Home Bibles ಯೆಶಾಯ 38:7 · ಕನ್ನಡ ಬೈಬಲ್
ಯೆಶಾಯ 38:7 · ಕನ್ನಡ ಬೈಬಲ್

ಕರ್ತನು ತಾನು ನುಡಿದದ್ದನ್ನು ನೆರವೇರಿಸುವನು ಎಂಬದಕ್ಕೆ ಒಂದು ಗುರುತನ್ನು ಕಾಣುವಿ.

Cross references

ಆದಿಕಾಂಡ 9:13

ನನ್ನ ಬಿಲ್ಲು ಮೇಘಗಳಲ್ಲಿ ಇಟ್ಟಿದ್ದೇನೆ. ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವದು.

ನ್ಯಾಯಾಧಿಪತಿಗಳು 6:17

ಅದಕ್ಕವನುಈಗ ನಿನ್ನ ಸಮ್ಮುಖದಲ್ಲಿ ನನಗೆ ದಯೆ ದೊರಕಿದ್ದರೆ ನನ್ನ ಸಂಗಡ ಮಾತಾಡುವಾತನು ನೀನೇ ಎಂಬದಕ್ಕೆ ನನಗೆ ಒಂದು ಗುರುತನ್ನು ತೋರಿಸಬೇಕು.

ನ್ಯಾಯಾಧಿಪತಿಗಳು 6:37

ಇಗೋ, ಉಣ್ಣೆಯ ಗುಜ್ಜನ್ನು ಕಣದಲ್ಲಿ ಹಾಕುವೆನು. ಮಂಜು ಉಣ್ಣೆಯ ಮೇಲೆ ಮಾತ್ರವೇ ಇದ್ದು ಭೂಮಿಯೆಲ್ಲಾ ಒಣಗಿದ್ದರೆ ನೀನು ಹೇಳಿದ ಹಾಗೆ ಇಸ್ರಾಯೇಲನ್ನು ನನ್ನ ಕೈಯಿಂದ ರಕ್ಷಿಸುವಿ ಎಂಬದನ್ನು ನಾನು ತಿಳಿಯುವೆನು ಅಂದನು.

2 ಅರಸುಗಳು 20:8

ಆದರೆ ಹಿಜ್ಕೀಯನು ಯೆಶಾಯನಿಗೆ--ಕರ್ತನು ನನ್ನನ್ನು ಸ್ವಸ್ಥ ಮಾಡುವನೆಂಬದಕ್ಕೂ ನಾನು ಮೂರನೇ ದಿವಸದಲ್ಲಿ ಕರ್ತನ ಮನೆಗೆ ಹೋಗುವೆನೆಂಬದಕ್ಕೂ ನನಗೆ ಗುರುತೇನು ಅಂದನು.

ಯೆಶಾಯ 7:11

ನಿನ್ನ ದೇವರಾದ ಕರ್ತನಿಂದ ಒಂದು ಗುರುತನ್ನು ಕೇಳು; ಅದು ಕೆಳಗೆ ಆಳದಲ್ಲಾದರೂ ಇಲ್ಲವೆ ಮೇಲೆ ಎತ್ತರದ ಲ್ಲಿದ್ದರೂ ಅದನ್ನು ಕೇಳಿಕೋ ಎಂದು ಹೇಳಿದನು.

ಯೆಶಾಯ 7:14

ಆದಕಾರಣ ಕರ್ತನು ತಾನೇ ಒಂದು ಗುರುತನ್ನು ನಿನಗೆ ಕೊಡು ವನು; ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಒಬ್ಬ ಮಗನನ್ನು ಹಡೆಯುವಳು. ಆತನನ್ನು ಇಮ್ಮಾನು ವೇಲ್‌ ಎಂದು ಕರೆಯುವರು.

ಯೆಶಾಯ 37:30

ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನು ಎರಡನೇ ವರ್ಷದಲ್ಲಿ ಆದರಿಂದ ಮೊಳೆತದ್ದನ್ನು ತಿನ್ನುವಿರಿ. ಮೂರನೇ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ; ದ್ರಾಕ್ಷೇ ತೋಟವನ್ನು ನೆಟ್ಟು ಅವುಗಳ ಫಲವನ್ನು ತಿನ್ನುವದೇ ನಿಮಗೆ ಗುರುತಾಗಿ ರುವದು.

ಯೆಶಾಯ 38:22

ಇದಲ್ಲದೆ ಹಿಜ್ಕೀಯನು--ನಾನು ಕರ್ತನ ಆಲಯಕ್ಕೆ ಹೋಗುವದಕ್ಕೆ ಗುರುತೇನು ಎಂದು ಕೇಳಿದ್ದನು.

Interlinear

Choose Theme