ನಿನ್ನಿಂದ ಹುಟ್ಟುವಂಥ ನೀನು ಪಡೆದ ನಿನ್ನ ಮಕ್ಕಳನ್ನು ತೆಗೆದು ಕೊಂಡು ಹೋಗುವರು; ಬಾಬೆಲಿನ ಅರಸನ ಅರಮನೆ ಯಲ್ಲಿ ಅವರು ಕಂಚುಕಿಗಳಾಗಿರುವರು ಎಂದು ಕರ್ತನು ಹೇಳುತ್ತಾನೆ ಅಂದನು.ಆಗ ಹಿಜ್ಕೀಯನು--ಹೇಗೂ ನನ್ನ (ದಿನಗಳಲ್ಲಿ) ಜೀವಮಾನ ದಲ್ಲಿ ಸಮಾಧಾನವು ಸತ್ಯವು ಇರುವವು ಎಂದು ಅಂದುಕೊಂಡು ಯೆಶಾಯ ನಿಗೆ--ನೀನು ಹೇಳಿದ ಕರ್ತನ ವಾಕ್ಯವು ಒಳ್ಳೇದೆ ಅಂದನು.
Cross references
ಆಗ ಯೆಹೂದದ ಅರಸನಾದ ಯೆಹೋಯಾಖೀನನೂ ಅವನ ತಾಯಿಯೂ ಸೇವ ಕರೂ ಪ್ರಧಾನರೂ ಕಂಚುಕಿಯರೂ ಅಧಿಕಾರಿಗಳ ಸಹಿತವಾಗಿ ಬಾಬೆಲಿನ ಅರಸನ ಬಳಿಗೆ ಹೋದರು. ಬಾಬೆಲಿನ ಅರಸನು ತನ್ನ ಆಳಿಕೆಯ ಎಂಟನೇ ವರುಷ ದಲ್ಲಿ ಅವನನ್ನು ಸೆರೆಹಿಡಿದನು.
ಯೆಹೋಯಾಖೀನನನ್ನು ಬಾಬೆ ಲಿಗೆ ಒಯ್ದನು; ಅವನು ಅರಸನ ತಾಯಿಯನ್ನೂ ಅರಸನ ಹೆಂಡತಿಯರನ್ನೂ ಅವನ ಅಧಿಕಾರಿಗಳನ್ನೂ ದೇಶದ ಬಲಶಾಲಿಗಳನ್ನೂ ಯೆರೂಸಲೇಮಿನಿಂದ ಬಾಬೆಲಿಗೆ ಸೆರೆಯಾಗಿ ಒಯ್ದನು.
ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು. ಆದರೆ ಒಂದು ವರುಷವು ತೀರಿದ ಮೇಲೆ ಅರಸನಾದ ನೆಬೂಕದ್ನೆಚ್ಚರನು ಜನರನ್ನು ಕಳುಹಿಸಿ ಅವನನ್ನೂ ಕರ್ತನ ಆಲಯದ ಬೆಲೆಯುಳ್ಳ ಪಾತ್ರೆಗಳನ್ನೂ ಬಾಬೆ ಲಿಗೆ ತಕ್ಕೊಂಡು ತರಿಸಿಕೊಂಡು ಅವನ ಸಹೋದರ ನಾದ ಚಿದ್ಕೀಯನನ್ನು ಯೆಹೂದ ಯೆರೂಸಲೇಮಿನ ಮೇಲೆ ಅರಸನಾಗಿ ಮಾಡಿದನು.
ಇದ ಲ್ಲದೆ ಕತ್ತಿಗೆ ತಪ್ಪಿದವರನ್ನು ಅವನು ಬಾಬೆಲಿಗೆ ಒಯ್ದನು. ಅವರು ಅಲ್ಲಿ ಪಾರಸಿಯ ರಾಜ್ಯದ ಆಳ್ವಿಕೆಯ ಪರ್ಯಂತರ, ದೇಶವು ಅದರ ಸಬ್ಬತ್ತುಗಳನ್ನು ಅನುಭವಿ ಸುವ ಪರ್ಯಂತರ, ಯೆರೆವಿಾಯನ ಮುಖಾಂತರವಾಗಿ ಹೇಳಿದ ಕರ್ತನ ವಾಕ್ಯವು ಈಡೇರುವದಕ್ಕೆ ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
ಇದರ ಅಭಿಪ್ರಾಯ ನಿಮಗೆ ತಿಳಿಯುವದಿಲ್ಲವೋ? ಅವರಿಗೆ ಎದುರು ಬೀಳುವ ಮನೆಯವರಿಗೆ ಹೀಗೆ ಹೇಳು--ಇಗೋ, ಬಾಬೆಲಿನ ಅರಸನು ಯೆರೂಸಲೇಮಿಗೆ ಬಂದು ಅದರ ಅರಸ ನನ್ನೂ ಅದರ ಪ್ರಧಾನರನ್ನೂ ಕರೆದುಕೊಂಡು ತನ್ನ ಬಳಿಗೆ ಬಾಬೆಲಿಗೆ ಒಯ್ದಿದ್ದಾನೆ.
ಯೆಹೂದದ ಅರಸನಾದ ಯೆಹೋಯಾ ಕೀಮನ ಆಳಿಕೆಯ ಮೂರನೆಯ ವರುಷ ದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೂ ಸಲೇಮಿಗೆ ಬಂದು ಮುತ್ತಿಗೆ ಹಾಕಿದನು.
ಅರಸನು ತನ್ನ ಕಂಚುಕಿಯರ ಯಜಮಾನನಾದ ಅಶ್ವೆವಜನ ಸಂಗಡ ಮಾತನಾಡಿ ಅವನು ಇಸ್ರಾಯೇಲಿನ ಮಕ್ಕಳೊಳಗೆ ಕೆಲವರನ್ನು ಅರಸನ ಸಂತಾನದೊಳ ಗಿಂದಲೂ ಮತ್ತು ಪ್ರಧಾನರಲ್ಲಿಯೂ