Home Bibles ಯೆಶಾಯ 37:6 · ಕನ್ನಡ ಬೈಬಲ್
ಯೆಶಾಯ 37:6 · ಕನ್ನಡ ಬೈಬಲ್

ಅಶ್ಶೂರದ ಅರಸನ ಸೇವಕರು ನನ್ನನ್ನು ದೂಷಿಸಿದ ಮಾತುಗಳನ್ನು ನೀನು ಕೇಳಿದ್ದೀ; ಆದರೆ ನೀನು ಅವುಗಳಿಗೆ ಹೆದರಬೇಡ.

Cross references

ನಿರ್ಗಮಕಾಂಡ 14:13

ಅದಕ್ಕೆ ಮೋಶೆಯು ಜನರಿಗೆ--ನೀವು ಭಯಪಡ ಬೇಡಿರಿ; ಕದಲದೆ ನಿಲ್ಲಿರಿ; ಕರ್ತನು ನಿಮಗೆ ಈ ಹೊತ್ತು ತೋರಿಸುವ ರಕ್ಷಣೆಯನ್ನು ನೋಡಿರಿ. ನೀವು ಈ ಹೊತ್ತು ನೋಡುವ ಐಗುಪ್ತ್ಯರನ್ನು ಇನ್ನು ಮುಂದೆ ಎಂದೆಂದಿಗೂ ನೋಡುವದಿಲ್ಲ.

ಲೇವ್ಯಕಾಂಡ 26:8

ನಿಮ್ಮಲ್ಲಿ ಐದು ಮಂದಿ ನೂರು ಮಂದಿಯನ್ನು ಹಿಂದಟ್ಟುವರು. ನಿಮ್ಮಲ್ಲಿ ನೂರು ಮಂದಿ ಹತ್ತು ಸಾವಿರ ಮಂದಿಯನ್ನು ಅಟ್ಟಿಬಿಡುವರು. ನಿಮ್ಮ ಶತ್ರುಗಳು ನಿಮ್ಮ ಮುಂದೆ ಕತ್ತಿಯಿಂದ ಬೀಳುವರು.

ಯೆಹೋಶುವ 11:6

ಆಗ ಕರ್ತನು ಯೆಹೋಶುವನಿಗೆಅವರಿಗೆ ಭಯಪಡಬೇಡ; ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರನ್ನು ಇಸ್ರಾಯೇಲಿನ ಮುಂದೆ ಕೊಲ್ಲಲ್ಪ ಡುವಂತೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯಿದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು ಅಂದನು.

2 ಅರಸುಗಳು 19:5

ಹಾಗೆಯೇ ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದರು.

2 ಅರಸುಗಳು 22:15

ಆಗ ಅವಳು--ಅವರಿಗೆ ಹೇಳಿದ್ದು--ಇಸ್ರಾಯೇಲಿನ ದೇವ ರಾದ ಕರ್ತನು ಹೇಳುವದೇನಂದರೆ--ನಿಮ್ಮನ್ನು ನನ್ನ ಬಳಿಗೆ ಕಳುಹಿಸಿದವನಿಗೆ ನೀವು ಹೇಳಬೇಕಾದದ್ದು ಇದೇ--ಇಗೋ, ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಕೇಡನ್ನು

2 ದಿನವೃತ್ತಾಂತ 20:15

ಆಗ ಅವನುಯೆಹೂದದ ಸಮಸ್ತರೇ, ಯೆರೂಸಲೇಮಿನ ನಿವಾಸಿ ಗಳೇ, ಅರಸನಾದ ಯೆಹೋಷಾಫಾಟನೇ, ಕೇಳಿರಿ. ಕರ್ತನು ನಿಮಗೆ ಹೀಗೆ ಹೇಳುತ್ತಾನೆ--ಈ ಮಹಾಗುಂಪಿನ ನಿಮಿತ್ತ ನೀವು ಭಯಪಡಬೇಡಿರಿ, ಹೆದರ ಬೇಡಿರಿ. ಯಾಕಂದರೆ ಯುದ್ಧವು ನಿಮ್ಮದಲ್ಲ, ದೇವ ರದೇ.

2 ದಿನವೃತ್ತಾಂತ 20:17

ಇದರಲ್ಲಿ ನೀವು ಯುದ್ಧ ಮಾಡಲು ಅವಶ್ಯವಿಲ್ಲ; ನೀವು ನೆಲೆಯಾಗಿ ನಿಂತು ಕೊಂಡು ಕರ್ತನು ನಿಮಗೆ ಮಾಡುವ ರಕ್ಷಣೆಯನ್ನು ನೋಡಿರಿ; ಯೆಹೂದದವರೇ, ಯೆರೂಸಲೇಮಿನ ವರೇ, ಭಯಪಡಬೇಡಿರಿ, ಹೆದರಬೇಡಿರಿ; ಮಾರನೇ ದಿವಸ ಅವರೆದುರಿಗೆ ಹೊರಟು ಹೋಗಿರಿ; ಕರ್ತನು ನಿಮ್ಮ ಸಂಗಡ ಇದ್ದಾನೆ ಅಂದನು.

ಯೆಶಾಯ 7:4

ಜಾಗ ರೂಕನಾಗಿ ಸುಮ್ಮನಿರು; ಭಯಪಡಬೇಡ ಇಲ್ಲವೆ ರೆಚೀನ ಅರಾಮ್ಯ ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟು ಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.

ಯೆಶಾಯ 10:24

ಆದದರಿಂದ ಸೈನ್ಯಗಳ ದೇವರಾದ ಕರ್ತನು ಇಂತೆ ನ್ನುತ್ತಾನೆ--ಚೀಯೋನಿನಲ್ಲಿ ವಾಸಿಸುವ ಓ ನನ್ನ ಜನರೇ, ಐಗುಪ್ತ್ಯರಂತೆ ನಿಮ್ಮನ್ನು ಕೋಲಿನಿಂದ ಹೊಡೆದು ನಿಮಗೆ ವಿರುದ್ಧವಾಗಿ ದೊಣ್ಣೆಯನ್ನು ಎತ್ತುವ ಅಶ್ಶೂರರಿಗೆ ಭಯಪಡಬೇಡಿರಿ.

ಯೆಶಾಯ 35:4

ಭಯಭ್ರಾಂತ ಹೃದಯವುಳ್ಳವರಿಗೆ--ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ಪ್ರತಿಫಲವನ್ನು ಕೊಡುವದಕ್ಕೂ ಆತನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಅವರಿಗೆ ಹೇಳಿರಿ.

ಯೆಶಾಯ 41:10

ನೀನಂತೂ ಹೆದರಬೇಡ; ನಾನೇ ನಿನ್ನೊಂದಿಗಿದ್ದೇನೆ; ದಿಗ್ಭ್ರಮೆಗೊಳ್ಳದಿರು. ನಾನೇ ನಿನ್ನ ದೇವರು; ನಾನು ನಿನ್ನನ್ನು ಬಲಪಡಿ ಸುತ್ತೇನೆ; ಹೌದು, ನಾನು ನಿನಗೆ ಸಹಾಯ ಮಾಡು ತ್ತೇನೆ. ಹೌದು, ನನ್ನ ನೀತಿಯ ಬಲಗೈಯಿಂದ ನಿನ್ನನ್ನು ಎತ್ತಿ ಹಿಡಿಯುತ್ತೇನೆ.

ಯೆಶಾಯ 43:1

ಈಗಲಾದರೋ ಓ ಯಾಕೋಬೇ, ಇಸ್ರಾಯೇಲೇ ನಿನ್ನನ್ನು ಸೃಷ್ಟಿಸಿದಾತನೂ ರೂಪಿಸಿದಾತನೂ ಆದ ಕರ್ತನು ಇಂತೆನ್ನುತ್ತಾನೆ--ಹೆದರಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ ನಿನ್ನ ಹೆಸರು ಹಿಡಿದು ಕರೆದೆನಲ್ಲಾ; ನೀನು ನನ್ನವನೇ.

ಯೆಶಾಯ 51:7

ನೀತಿಯನ್ನು ಅರಿತು ನನ್ನ ನ್ಯಾಯಪ್ರಮಾಣವನ್ನು ಹೃದಯದಲ್ಲಿಟ್ಟು ಕೊಂಡಿರುವ ಜನರೇ, ನನಗೆ ಕಿವಿಗೊಡಿರಿ, ಮನುಷ್ಯರ ನಿಂದೆಗೆ ಭಯಪಡಬೇಡಿರಿ; ಇಲ್ಲವೆ ಅವರ ದೂಷಣೆಗೆ ಹೆದರ ಬೇಡಿರಿ.

ಯೆಶಾಯ 51:12

ನಾನೇ, ನಾನೇ ನಿನ್ನನ್ನು ಆದರಿಸುವವನಾಗಿ ದ್ದೇನೆ; ಹಾಗಾದರೆ ಸಾಯುವ ಮನುಷ್ಯನಿಗೂ ಹುಲ್ಲಿನಂತೆ ಮಾಡಲ್ಪಟ್ಟಿರುವ ನರಪುತ್ರನಿಗೂ ಭಯ ಪಡುವ ನೀನು ಯಾರು?

ಮಾರ್ಕ 4:40

ಮತ್ತು ಆತನು ಅವರಿಗೆ--ಯಾಕೆ ನೀವು ಇಷ್ಟೊಂದು ಭಯಭರಿತರಾಗಿದ್ದೀರಿ? ನಿಮಗೆ ನಂಬಿಕೆ ಇಲ್ಲದಿರುವದು ಹೇಗೆ ಅಂದನು.ಆಗ ಅವರು ಇನ್ನಷ್ಟು ಭಯಪಟ್ಟವರಾಗಿ--ಈತನು ಎಂಥ ಮನುಷ್ಯನಾಗಿರಬಹುದು? ಗಾಳಿಯೂ ಸಮುದ್ರವೂ ಈತನಿಗೆ ವಿಧೇಯವಾಗುತ್ತವಲ್ಲಾ ! ಎಂದು ಒಬ್ಬರಿ ಗೊಬ್ಬರು ಮಾತನಾಡಿಕೊಂಡರು.

ಮಾರ್ಕ 5:36

ಹಾಗೆ ಹೇಳಿದ್ದನ್ನು ಯೇಸು ಕೇಳಿದ ಕೂಡಲೆ ಆ ಸಭಾಮಂದಿರದ ಅಧಿಕಾರಿಗೆ--ಭಯ ಪಡಬೇಡ, ನಂಬಿಕೆ ಮಾತ್ರ ಇರಲಿ ಅಂದನು.

Interlinear

Choose Theme