ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿ ಕೊಳ್ಳುವಾಗ ಇದೇ ಮಾರ್ಗ, ಇದರಲ್ಲೇ ನಡೆಯಿರಿ ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವದು.
Cross references
ಹೀಗಿರುವದರಿಂದ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದಂತೆ ಕೈಕೊಂಡು ನಡೆಯಬೇಕು; ಎಡಕ್ಕಾದರೂ ಬಲಕ್ಕಾದರೂ ತಿರುಗಬೇಡಿರಿ.ನೀವು ಬದುಕುವ ಹಾಗೆಯೂ ನಿಮಗೆ ಒಳ್ಳೆಯದಾಗುವ ಹಾಗೆಯೂ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಿಮ್ಮ ದೇವರಾದ ಕರ್ತನು ನಿಮಗೆ ಆಜ್ಞಾಪಿಸಿದ ಮಾರ್ಗ ಗಳಲ್ಲಿ ನಡಕೊಳ್ಳಬೇಕು.
ನನ್ನ ಸೇವಕನಾದ ಮೋಶೆಯು ನಿನಗೆ ಆಜ್ಞಾಪಿಸಿದ ನ್ಯಾಯ ಪ್ರಮಾಣವೆಲ್ಲಾದರ ಪ್ರಕಾರ ನೀನು ಕೈಕೊಂಡು ನಡೆ ಯುವ ಹಾಗೆ ಬಲವಾಗಿರು, ಬಹು ಧೈರ್ಯದಿಂದಿರು, ನೀನು ಹೋಗುವ ಸ್ಥಳದಲ್ಲೆಲ್ಲಾ ಸಫಲವಾಗುವ ಹಾಗೆ ಅದನ್ನು (ನ್ಯಾಯಪ್ರಮಾಣವನ್ನು) ಬಿಟ್ಟು ಬಲ ಕ್ಕಾದರೂ ಎಡಕ್ಕಾದರೂ ತಿರುಗಬೇಡ.
ಈಗ ನೀವು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನು ಕೈಕೊಂಡು ಬಹು ಧೈರ್ಯದಿಂದ ಮಾಡುವ ಹಾಗೆ ಅದನ್ನು ಬಿಟ್ಟು ಬಲಗಡೆಗಾದರೂ ಎಡಗಡೆಗಾದರೂ ತಿರುಗದೆ
ಉತ್ತಮವಾದ ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.
ಅವನು ಕರ್ತನ ದೃಷ್ಟಿಗೆ ಒಳ್ಳೆಯದ್ದನ್ನು ಮಾಡಿ ತನ್ನ ತಂದೆಯಾದ ದಾವೀದನ ಎಲ್ಲಾ ಮಾರ್ಗಗಳಲ್ಲಿ ಬಲ, ಎಡ ಪಾರ್ಶ್ವವಾಗಿ ತಿರುಗದೆ ನಡೆದನು.
ಕರ್ತನು ಒಳ್ಳೆಯವನೂ ನ್ಯಾಯವುಳ್ಳವನೂ ಆಗಿ ದ್ದಾನೆ; ಆದದರಿಂದ ಆತನು ಪಾಪದ ಮಾರ್ಗದಲ್ಲಿ ಇರುವವರಿಗೆ ಬೋಧಿಸುವನು.
ನಾನು -- ನಿನಗೆ ಬುದ್ದಿ ಹೇಳುವೆನು; ನೀನು ಹೋಗತಕ್ಕ ಮಾರ್ಗವನ್ನು ನಿನಗೆ ಬೋಧಿಸುವೆನು; ನನ್ನ ಕಣ್ಣಿನಿಂದ ನಿನ್ನನ್ನು ನಡಿಸುವೆನು.
ಹೊತ್ತಾರೆಯಲ್ಲಿ ನಿನ್ನ ಪ್ರೀತಿಕರುಣೆಯನ್ನು ನಾನು ಕೇಳುವಂತೆ ಮಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ; ನಾನು ಹೋಗಬೇಕಾದ ಮಾರ್ಗವನ್ನು ನನಗೆ ತಿಳಿಯಪಡಿಸು; ನಿನ್ನ ಕಡೆಗೆ ನನ್ನ ಪ್ರಾಣವನ್ನು ಎತ್ತುತ್ತೇನೆ.
ಪೂರ್ಣಹೃದಯದಿಂದ ಕರ್ತನಲ್ಲಿ ಭರವಸವಿಡು; ನಿನ್ನ ಸ್ವಂತ ಬುದ್ಧಿಯ ಮೇಲೆ ಆಧಾರ ಮಾಡಿಕೊಳ್ಳಬೇಡ.
ನಿನ್ನ ಬಲಕ್ಕಾಗಲಿ ಎಡಕ್ಕಾಗಲಿ ತಿರುಗಬೇಡ; ಕೇಡಿನಿಂದ ನಿನ್ನ ಪಾದವನ್ನು ತಪ್ಪಿಸು.
ತಪ್ಪಿದ ಆತ್ಮವುಳ್ಳವರು ವಿವೇಕಿಗಳಾಗುವರು. ಗುಣುಗುಟ್ಟುವವರು ಬೋಧನೆ ಕಲಿಯುವರು.
ಅಲ್ಲಿ ರಾಜ ಮಾರ್ಗವಿರುವದು, ಅದು ಪರಿಶುದ್ಧ ಮಾರ್ಗವೆನಿಸಿಕೊಳ್ಳುವದು; ಯಾವ ಅಶು ದ್ಧನು ಅದರ ಮೇಲೆ ಹಾದುಹೋಗನು; ಅವರಿಗೋ ಸ್ಕರವೇ ಇರುವದು; ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಕುರುಡರನ್ನು ಅವರು ತಿಳಿಯದ ಮಾರ್ಗದಲ್ಲಿ ಬರಮಾಡುವೆನು. ಅವರನ್ನು ತಿಳಿಯದ ಹಾದಿಗಳಲ್ಲಿ ನಡಿಸುವೆನು; ಕತ್ತಲೆಯನ್ನು ಅವರ ಮುಂದೆ ಬೆಳಕಾಗಿಯೂ ಸೊಟ್ಟಾದವುಗಳನ್ನು ನೆಟ್ಟಗಾಗಿಯೂ ಮಾಡುವೆನು. ಇವುಗಳನ್ನು ನಾನು ಅವರಿಗೋಸ್ಕರ ಮಾಡುವೆನು. ನಾನು ಅವರನ್ನು ಕೈಬಿಡುವದಿಲ್ಲ.
ನಿನ್ನ ವಿಮೋಚ ಕನೂ ಇಸ್ರಾಯೇಲಿನ ಪರಿಶುದ್ಧನೂ ಆಗಿರುವ ಕರ್ತನು ಹೀಗೆನ್ನುತ್ತಾನೆ--ನಿನ್ನ ಉಪಯೋಗಕ್ಕಾಗಿ ನಿನಗೆ ಬೋಧಿಸುವವನೂ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡಿಸುವವನೂ ಆದ ನಾನೇ ನಿನ್ನ ಕರ್ತನೂ ನಿನ್ನ ದೇವರೂ ಆಗಿದ್ದೇನೆ.
ಕರ್ತನು ನಿನ್ನನ್ನು ನಿತ್ಯವೂ ನಡಿಸುತ್ತಾ ಮಳೆಯಿಲ್ಲದ ಕಾಲದಲ್ಲಿ ನಿನ್ನ ಪ್ರಾಣವನ್ನು ತೃಪ್ತಿಗೊಳಿಸಿ ನಿನ್ನ ಎಲುಬುಗಳನ್ನು ಬಲಪಡಿಸುವನು ಮತ್ತು ನೀನು ನೀರು ಹಾಕಿದ ತೋಟದ ಹಾಗೆಯೂ ಮುಗಿಯದ ಜಲಬುಗ್ಗೆಯ ಹಾಗೆಯೂ ಇರುವಿ.
ಆದದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ; ಅವರಿಗೋಸ್ಕರ ಮೊರೆ ಯನ್ನೂ ಪ್ರಾರ್ಥನೆಯನ್ನೂ ಎತ್ತಬೇಡ ಇಲ್ಲವೆ ನನಗೆ ವಿಜ್ಞಾಪನೆ ಮಾಡಬೇಡ; ನಾನು ಅದನ್ನು ಕೇಳಿಸಿಕೊಳ್ಳು ವದಿಲ್ಲ.
ಆದರೆ ನೀವು ಪವಿತ್ರನಾಗಿರುವಾತನಿಂದ ಅಭಿಷೇಕವನ್ನು ಹೊಂದಿದ ವರಾಗಿದ್ದು ಎಲ್ಲವನ್ನು ತಿಳಿದವರಾಗಿದ್ದೀರಿ.
ಆದರೆ ಆತನಿಂದ ನೀವು ಹೊಂದಿದ ಅಭಿಷೇಕವು ನಿಮ್ಮಲ್ಲಿ ನೆಲೆಗೊಂಡಿರುವದರಿಂದ ಯಾವನಾದರೂ ನಿಮಗೆ ಉಪದೇಶಮಾಡುವದು ಅವಶ್ಯವಿಲ್ಲ. ಆ ಅಭಿಷೇಕವೇ ಎಲ್ಲಾ ವಿಷಯಗಳಲ್ಲಿ ನಿಮಗೆ ಉಪದೇಶ ಮಾಡುವಂಥ ದಾಗಿದ್ದು ಸತ್ಯವಾಗಿದೆ. ಸುಳ್ಳಲ್ಲ, ಅದು ನಿಮಗೆ ಉಪದೇಶ ಮಾಡಿದ ಪ್ರಕಾರವೇ ಆತನಲಿ