ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.
Cross references
ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು.
ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.
ಸೈನ್ಯಗಳ ಓ ಕರ್ತನೇ, ನಿನ್ನ ನಿವಾಸಗಳು ಎಷ್ಟೋ ರಮ್ಯವಾಗಿವೆ!
ಸಾವಿರ ದಿವಸಗಳಿಗಿಂತ ನಿನ್ನ ಅಂಗಳಗ ಳಲ್ಲಿ ಇರುವ ಒಂದು ದಿನವು ಒಳ್ಳೇದಾಗಿದೆ; ದುಷ್ಟರ ಗುಡಾರಗಳಲ್ಲಿ ವಾಸಮಾಡುವದಕ್ಕಿಂತ ನನ್ನ ದೇವರ ಆಲಯದ ಬಾಗಿಲನ್ನು ಕಾಯುವವನಾಗಿರುವದು ನನಗೆ ಒಳ್ಳೆಯದು.
ಕರ್ತನು ನನ್ನನ್ನು ಕಠಿಣವಾಗಿ ಶಿಕ್ಷಿಸಿದನು; ಮರಣಕ್ಕೆ ನನ್ನನ್ನು ಒಪ್ಪಿಸಲಿಲ್ಲ.
ಕರ್ತನ ಆಲಯಕ್ಕೆ ಹೋಗೋಣ ಎಂದು ಅವರು ನನಗೆ ಹೇಳಿದಾಗ ನನಗೆ ಸಂತೋಷವಾಯಿತು.
ಕರ್ತನು ತಾನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಒಂದು ಗುರುತನ್ನು ಕಾಣುವಿ.
ತರುವಾಯ ಯೇಸು ಅವನನ್ನು ದೇವಾಲಯದಲ್ಲಿ ಕಂಡುಕೊಂಡು ಅವ ನಿಗೆ--ಇಗೋ, ನಿನಗೆ ಸ್ವಸ್ಥವಾಯಿತಲ್ಲಾ; ನಿನ್ನ ಮೇಲೆ ಹೆಚ್ಚಿನ ಕೇಡು ಬಾರದಂತೆ ಇನ್ನು ಪಾಪಮಾಡಬೇಡ ಅಂದನು.