Home Bibles ☰ Books ಯೆಶಾಯ 30:3 · ಕನ್ನಡ ಬೈಬಲ್
ಯೆಶಾಯ 30:3 · ಕನ್ನಡ ಬೈಬಲ್

ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.

Cross references

ಸಾಮೇತಿಗಳು 25:19

ಕಷ್ಟ ಕಾಲದಲ್ಲಿ ಅಪನಂಬಿಗಸ್ಥನಾದ ಮನುಷ್ಯನಲ್ಲಿಯ ಭರವಸವು ಮುರಿದ ಹಲ್ಲು, ಕೀಲು ತಪ್ಪಿದ ಪಾದವು.

ಯೆಶಾಯ 20:5

ಆಗ (ನನ್ನ ಜನರು) ಅವನು ನಿರೀಕ್ಷಿಸಿಕೊಂಡಿದ್ದ ಐಥಿಯೋ ಪಿಯರ ನಿಮಿತ್ತವಾಗಿಯೂ ತಮ್ಮ ವೈಭವದ ಐಗುಪ್ತದ ವಿಷಯವಾಗಿಯೂ ಬೆಚ್ಚಿ ಬೆರಗಾಗಿ ನಾಚಿಕೆಪಡು ವರು.ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.

ಯೆಶಾಯ 30:5

ತಮಗೆ ಪ್ರಯೋ ಜನವಾಗದೆ ಸಹಾಯಕ್ಕೂ ಪ್ರಯೋಜನಕ್ಕೂ ಅಲ್ಲ, ನಿಂದೆಗೂ ನಾಚಿಕೆಗೂ ಇರುವ ಜನಕ್ಕೆ ಎಲ್ಲರೂ ನಾಚಿಕೆಪಡುತ್ತಾರೆ.

ಯೆಶಾಯ 36:6

ಜಜ್ಜಿದ ದಂಡಿಗೆ ಸಮಾನವಾದ ಐಗುಪ್ತವೆಂಬ ಕೋಲಿನ ಮೇಲೆ ಭರವಸವಿಟ್ಟಿರುತ್ತಿಯಷ್ಟೆ; ಒಬ್ಬನು ಅಂತ ಕೋಲನ್ನು ಊರಿಕೊಳ್ಳುವದಾದರೆ ಅದು ಅವನ ಕೈಯೊಳಕ್ಕೆ ಹೋಗಿ ತಿವಿಯುತ್ತದೆ. ಐಗುಪ್ತದ ಅರಸ ನಾದ ಫರೋಹನು ತನ್ನಲ್ಲಿ ನಂಬಿಕೆ ಇಟ್ಟುಕೊಳ್ಳುವ ವರೆಲ್ಲರಿಗೆ ಹೀಗೆ ಇದ್ದಾನೆ.

ಯೆಶಾಯ 45:16

ಅವರೆಲ್ಲರೂ ನಾಚಿಕೆಪಟ್ಟು ನಿಂದಿತರಾಗುವರು. ವಿಗ್ರಹಗಳನ್ನು ಮಾಡುವವರು ಒಟ್ಟಾಗಿ ಗಲಿಬಿಲಿಗೆ ಒಳಗಾಗುವರು.

ಯೆರೆಮಿಯ 2:36

ನಿನ್ನ ಮಾರ್ಗವನ್ನು ಬೇರೆಮಾಡಿಕೊಳ್ಳುವಷ್ಟು ಏಕೆ ತಿರುಗಾಡುತ್ತೀ? ನೀನು ಅಶ್ಶೂರಿನ ನಿಮಿತ್ತ ನಾಚಿಕೆ ಪಟ್ಟ ಹಾಗೆ ಐಗುಪ್ತದ ನಿಮಿತ್ತವೂ ನಾಚಿಕೆಪಡುವಿ.ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಹೊರಟುಹೋಗುವಿ; ಕರ್ತನು ನಿನ್ನ ಭರವಸೆಗಳನ್ನು ತಿರಸ್ಕರಿಸಿದ್ದಾನೆ, ಅವುಗಳಲ್ಲಿ ನಿನಗೆ ಸಫಲವಾಗುವದಿಲ್ಲ.

ಯೆರೆಮಿಯ 17:5

ಆಗ ಕರ್ತನ ವಾಕ್ಯವು ನನಗೆ ಉಂಟಾಗಿ ಹೇಳಿದ್ದೇನಂದರೆ--

ಯೆರೆಮಿಯ 37:5

ಆಗ ಅರಸನಾದ ಚಿದ್ಕೀಯನು ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡಬಲ್ಲವ ನಲ್ಲ ಅಂದನು.

ಯೆರೆಮಿಯ 37:7

ಆಗ ಅರಸನ ಮನೆಯಲ್ಲಿರುವ ಕಂಚುಕಿಯಾದ ಎಬೆದೆಲ್ಮೆಕನೆಂಬ ಕೂಷ್ಯನು ಯೆರೆವಿಾಯನನ್ನು ಅವರು ಕುಣಿಯಲ್ಲಿ ಹಾಕಿದರೆಂದು ಕೇಳಿದಾಗ ಅರಸನು ಬೆನ್ಯಾವಿಾನನ ಬಾಗಲಲ್ಲಿ ಕೂತಿರಲಾಗಿ,

ಯೆಹೆಜ್ಕೇಲ 29:7

ಇಸ್ರಾಯೇಲ್ಯರು ನಿನ್ನ ಮೇಲೆ ಕೈಯಿಡಲು ನೀನು ಮುರಿದು ಅವರ ಹೆಗಲನ್ನು ಚುಚ್ಚಿದಿ; ಅವರು ನಿನ್ನನ್ನು ಊರಿಕೊಂಡಾಗ ನೀನು ಒಡೆದು ಅದರ ನಡುವುಗಳನ್ನೆಲ್ಲಾ ನಿಲ್ಲಿಸಿಬಿಟ್ಟೆ.

ರೋಮಾಪುರದವರಿಗೆ 5:5

ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.

ರೋಮಾಪುರದವರಿಗೆ 10:11

ಆತನ ಮೇಲೆ ನಂಬಿಕೆ ಇಡುವ ಯಾವನಾದರೂ ನಾಚಿಕೆಪಡುವದಿಲ್ಲ ಎಂದು ಬರಹವು ಹೇಳುತ್ತದೆ.

Interlinear

Choose Theme