ನೀನು ಕೇಳಕೂಡದ ಹಾಗೆ ಕಠಿಣವಾದ ಭಾಷೆಯೂ ತಿಳಿಯಕೂಡದ ಹಾಗೆ ಅಪರೂಪವಾದ ಮಾತೂ ಆಡಿದ ಜನರನ್ನು ನೀನು ನೋಡದೆ ಇರುವಿ.
Cross references
ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.
ಕರ್ತನು ದೂರದಿಂದ ಅಂದರೆ ಭೂಮಿಯ ಅಂತ್ಯದಿಂದ ಹಾರುವ ಹದ್ದಿಗೆ ಸಮಾನವಾದ ಜನಾಂಗ ವನ್ನೂ ನಿನಗೆ ತಿಳಿಯದ ಭಾಷೆಯ ಜನಾಂಗವನ್ನೂ
ಆದ ದರಿಂದ ಕರ್ತನು ಅಶ್ಶೂರಿನ ಅರಸನನ್ನು ಕುರಿತು ಹೇಳುವದೇನಂದರೆ--ಅವನು ಈ ಪಟ್ಟಣದಲ್ಲಿ ಬರು ವದಿಲ್ಲ; ಅಲ್ಲಿ ಬಾಣವನ್ನು ಎಸೆಯುವದಿಲ್ಲ; ಗುರಾಣಿ ಹಿಡಿದುಕೊಂಡು ಅದರ ಮುಂದೆ ಸೇರುವದಿಲ್ಲ; ಅದಕ್ಕೆ ವಿರೋಧವಾಗಿ ದಿನ್ನೆಯನ್ನು ಹಾಕುವದಿಲ್ಲ.
ತೊದಲು ಮಾತಿನವರು ಅನ್ಯಭಾಷಿಗಳು ಇವರ ಮೂಲಕವಾಗಿಯೇ ಆತನು ಈ ಜನರ ಸಂಗಡ ಮಾತನಾಡುತ್ತಾನೆ.
ಅವನು ಬಂದ ದಾರಿಯಿಂದಲೇ ಹಿಂತಿರುಗಿ ಹೋಗುವನು ಈ ಪಟ್ಟಣಕ್ಕೆ ಬರುವದೇ ಇಲ್ಲ.
ಆಗ ಅಶ್ಶೂರದ ಅರಸನಾದ ಸನ್ಹೇರೀಬನು ಹಿಂತಿರುಗಿ ನಿನವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿ ದನು.ತರುವಾಯ ಅವನು ತನ್ನ ದೇವರಾದ ನಿಸ್ರೋಕನ ಮನೆಯಲ್ಲಿ ಪೂಜಿಸುತ್ತಿದ್ದಾಗ ಅದ್ರಮ್ಮೆ ಲೆಕ್, ಸರೆಚೆರ್ ಎಂಬ ಅವನ ಮಕ್ಕಳು ಅವ ನನ್ನು ಕತ್ತಿಯಿಂದ ಹೊಡೆದು ಅರರಾಟ್ ದೇಶಕ್ಕೆ ತಪ್ಪಿಸಿ ಕೊಂಡು ಹೋದರು; ಅವನಿಗೆ ಬದಲಾಗಿ ಅವನ ಮಗನಾದ ಏಸರ್‌ಹದ್ದೋನನು ಆಳಿದನು.
ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
ನೀನು ಕಠಿಣವಾದ ಭಾಷೆಯಲ್ಲಿ ಸೋಜಿಗದ ಮಾತುಗಳ ನ್ನಾಡುವ ಜನರ ಬಳಿಗೆ ಕಳುಹಿಸದೆ ಇಸ್ರಾಯೇಲಿನ ಮನೆಯವರ ಬಳಿಗೆ ಕಳುಹಿಸಲ್ಪಟ್ಟಿರುವಿ.
ನೀನು ಕಠಿಣ ಭಾಷೆಯಲ್ಲಿ ಸೋಜಿಗದ ಮಾತುಗಳನ್ನಾಡುವವರ ಬಳಿಗೆ ಕಳುಹಿಸಲ್ಪಟ್ಟವನಲ್ಲ; ಇಂಥವರ ಕಡೆಗೆ ನಾನು ನಿನ್ನನ್ನು ಕಳುಹಿಸಿದ್ದ ಪಕ್ಷದಲ್ಲಿ ನಿಶ್ಚಯವಾಗಿ ಅವರು ನಿನ್ನ ಮಾತಿಗೆ ಕಿವಿಗೊಡುತ್ತಿದ್ದರು.
ಬೇರೆ ಭಾಷೆಯವರ ಮೂಲಕವಾಗಿಯೂ ಬೇರೆ ಯವರ ತುಟಿಗಳಿಂದಲೂ ನಾನು ಈ ಜನರೊಂದಿಗೆ ಮಾತನಾಡುವೆನು; ಆದರೂ ಅವರು ನನ್ನ ಮಾತಿಗೆ ಕಿವಿಗೊಡುವದಿಲ್ಲ ಎಂದು ಕರ್ತನು ಹೇಳುತ್ತಾನೆಂಬ ದಾಗಿ ನ್ಯಾಯಪ್ರಮಾಣದಲ್ಲಿ ಬರೆದದೆ.