ಈಗ ಹೋಗಿ ಇದನ್ನು ಅವರ ಮುಂದೆ ಹಲಗೆ ಯಲ್ಲಿ ಬರೆ. ಮುಂದೆ ಬರುವ ನಿತ್ಯಕಾಲಕ್ಕಾಗಿ ಪುಸ್ತಕ ದಲ್ಲಿ ಇದನ್ನು ರಚಿಸು.
Cross references
ಬಾ, ಈ ಜನರು ನಿನ್ನ ಜನರಿಗೆ ಕಡೇ ದಿವಸಗಳಲ್ಲಿ ಏನು ಮಾಡುವರೋ ಅದನ್ನು ನಿನಗೆ ತಿಳಿಸುವೆನು ಅಂದನು.
ನೀನು ಇಕ್ಕಟ್ಟಿಗೆ ಗುರಿಯಾಗಿ ಇವೆಲ್ಲವುಗಳು ನಿನಗೆ ಸಂಭವಿಸಿದಾಗ ಕಡೇ ದಿವಸ ಗಳಲ್ಲಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು
ಹೀಗಿರುವದರಿಂದ ಈಗ ಈ ಹಾಡನ್ನು ಬರೆದು ಕೊಳ್ಳಿರಿ; ಇಸ್ರಾಯೇಲ್ ಮಕ್ಕಳಿಗೆ ಅದನ್ನು ಕಲಿಸು; ಇಸ್ರಾಯೇಲ್ ಮಕ್ಕಳಲ್ಲಿ ಈ ಹಾಡು ನನಗೆ ಸಾಕ್ಷಿಯಾ ಗಿರುವ ಹಾಗೆ ಅದನ್ನು ಅವರ ಬಾಯಿಗಳಲ್ಲಿ ಇಡು.
ಆದದರಿಂದ ಮೋಶೆ ಅದೇ ದಿವಸದಲ್ಲಿ ಈ ಹಾಡನ್ನು ಬರೆದು ಇಸ್ರಾಯೇಲ್ ಮಕ್ಕಳಿಗೆ ಕಲಿಸಿದನು.
ನಾನು ಸತ್ತ ಮೇಲೆ ನೀವು ಪೂರ್ಣವಾಗಿ ನಿಮ್ಮನ್ನು ನೀವು ಕೆಡಿಸಿ ಕೊಂಡು ನಾನು ನಿಮಗೆ ಆಜ್ಞಾಪಿಸಿದ ಮಾರ್ಗದಿಂದ ತೊಲಗಿ ಹೋಗುವಿರೆಂದು ನಾನು ಬಲ್ಲೆನು; ನೀವು ಕರ್ತನ ಮುಂದೆ ಕೆಟ್ಟದ್ದನ್ನು ಮಾಡಿ ನಿಮ್ಮ ಕ್ರಿಯೆಗಳಿಂದ ಆತನಿಗೆ ಕೋಪವನ್ನೆಬ್ಬಿಸುವ ಕಾರಣ ಕಡೇ ದಿವಸಗಳಲ್ಲಿ ನಿಮಗೆ ಕೇಡುಸಂಭವಿಸುವದು ಎಂದು ಹೇಳಿದನು.ಆಗ ಮೋಶೆ ಇಸ್ರಾಯೇಲ್ ಸಭೆಗೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಹೇಳಿ ಮುಗಿಸಿದನು.
ಹಾ! ನನ್ನ ಮಾತುಗಳು ಬರಯಲ್ಪಟ್ಟಿದ್ದರೆ, ಅವು ಪುಸ್ತಕದಲ್ಲಿ ರಚಿಸಲ್ಪಟ್ಟಿದ್ದರೆ
ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
ಇದಲ್ಲದೆ ಕರ್ತನು ನನಗೆ -- ಒಂದು ದೊಡ್ಡ ಸುರುಳಿಯನ್ನು ತೆಗೆದುಕೊಂಡು ಮನುಷ್ಯನ ಲೇಖನಿಯಿಂದಲೇ ಮಹೇರ್ ಶಾಲಾಲ್ ಹಾಷ್ ಬಜ್ (ಅಂದರೆ ಸೂರೆಗೆ ಆತುರ, ಕೊಳ್ಳೆಗೆ ಅವಸರ) ವಿಷಯವಾಗಿ ಬರೆ ಅಂದನು.
ಆದರೆ ಕರ್ತನು ಪ್ರವಾದಿಯಾದ ಯೆರೆವಿಾಯನಿಂದ ಹೇಳಿಸಿದ ವಾಕ್ಯಗಳಿಗೆ ಅವನೂ ಅವನ ಸೇವಕರೂ ದೇಶದ ಜನರೂ ಕಿವಿಗೊಡಲಿಲ್ಲ.
ಆಗ ಯೆರೆವಿಾಯನು ಜನರೊಳಗೆ ಬರುತ್ತಾ ಹೋಗುತ್ತಾ ಇದ್ದನು; ಯಾಕಂದರೆ ಅವರು ಅವನನ್ನು ಸೆರೆಮನೆಯಲ್ಲಿ ಇಡಲಿಲ್ಲ.
ನೀನು ದೇಶವನ್ನು ಮುಚ್ಚುವ ಮೇಘದಂತೆ ನನ್ನ ಜನರಾಗಿರುವ ಇಸ್ರಾಯೇಲ್ಯರಿಗೆ ವಿರೋಧವಾಗಿ ಅವರ ಮೇಲೆ ಬರುವಿ; ಇದು ನಡೆ ಯುವ ಕೊನೆಯ ದಿವಸಗಳಲ್ಲಿ ಓ ಗೋಗನೇ, ನಾನು ಅವರ ಕಣ್ಣುಗಳ ಮುಂದೆ ನಿನ್ನಲ್ಲಿ ಪರಿಶುದ್ಧನಾಗುವಾಗ, ಅನ್ಯಜನಾಂಗಗಳು ನನ್ನನ್ನು ತಿಳಿಯುವ ಹಾಗೆ ನಿನ್ನನ್ನು ನನ್ನ ದೇಶಕ್ಕೆ ಬರಮಾಡುವೆನು.
ಆಮೇಲೆ ಇಸ್ರಾಯೇಲಿನ ಮಕ್ಕಳು ತಿರುಗಿಕೊಂಡು ಅವರ ದೇವ ರಾದ ಕರ್ತನನ್ನು ಮತ್ತು ಅವರ ಅರಸನಾದ ದಾವೀದ ನನ್ನು ಹುಡುಕಿಕೊಂಡು ಅಂತ್ಯ ದಿವಸಗಳಲ್ಲಿ ಕರ್ತನನ್ನೂ ಆತನ ದಯೆಯನ್ನೂ ಭಯದಿಂದ ಮರೆಹೋಗುವರು.
ಆಗ ಕರ್ತನು ನನಗೆ ಉತ್ತರಕೊಟ್ಟು ಹೇಳಿದ್ದೇ ನಂದರೆ--ದರ್ಶನವನ್ನು ಬರೆ; ಓದುವವನು ಶೀಘ್ರ ವಾಗಿ ಓದುವಂತೆ ಅದನ್ನು ಹಲಗೆಗಳ ಮೇಲೆ ಕೆತ್ತು.
ಕಡೇಕಾಲಗಳಲ್ಲಿ ಕೆಲವರು ವಂಚಿಸುವ ಆತ್ಮಗಳಿಗೂ ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ನಂಬಿಕೆಯಿಂದ ತೊಲಗಿಹೋಗುವ ರೆಂದು ಆತ್ಮನು ಸ್ಪಷ್ಟವಾಗಿ ಹೇಳುತ್ತಾನೆ.
ಕಡೇ ದಿವಸಗಳಲ್ಲಿ ತಮ್ಮ ದುರಾಶೆಗಳ ಪ್ರಕಾರ ನಡೆಯುವ ಕುಚೋದ್ಯಗಾರರು ಬಂದು--
ಭಕ್ತಿಗೆ ವಿರುದ್ಧವಾದ ತಮ್ಮ ಆಶೆಗಳನ್ನು ಅನುಸರಿಸಿ ನಡೆಯುವ ಕುಚೋದ್ಯಗಾರರು ಅಂತ್ಯಕಾಲದಲ್ಲಿ ಇರುವರೆಂದು ಅವರು ನಿಮಗೆ ಹೇಳಿದರು.