Home Bibles ಯೆಶಾಯ 38:19 · ಕನ್ನಡ ಬೈಬಲ್
ಯೆಶಾಯ 38:19 · ಕನ್ನಡ ಬೈಬಲ್

ನಾನು ಈ ಹೊತ್ತು ಮಾಡುವ ಪ್ರಕಾರ, ಜೀವಂತನು ಹೌದು, ಜೀವಂತನೇ, ನಿನ್ನನ್ನು ಹೊಗಳುವನು; ತಂದೆಯು ಮಕ್ಕಳಿಗೆ ನಿನ್ನ ಸತ್ಯತೆಯನ್ನು ತಿಳಿಯ ಪಡಿಸುವನು.

Cross references

ಆದಿಕಾಂಡ 18:19

ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.

ನಿರ್ಗಮಕಾಂಡ 10:2

ಇದಲ್ಲದೆ ನೀನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ನಾನು ಐಗುಪ್ತದಲ್ಲಿ ಏನು ಮಾಡಿದೆನೆಂದೂ ನಾನೇ ಕರ್ತನೆಂದೂ ನೀವು ತಿಳುಕೊಳ್ಳುವಂತೆ ನಾನು ಅವರ ಮಧ್ಯದಲ್ಲಿ ಮಾಡಿದ ಸೂಚಕಕಾರ್ಯಗಳನ್ನು ತಿಳಿಸ ಬೇಕು ಎಂದು ಹೇಳಿದನು.

ನಿರ್ಗಮಕಾಂಡ 12:26

ನಿಮ್ಮ ಮಕ್ಕಳು ಈ ಆಚಾರದ ಅರ್ಥವೇನು ಎಂದು ಕೇಳಿದಾಗ

ನಿರ್ಗಮಕಾಂಡ 13:14

ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.

ದ್ವಿತೀಯೋಪದೇಶಕಾಂಡ 4:9

ನಿನ್ನ ಕಣ್ಣುಗಳು ನೋಡಿದ ಕಾರ್ಯಗಳನ್ನು ನೀನು ಮರೆಯದ ಹಾಗೆಯೂ ನೀನು ಬದುಕುವ ದಿನಗಳೆಲ್ಲಾ ಅವು ನಿನ್ನ ಹೃದಯಕ್ಕೆ ದೂರವಾಗದ ಹಾಗೆಯೂ ಬಹು ಜಾಗ್ರತೆಯಾಗಿದ್ದು ನಿನ್ನ ಪ್ರಾಣ ವನ್ನು ಬಹಳವಾಗಿ ಕಾಪಾಡು; ಅವುಗಳನ್ನು ನಿನ್ನ ಮಕ್ಕಳಿಗೂ ನಿನ್ನ ಮಕ್ಕಳ ಮಕ್ಕಳಿಗೂ ಬೋಧಿಸು.

ದ್ವಿತೀಯೋಪದೇಶಕಾಂಡ 4:10

ನೀನು ಹೋರೇಬಿನಲ್ಲಿ ಕರ್ತನ ಮುಂದೆ ನಿಂತ ದಿವಸ ಉಂಟಲ್ಲವೇ? ಆಗ ಕರ್ತನು ನನಗೆ--ಜನರನ್ನು ನನಗಾಗಿ ಕೂಡಿಸು; ಅವರು ಭೂಮಿಯ ಮೇಲೆ ಬದುಕುವ ದಿವಸಗಳೆಲ್ಲಾ ನನಗೆ ಭಯಭಕ್ತಿಯಿಂದಿ ರುವದನ್ನು ಕಲಿತು ತಮ್ಮ ಮಕ್ಕಳಿಗೂ ಬೋಧಿಸುವ ಹಾಗೆ ಅವರಿಗೆ ನನ್ನ ವಾಕ್ಯಗಳನ್ನು ಹೇಳಿಕೊಡು ವೆನು ಅಂದನು

ದ್ವಿತೀಯೋಪದೇಶಕಾಂಡ 6:7

ಅವು ಗಳನ್ನು ನಿನ್ನ ಮಕ್ಕಳಿಗೆ ಅಭ್ಯಾಸಮಾಡಿಸಿ ನಿನ್ನ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ಹೋಗುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ವಾಗಿ ಮಾತನಾಡಬೇಕು.

ದ್ವಿತೀಯೋಪದೇಶಕಾಂಡ 11:19

ನಿಮ್ಮ ಮನೆಯಲ್ಲಿ ಕೂತಿರುವಾಗಲೂ ಮಾರ್ಗದಲ್ಲಿ ನಡೆಯುವಾಗಲೂ ಮಲಗುವಾಗಲೂ ಏಳುವಾಗಲೂ ಅವುಗಳ ವಿಷಯ ಮಾತನಾಡಿ ಅವುಗಳನ್ನು ನಿಮ್ಮ ಮಕ್ಕಳಿಗೆ ಕಲಿಸಬೇಕು.

ಯೆಹೋಶುವ 4:21

ಅವನು ಇಸ್ರಾಯೇಲ್‌ ಮಕ್ಕಳಿಗೆ--ನಿಮ್ಮ ಮಕ್ಕಳು ಈ ಕಲ್ಲುಗಳು ಏನೆಂದು ಬರುವ ಕಾಲದಲ್ಲಿ ತಮ್ಮ ತಂದೆಗಳನ್ನು ಕೇಳಿದಾಗ ನೀವು ಅವರಿಗೆ

ಕೀರ್ತನೆಗಳು 78:3

ಅವುಗಳನ್ನು ಕೇಳಿ ತಿಳಿದಿದ್ದೇವೆ; ನಮ್ಮ ತಂದೆಗಳು ನಮಗೆ ವಿವರಿಸಿದರು.

ಕೀರ್ತನೆಗಳು 78:4

ನಾವು ಕರ್ತನ ಸ್ತೋತ್ರಗಳನ್ನೂ ಆತನ ತ್ರಾಣವನ್ನೂ ಆತನು ಮಾಡಿದ ಅದ್ಭುತಗಳನ್ನೂ ವಿವರಿಸುತ್ತಾ ಅವರ ಮಕ್ಕಳಿಗೆ, ಮುಂದಿನ ವಂಶಕ್ಕೆ ಮರೆಮಾಡುವದಿಲ್ಲ.

ಕೀರ್ತನೆಗಳು 118:17

ನಾನು ಸಾಯದೆ ಬದುಕಿ, ಕರ್ತನ ಕಾರ್ಯಗಳನ್ನು ಪ್ರಕಟಿಸುವೆನು.

ಕೀರ್ತನೆಗಳು 119:175

ನನ್ನ ಪ್ರಾಣವು ಬದುಕಿ ನಿನ್ನನ್ನು ಸ್ತುತಿಸಲಿ; ನಿನ್ನ ನ್ಯಾಯವಿಧಿಗಳು ನನಗೆ ಸಹಾಯಮಾಡಲಿ.ತಪ್ಪಿಹೋದ ಕುರಿಯ ಹಾಗೆ ತೊಳಲ್ಲಿದ್ದೇನೆ; ನಿನ್ನ ಸೇವಕನನ್ನು ಹುಡುಕು; ನಿನ್ನ ಆಜ್ಞೆಗಳನ್ನು ಮರೆತುಬಿಡೆನು.

ಕೀರ್ತನೆಗಳು 145:4

ತಲಾಂತರಕ್ಕೆ ಇನ್ನೊಂದು ತಲಾಂತರವು ನಿನ್ನ ಕೆಲಸಗಳನ್ನು ಪ್ರಕಟಿಸುತ್ತದೆ; ನಿನ್ನ ಪರಾಕ್ರಮಗಳನ್ನು ತಿಳಿಸುತ್ತಾರೆ.

ಕೀರ್ತನೆಗಳು 146:2

ನನ್ನ ಪ್ರಾಣವಿರುವ ವರೆಗೂ ಕರ್ತನನ್ನು ಸ್ತುತಿಸುವೆನು; ನನ್ನ ಜೀವಮಾನವೆಲ್ಲಾ ನನ್ನ ದೇವರನ್ನು ಕೀರ್ತಿ ಸುವೆನು.

ಸಭಾಪ್ರಸಂಗಿ 9:10

ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.

ಯೋವೇಲ 1:3

ಇದರ ವಿಷಯವನ್ನು ನಿಮ್ಮ ಮಕ್ಕಳಿಗೆ ತಿಳಿಸಿರಿ, ನಿಮ್ಮ ಮಕ್ಕಳು ತಮ್ಮ ಮಕ್ಕಳಿಗೂ ಅವರ ಮಕ್ಕಳು ಮತ್ತೊಂದು ತಲಾಂತರಕ್ಕೂ ತಿಳಿಸಲಿ.

ಯೋಹಾನ 9:4

ನನ್ನನ್ನು ಕಳುಹಿಸಿದಾತನ ಕೆಲಸ ಗಳನ್ನು ಹಗಲಿರುವಾಗ ನಾನು ಮಾಡತಕ್ಕದ್ದು; ರಾತ್ರಿ ಬರುತ್ತದೆ, ಆಗ ಯಾವ ಮನುಷ್ಯನೂ ಕೆಲಸಮಾಡ ಲಾರನು.

Interlinear

Choose Theme