Home Bibles ಯೆಶಾಯ 37:14 · ಕನ್ನಡ ಬೈಬಲ್
ಯೆಶಾಯ 37:14 · ಕನ್ನಡ ಬೈಬಲ್

ಹಿಜ್ಕೀಯನು ಆ ಸೇವಕರ ಕೈಯಿಂದ ಪತ್ರವನ್ನು ತೆಗೆದುಕೊಂಡು ಅದನ್ನು ಓದಿದನು; ಹಿಜ್ಕೀಯನು ಕರ್ತನ ಆಲಯಕ್ಕೆ ಹೋಗಿ ಅದನ್ನು ಕರ್ತನ ಮುಂದೆ ತೆರೆದಿಟ್ಟು,

Cross references

1 ಅರಸುಗಳು 8:28

ಆದರೆ ನನ್ನ ದೇವರಾದ ಕರ್ತನೇ, ನಿನ್ನ ಸೇವಕನ ಪ್ರಾರ್ಥನೆಗೂ ವಿಜ್ಞಾಪನೆಗೂ ನಿನ್ನ ಸೇವಕನು ನಿನ್ನ ಮುಂದೆ ಪ್ರಾರ್ಥಿಸುವ ಪ್ರಾರ್ಥನೆಯ ಕೂಗನ್ನೂ ಕೇಳು.

1 ಅರಸುಗಳು 8:38

ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು

1 ಅರಸುಗಳು 9:3

ಆಗ ಕರ್ತನು ಅವ ನಿಗೆ--ನೀನು ನನ್ನ ಮುಂದೆ ಮಾಡಿದ ನಿನ್ನ ಪ್ರಾರ್ಥನೆ ಯನ್ನೂ ವಿಜ್ಞಾಪನೆಯನ್ನೂ ನಾನು ಕೇಳಿ ಯುಗ ಯುಗಕ್ಕೂ ನನ್ನ ಹೆಸರು ಅಲ್ಲಿರುವ ಹಾಗೆ ನೀನು ಕಟ್ಟಿಸಿದ ಈ ಮಂದಿರವನ್ನು ಪರಿಶುದ್ಧ ಮಾಡಿದೆನು; ನನ್ನ ಕಣ್ಣುಗಳೂ ನನ್ನ ಹೃದಯವೂ ನಿತ್ಯವಾಗಿ ಅಲ್ಲಿ ರುವವು.

2 ಅರಸುಗಳು 19:14

ಹಿಜ್ಕೀ ಯನು ಸೇವಕರ ಕೈಯಿಂದ ಪತ್ರವನ್ನು ತಕ್ಕೊಂಡು ಓದಿದಾಗ ಹಿಜ್ಕೀಯನು ಕರ್ತನ ಮನೆಗೆ ಹೋಗಿ ಅದನ್ನು ಕರ್ತನ ಮುಂದೆ ಹಾಸಿದನು.

2 ದಿನವೃತ್ತಾಂತ 6:20

ನಿನ್ನ ಸೇವಕನು ಈ ಸ್ಥಳದಲ್ಲಿ ಮಾಡುವ ಪ್ರಾರ್ಥನೆಯನ್ನು ನೀನು ಕೇಳುವ ಹಾಗೆ ಅಲ್ಲಿ ನನ್ನ ಹೆಸರು ಇರುವದೆಂದು ನೀನು ಹೇಳಿದ ಈ ಸ್ಥಳದ ಮೇಲೆಯೂ ಈ ಆಲಯದ ಮೇಲೆಯೂ ಹಗಲಿರುಳು ನಿನ್ನ ಕಣ್ಣುಗಳು ತೆರೆದಿರಲಿ.

ಕೀರ್ತನೆಗಳು 27:5

ಕೇಡಿನ ಸಮಯದಲ್ಲಿ ಆತನು ತನ್ನ ಗುಡಾರದಲ್ಲಿ ನನ್ನನ್ನು ಬಚ್ಚಿಡುವನು. ತನ್ನ ಗುಪ್ತವಾದ ಡೇರೆಯಲ್ಲಿ ನನ್ನನ್ನು ಮರೆಮಾಡುವನು; ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವನು.

ಕೀರ್ತನೆಗಳು 62:1

ನಿಜವಾಗಿ ನನ್ನ ಪ್ರಾಣವು ದೇವರಿಗಾಗಿ ಕಾಯುತ್ತದೆ; ನನ್ನ ರಕ್ಷಣೆಯು ಆತ ನಿಂದಲೇ.

ಕೀರ್ತನೆಗಳು 74:10

ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?

ಕೀರ್ತನೆಗಳು 76:1

ದೇವರು ಯೆಹೂದದಲ್ಲಿ ಪ್ರಸಿದ್ಧವಾಗಿದ್ದಾನೆ; ಇಸ್ರಾಯೇಲಿನಲ್ಲಿ ಆತನ ಹೆಸರು ದೊಡ್ಡದಾಗಿದೆ.

ಕೀರ್ತನೆಗಳು 123:1

ಪರಲೋಕದಲ್ಲಿ ವಾಸವಾಗಿರುವಾತನೇ, ನಿನ್ನ ಕಡೆಗೆ ನನ್ನ ಕಣ್ಣುಗಳನ್ನು ಎತ್ತುತ್ತೇನೆ.

ಕೀರ್ತನೆಗಳು 143:6

ನನ್ನ ಕೈಗಳನ್ನು ನಿನ್ನ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿನಗಾಗಿ ದಾಹಗೊಂಡಿದೆ.

ಯೆಶಾಯ 37:1

ಇದಾದ ಮೇಲೆ ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ ಅವನು ತನ್ನ ಬಟ್ಟೆಗ ಳನ್ನು ಹರಿದುಕೊಂಡು ಗೋಣೀತಟ್ಟಿನಿಂದ ಮುಚ್ಚಿ ಕೊಂಡು ಕರ್ತನ ಆಲಯಕ್ಕೆ ಹೋದನು.

ಯೋವೇಲ 2:17

ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?

Interlinear

Choose Theme