Home Bibles ಯೆಶಾಯ 37:17 · ಕನ್ನಡ ಬೈಬಲ್
ಯೆಶಾಯ 37:17 · ಕನ್ನಡ ಬೈಬಲ್

ಓ ಕರ್ತನೇ, ಕಿವಿಗೊಟ್ಟು ಕೇಳು; ಓ ಕರ್ತನೇ, ನಿನ್ನ ಕಣ್ಣುಗಳನ್ನು ತೆರೆದು ನೋಡು; ಸನ್ಹೇರೀಬನು ಜೀವವುಳ್ಳ ದೇವರನ್ನು ದೂಷಿಸಿ ಕಳುಹಿಸಿದ ಮಾತುಗಳನ್ನೆಲ್ಲಾ ಕೇಳು.

Cross references

2 ಸಮುವೇಲ 16:12

ಒಂದು ವೇಳೆ ಕರ್ತನು ನನ್ನ ಶ್ರಮೆಯನ್ನು ನೋಡಿ ಈ ದಿನ ದಲ್ಲಿ ಅವನು ಮಾಡಿದ ದೂಷಣೆಗೆ ಪ್ರತಿಯಾಗಿ ನನಗೆ ಒಳ್ಳೆಯದನ್ನು ಮಾಡಬಹುದು ಅಂದನು.

2 ದಿನವೃತ್ತಾಂತ 6:40

ಈಗ ನನ್ನ ದೇವರೇ, ಈ ಸ್ಥಳದಲ್ಲಿ ಮಾಡಿದ ಪ್ರಾರ್ಥನೆಗೆ ನಿನ್ನ ಕಣ್ಣುಗಳು ತೆರೆದಿರಲಿ, ನಿನ್ನ ಕಿವಿಗಳು ಆಲೈಸುತ್ತಾ ಇರಲಿ.

2 ದಿನವೃತ್ತಾಂತ 7:15

ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವವು, ನನ್ನ ಕಿವಿಗಳು ಆಲೈಸುತ್ತಿರುವವು.

ಯೋಬ 36:7

ನೀತಿವಂತರಿಂದ ತನ್ನ ಕಣ್ಣುಗಳನ್ನು ತೊಲಗಿಸುವದಿಲ್ಲ. ಅವರು ಅರಸುಗಳ ಸಂಗಡ ಸಿಂಹಾಸನದಲ್ಲಿ ಇದ್ದಾರೆ. ಹೌದು, ಆತನು ಅವರನ್ನು, ಎಂದೆಂದಿಗೂ ಸ್ಥಿರಪಡಿಸುತ್ತಾನೆ. ಅವರು ಉನ್ನತಕ್ಕೇರಿಸಲ್ಪಟ್ಟಿದ್ದಾರೆ.

ಕೀರ್ತನೆಗಳು 10:14

ನೀನು ಅದನ್ನು ನೋಡಿದ್ದೀ; ನಿನ್ನ ಕೈಯಿಂದ ಪ್ರತಿಫಲಕೊಡು ವದಕ್ಕೆ ಅವನ ಕುಯುಕ್ತಿಯನ್ನೂ ಹಗೆತನವನ್ನೂ ದೃಷ್ಟಿ ಸುತ್ತೀ. ಗತಿಯಿಲ್ಲದವನು ನಿನಗೆ ತನ್ನನ್ನು ಒಪ್ಪಿಸುತ್ತಾನೆ; ದಿಕ್ಕಿಲ್ಲದವನಿಗೆ ಸಹಾಯಕನು ನೀನೇ.

ಕೀರ್ತನೆಗಳು 17:6

ಓ ದೇವರೇ, ನನಗೆ ಉತ್ತರ ಕೊಡುವದರಿಂದ ನಾನು ನಿನ್ನನ್ನು ಬೇಡಿಕೊಂಡಿದ್ದೇನೆ; ಯಾಕಂದರೆ ನಿನ್ನ ಕಿವಿಯನ್ನು ನನ್ನ ಕಡೆ ಆಲಿಸಿ ನನ್ನ ಮಾತನ್ನು ಕೇಳು.

ಕೀರ್ತನೆಗಳು 71:2

ನಿನ್ನ ನೀತಿಯಲ್ಲಿ ನನ್ನನ್ನು ಬಿಡಿಸಿ ನನ್ನನ್ನು ತಪ್ಪಿಸು; ನಿನ್ನ ಕಿವಿಯನ್ನು ನನ್ನ ಕಡೆಗೆ ತಿರುಗಿಸಿ ನನ್ನನ್ನು ರಕ್ಷಿಸು.

ಕೀರ್ತನೆಗಳು 74:10

ಓ ದೇವರೇ, ವೈರಿಯು ನಿಂದಿಸುವದು ಎಷ್ಟರ ವರೆಗೆ? ಶತ್ರುವು ನಿನ್ನ ಹೆಸರನ್ನು ಎಂದೆಂದಿಗೂ ದೂಷಿ ಸುವನೋ?

ಕೀರ್ತನೆಗಳು 74:22

ಓ ದೇವರೇ, ಏಳು; ನಿನ್ನ ಸ್ವಂತ ವ್ಯಾಜ್ಯವನ್ನು ವಿವಾದಿಸು; ದಿನವೆಲ್ಲಾ ಮೂರ್ಖನು ನಿನ್ನನ್ನು ಹೇಗೆ ನಿಂದಿಸುತ್ತಾನೆಂದು ಜ್ಞಾಪ ಕಮಾಡಿಕೋ.ನಿನ್ನ ವೈರಿಗಳ ಸ್ವರವನ್ನು ಮರೆತು ಬಿಡಬೇಡ; ನಿನ್ನ ವಿರೋಧಿಗಳ ಘೋಷವು ಯಾವಾ ಗಲೂ ಏಳುತ್ತದೆ.

ಕೀರ್ತನೆಗಳು 79:12

ಓ ಕರ್ತನೇ, ಅವರು ನಿನ್ನನ್ನು ನಿಂದಿಸಿದ ನಿಂದೆ ಯನ್ನು ನಮ್ಮ ನೆರೆಯವರಿಗೆ ಏಳರಷ್ಟು ಅವರ ಉಡಿ ಯಲ್ಲಿ ತಿರಿಗಿ ಹಾಕು.ಆಗ ನಿನ್ನ ಜನರೂ ನಿನ್ನ ಹುಲ್ಲುಗಾವಲಿನ ಕುರಿಗಳೂ ಆಗಿರುವ ನಾವು ಎಂದೆಂದಿಗೂ ನಿನ್ನನ್ನು ಕೊಂಡಾಡಿ ತಲತಲಾಂತರಕ್ಕೂ ನಿನ್ನ ಸ್ತೋತ್ರವನ್ನು ಸಾರುವೆವು.

ಕೀರ್ತನೆಗಳು 89:50

ಕರ್ತನೇ, ನಿನ್ನ ಸೇವಕರ ನಿಂದೆ ಯನ್ನು, ಎಲ್ಲಾ ಪರಾಕ್ರಮಿಗಳ ನಿಂದೆಯನ್ನು ನಾನು ಹೇಗೆ ನನ್ನ ಎದೆಯಲ್ಲಿ ಹೊತ್ತೆನೆಂದೂ ಜ್ಞಾಪಕ ಮಾಡಿಕೋ.

ಕೀರ್ತನೆಗಳು 130:1

ಓ ಕರ್ತನೇ, ಆಗಾಧಗಳೊಳಗಿಂದ ನಿನಗೆ ಕೂಗುತ್ತೇನೆ.

ಯೆಶಾಯ 37:4

ನಿನ್ನ ದೇವರಾಗಿರುವ ಕರ್ತನು ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ಮಾತುಗಳನ್ನು ಕೇಳಿರುವನು; ಅವನು ತನ್ನ ಯಜಮಾನನ ಹೆಸರಿನಲ್ಲಿ ಜೀವಸ್ವರೂ ಪನಾದ ದೇವರನ್ನು ದೂಷಿಸಿದ್ದರಿಂದ ಆತನು ಅವನಿಗೆ ಮುಯ್ಯಿ ತೀರಿಸಾನು; ಆದದರಿಂದ ಉಳಿದಿರುವ ಸ್ವಲ್ಪ ಜನರಿಗೋಸ್ಕರ ಆತನನ್ನು ಪ್ರಾರ್ಥಿಸು ಎಂಬದಾಗಿ ಹಿಜ್ಕೀಯನು ಅನ್ನುತ್ತಾನೆ ಎಂದು ಹೇಳಿದರು.

ದಾನಿಯೇಲ 9:17

ಆದದರಿಂದ ಈಗ, ಓ ನಮ್ಮ ದೇವರೇ, ಈ ನಿನ್ನ ಸೇವಕನ ಪ್ರಾರ್ಥನೆಯನ್ನೂ ಮತ್ತು ವಿಜ್ಞಾಪನೆ ಯನ್ನೂ ಕೇಳಿ ಹಾಳಾದ ನಿನ್ನ ಪರಿಶುದ್ಧ ಸ್ಥಳದ ಮೇಲೆ ಕರ್ತನಿಗೋಸ್ಕರ ನಿನ್ನ ಮುಖವನ್ನು ಪ್ರಕಾಶಪಡಿಸು.

ದಾನಿಯೇಲ 9:18

ಓ ನನ್ನ ದೇವರೇ, ನೀನು ಕಿವಿಗೊಟ್ಟು ಕೇಳು; ಇಗೋ, ನಿನ್ನ ಕಣ್ಣುಗಳನ್ನು ತೆರೆದು ನಾವು ಹಾಳಾದ ದ್ದನ್ನೂ ನಿನ್ನ ಹೆಸರಿನಿಂದ ಕರೆಯಲ್ಪಡುವ ಪಟ್ಟಣವನ್ನೂ ನೋಡು ಯಾಕಂದರೆ ನಾವು ನಮ್ಮ ನೀತಿಗೋಸ್ಕರವಲ್ಲ, ನಿನ್ನ ಮಹಾ ಕೃಪೆಗೋಸ್ಕರವೇ ನಮ್ಮ ವಿಜ್ಞಾಪನೆಗಳನ್ನು ನಿನ್ನ ಮುಂದೆ ಅರ್ಪಿಸುತ್ತೇವೆ.

1 ಪೇತ್ರ 3:12

ಕರ್ತನ ದೃಷ್ಟಿ ನೀತಿವಂತರ ಮೇಲಿದೆ. ಆತನು ಅವರ ಪ್ರಾರ್ಥನೆಗಳಿಗೆ ಕಿವಿ ಗೊಡುತ್ತಾನೆ; ಕೆಟ್ಟದ್ದನ್ನು ಮಾಡುವವರಿಗೆ ಕರ್ತನ ಮುಖವು ವಿರೋಧವಾಗಿದೆ.

Interlinear

Choose Theme