೆ 5:1

ಸಿಂಹಾಸನದ ಮೇಲೆ ಕೂತಿದ್ದಾತನ ಬಲಗೈಯಲ್ಲಿ ಒಂದು ಪುಸ್ತಕವನ್ನು ಕಂಡೆನು; ಅದರ ಒಳಗೂ ಹಿಂದಿನ ಭಾಗದ ಮೇಲೆಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.

ಪ್ರಕಟನೆ 6:1

ುರಿಮರಿಯಾದಾತನು ಆ ಮುದ್ರೆಗಳಲ್ಲಿ ಒಂದನ್ನು ತೆರೆದದ್ದನ್ನು ನಾನು ನೋಡಿ ದಾಗ ಆ ನಾಲ್ಕು ಜೀವಿಗಳಲ್ಲಿ ಒಂದು--ಬಂದು ನೋಡು ಎಂದು ಗುಡುಗಿನಂತಿದ್ದ ಒಂದು ಶಬ್ದವನ್ನು ಕೇಳಿದೆನು.

Interlinear

Choose Theme