ಆ ದಿನದಲ್ಲಿ ಕರ್ತನ ಕೊಂಬೆಯು ಸುಂದರವಾ ಗಿಯೂ ಮಹಿಮೆಯುಳ್ಳದ್ದಾಗಿಯೂ ಇರುವದು. ಭೂಮಿಯ ಫಲವು ಇಸ್ರಾಯೇಲ್ಯರಲ್ಲಿ ಉಳಿದವರಿಗೆ ಉತ್ತಮವಾಗಿಯೂ ರಮ್ಯವಾಗಿಯೂ ಇರುವದು.
Cross references
ನಿನ್ನ ಸಹೋದರನಾದ ಆರೋನನ ಗೌರವ ಕ್ಕೋಸ್ಕರವೂ ಅಲಂಕಾರಕ್ಕೋಸ್ಕರವೂ ಪರಿಶುದ್ಧ ವಸ್ತ್ರಗಳನ್ನು ನೀನು ಮಾಡಿಸಬೇಕು.
ಆಗ ಭೂಮಿಯು ತನ್ನ ಸಮೃದ್ಧಿಯಾದ ಬೆಳೆಯನ್ನು ಕೊಡುವದು; ದೇವರೇ, ಹೌದು, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸುವನು.ದೇವರು ನಮ್ಮನ್ನು ಆಶೀರ್ವದಿಸುವನು; ಭೂಮಿಯ ಕೊನೆಯ ಭಾಗಗಳು ಆತನಿಗೆ ಭಯಪಡುವವು.
ಧಾನ್ಯದ ಸಮೃದ್ಧಿಯು ದೇಶದಲ್ಲಿ ಬೆಟ್ಟಗಳ ತುದಿಯ ಮೇಲೆ ಇರುವದು; ಅದರ ಫಲವು ಲೆಬನೋನಿನ ಹಾಗೆ ಕದಲುವದು. ಪಟ್ಟಣದ ವರು ಭೂಮಿಯ ಸೊಪ್ಪಿನ ಹಾಗೆ ವೃದ್ಧಿಯಾಗುವರು.
ಸತ್ಯವು ಭೂಮಿಯಿಂದ ಮೊಳೆಯು ವದು; ನೀತಿಯು ಆಕಾಶದಿಂದ ಕೆಳಗೆ ದೃಷ್ಟಿಸುವುದು.
ಆ ದಿನದಲ್ಲಿ ಇಸ್ರಾಯೇಲ್ಯರಲ್ಲಿ ಉಳಿದವರೂ ಯಾಕೋಬಿನ ಮನೆತನದಿಂದ ತಪ್ಪಿಸಿಕೊಂಡವರೂ ಇನ್ನು ಮೇಲೆ ತಮ್ಮನ್ನು ಹೊಡೆದವನ ಆಧಾರವನ್ನು ಬಿಟ್ಟು ಇಸ್ರಾಯೇಲಿನ ಪರಿಶುದ್ಧನಾದ ಕರ್ತನ ಸತ್ಯವನ್ನು ಆಧಾರ ಮಾಡಿಕೊಳ್ಳುವರು.
ಇಷಯನ ಬುಡದಿಂದ ಒಂದು ಕೊಂಬೆ ಒಡೆಯುವದು ಅದರ ಬೇರಿನಿಂದ ಕೊಂಬೆ ಯು ಬೆಳೆಯುವದು.
ಆದರೆ ಬಡವರಿಗೆ ನೀತಿಯಿಂದ ನ್ಯಾಯತೀರಿಸುವನು; ಭೂಮಿಯ ದೀನರಿಗೆ ನ್ಯಾಯ ವಾಗಿ ತೀರ್ಪುಮಾಡುವನು; ಭೂಮಿಯನ್ನು ತನ್ನ ಬಾಯಿಯ ಕೋಲಿನಿಂದ ಹೊಡೆಯುವನು, ತನ್ನ ತುಟಿಗಳ ಉಸಿರಿನಿಂದ ದುಷ್ಟರನ್ನು ಹತಮಾಡುವನು.
ಮುಂದಿನ ಕಾಲದಲ್ಲಿ ಯಾಕೋಬು ಬೇರೂರಿ ಇಸ್ರಾ ಯೇಲು ಹೂ ಅರಳಿ ಚಿಗುರುವದು ಮತ್ತು ಭೂಲೋ ಕದ ಮೇಲ್ಭಾಗವನ್ನು ಫಲದಿಂದ ತುಂಬಿಸುವನು.
ಓ ಇಸ್ರಾಯೇಲ್ಯರ ಮಕ್ಕಳೇ, ಕರ್ತನು ನದಿಯ ಕಾಲುವೆ ಮೊದಲುಗೊಂಡು ಐಗುಪ್ತದೇಶದ ನದಿಯ ವರೆಗೆ ಹೊಡೆಯುವನು; ಆಗ ನಿಮ್ಮನ್ನು ಒಬ್ಬೊಬ್ಬರ ನ್ನಾಗಿ ಕೂಡಿಸುವನು.ಆ ದಿನದಲ್ಲಿ ಆಗುವದೇನಂದರೆ--ದೊಡ್ಡ ತುತೂರಿಯು ಊದಲ್ಪಡುವದು, ಆಗ ಅಶ್ಶೂರ ದೇಶ ದಲ್ಲಿ ಹಾಳಾದವರೂ ಐಗುಪ್ತದೇಶದಲ್ಲಿರುವ ತಳ್ಳಲ್ಪ ಟ್ಟವರೂ ಯೆರೂಸಲೇಮಿನಲ್ಲಿರುವ ಒಂದು ಪರಿಶುದ್ಧ ಪರ್ವತದ ಬಳಿಗೆ ಬಂದು ಕರ್ತನನ್ನು ಆರಾಧಿಸುವರು.
ಆಗ ನೀವು ಹೊಲದಲ್ಲಿ ಬೀಜ ಬಿತ್ತುವದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸು ವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರ ವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಸ್ಥಳದಲ್ಲಿ ಮೇಯುವವು.
ಯೆಹೂದನ ಮನೆತನದಿಂದ ತಪ್ಪಿಸಿ ಕೊಂಡು ಉಳಿದವರು ತಿರುಗಿ ಕೆಳಗೆ ಬೇರೂರಿ ಮೇಲಕ್ಕೆ ಫಲಫಲಿಸುವರು.
ಆಕಾಶ ಗಳೇ, ಮೇಲಿನಿಂದ ಹನಿಯನ್ನು ಬೀಳಿಸಿರಿ; ಗಗನಗಳು ನೀತಿಯನ್ನು ಸುರಿಸಲಿ; ಭೂಮಿಯು ತೆರೆದು ರಕ್ಷಣೆ ಯನ್ನು ತರಲಿ, ನೀತಿಯು ಅದರೊಂದಿಗೆ ಮೊಳೆ ಯಲಿ. ಇದನ್ನು ಸೃಷ್ಟಿಸಿದ ಕರ್ತನು ನಾನೇ.
ಆತನು ಚಿಗುರಿನಂತೆಯೂ ಒಣನೆಲದಿಂದ ಹುಟ್ಟಿಬರುವ ಬೇರಿನಂತೆಯೂ ಆತನ ಮುಂದೆ ಬೆಳೆ ಯುವನು. ಆತನಿಗೆ ಯಾವ ರೂಪವಾಗಲಿ ಅಂದವಾ ಗಲಿ ಇರಲಿಲ್ಲ; ನಾವು ಆತನನ್ನು ನೋಡಿದಾಗ ಅಲ್ಲಿ ನಾವು ಅಪೇಕ್ಷಿಸುವಂಥ ಯಾವ ಚಂದವೂ ಇರಲಿಲ್ಲ.
ನಿನ್ನ ಜನರೆಲ್ಲರು ನೀತಿವಂತರಾಗಿರುವರು, ದೇಶವನ್ನು ಸದಾ ಕಾಲಕ್ಕೆ ಸ್ವಾಧೀನ ಮಾಡಿಕೊಳ್ಳುವರು; ನಾನು ಮಹಿಮೆ ಹೊಂದುವದಕ್ಕೋಸ್ಕರ ನಾನು ನೆಟ್ಟ ಕೊಂಬೆಯೂ ನನ್ನ ಕೈ ಸೃಷ್ಟಿಯೂ ದೇಶವನ್ನು ಸದಾ ಅನುಭವಿಸುವರು.ಚಿಕ್ಕವನಿಂದ ಸಾವಿರವಾಗುವರು. ಅಲ್ಪನಿಂದ ಬಲ ವಾದ ಜನಾಂಗವಾಗುವದು; ಕರ್ತನೆಂಬ ನಾನು ಕ್ಲುಪ್ತಕಾಲದಲ್ಲಿ ಇದನ್ನು ಬಹು ಬೇಗನೆ ಉಂಟು ಮಾಡುವೆನು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಈ ಒಳ್ಳೇ ಅಂಜೂರದ ಹಣ್ಣುಗಳ ಹಾಗೆ ನಾನು ಈ ಸ್ಥಳದಿಂದ ಕಸ್ದೀಯರ ದೇಶಕ್ಕೆ ಒಳ್ಳೇದಕ್ಕಾಗಿ ಕಳುಹಿಸಿದ ಯೆಹೂದದ ಸೆರೆಯವರನ್ನು ಪರಾಮರಿ ಸುವೆನು.
ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
ಆದರೆ ಅವರಲ್ಲಿ ತಪ್ಪಿಸಿಕೊಳ್ಳುವವರು ತಪ್ಪಿಸಿಕೊಳ್ಳುವರು; ಪ್ರತಿಯೊ ಬ್ಬರೂ ತಮ್ಮ ತಮ್ಮ ಅಕ್ರಮಗಳ ನಿಮಿತ್ತ ಗೋಳಾಡಿ ಕಣಿವೆಯಲ್ಲಿರುವ ಪಾರಿವಾಳದ ಹಾಗೆ ಪರ್ವತಗಳ ಮೇಲೆ ಇರುವರು.
ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು.
ಭೂಮಿಯು ಧಾನ್ಯವನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಕೇಳುವವು. ಅವು ಇಜ್ರೇಲನ್ನು ಕೇಳುವವು.ತರುವಾಯ ಇಜ್ರೇಲನ್ನು ನನಗಾಗಿ ದೇಶದಲ್ಲಿ ಬಿತ್ತುವೆನು; ಕರುಣೆ ಹೊಂದ ದವಳ ಮೇಲೆಯೇ ನಾನು ಕರುಣೆಯನ್ನು ತೋರಿ ಸುವೆನು. ನನ್ನ ಜನವಲ್ಲದ್ದಕ್ಕೆ--ನೀನು ನನ್ನ ಜನ ವೆಂದು ಹೇಳುವೆನು; ಅವರು--ನನ್ನ ದೇವರೇ ಎಂದು ಭಜಿಸುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.
ಆ ದಿನದಲ್ಲಿ ಆಗುವದೇನಂ ದರೆ, ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವವು; ಗುಡ್ಡಗಳು ಹಾಲಿನಿಂದ ಹರಿಯುವವು; ಯೆಹೂದದ ಹಳ್ಳಗಳೆಲ್ಲಾ ನೀರಿನಿಂದ ಹರಿಯುವವು; ಕರ್ತನ ಆಲಯದೊಳಗಿಂದ ಬುಗ್ಗೆ ಹೊರಟು, ಶಿಟ್ಟೀಮಿನ ತಗ್ಗಿಗೆ ಜಲ ಕೊಡುವದು.
ಆದರೆ ಚೀಯೋನ್ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.
ಪ್ರಧಾನ ಯಾಜಕ ನಾದ ಓ ಯೆಹೋಶುವನೇ, ನೀನೂ ನಿನ್ನ ಮುಂದೆ ಕೂತುಕೊಳ್ಳುವ ನಿನ್ನ ಸಂಗಡಿಗರೂ ಈಗ ಕೇಳಿರಿ; ಅವರು ಆಶ್ಚರ್ಯವನ್ನುಂಟು ಮಾಡುವ ಮನುಷ್ಯರಾಗಿ ದ್ದಾರೆ; ಇಗೋ, ನಾನು ಕೊಂಬೆಯೆಂಬ ನನ್ನ ಸೇವಕ ನನ್ನು ಬರಮಾಡುವೆನು.
ಅವನಿಗೆ ಹೇಳತಕ್ಕದ್ದೇನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಚಿಗುರೆಂದು ಹೆಸರುಳ್ಳ ಮನುಷ್ಯನು, ಅವನು ತನ್ನ ಸ್ಥಳದೊಳಗಿಂದ ಚಿಗುರು ವನು, ಆತನೇ ಕರ್ತನ ದೇವಾಲಯವನ್ನು ಕಟ್ಟುವನು.
ಆತನ ಒಳ್ಳೇತನವು ಎಷ್ಟೋ ದೊಡ್ಡದು; ಆತನ ಸೌಂದರ್ಯವು ಎಷ್ಟು ಮಹತ್ತಾ ದದ್ದು! ಧಾನ್ಯವು ಯೌವನಸ್ಥರನ್ನೂ ದ್ರಾಕ್ಷಾರಸವು ಯುವತಿಯರನ್ನೂ ಹರ್ಷಗೊಳಿಸುವವು.
ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
ಆದಕಾರಣ ಸಂಭವಿಸುವದಕ್ಕಿರುವ ಇವೆಲ್ಲವುಗಳಿಂದ ನೀವು ತಪ್ಪಿಸಿಕೊಳ್ಳುವದಕ್ಕೆ ಯೋಗ್ಯರೆಂದು ಎಣಿಸಲ್ಪಡು ವಂತೆಯೂ ಮನುಷ್ಯಕುಮಾರನ ಮುಂದೆ ನಿಂತು ಕೊಳ್ಳುವಂತೆಯೂ ಎಚ್ಚರವಾಗಿದ್ದು ಯಾವಾಗಲೂ ಪ್ರಾರ್ಥಿಸುತ್ತಾ ಇರ್ರಿ ಅಂದನು.
ಇದಲ್ಲದೆ ಆ ವಾಕ್ಯವಾಗಿರುವಾತನು ಶರೀರಧಾರಿ ಯಾಗಿ ಕೃಪೆಯಿಂದಲೂ ಸತ್ಯದಿಂದಲೂ ತುಂಬಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. (ತಂದೆಯಿಂದ ಹುಟ್ಟಿದ ಒಬ್ಬನೇ ಮಗನ ಮಹಿಮೆಯಂತೆ ನಾವು ಆತನ ಮಹಿಮೆಯನ್ನು ನೋಡಿದೆವು).
ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.
ಕತ್ತಲೆ ಯೊಳಗಿಂದ ಬೆಳಕು ಹೊಳೆಯಲಿ ಎಂದು ಆಜ್ಞಾಪಿಸಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವ ಜ್ಞಾನವೆಂಬ ಪ್ರಕಾಶವನ್ನು ಕೊಡುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು.
ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಕ್ತಿಯನ್ನೂ ಆತನ ಪ್ರತ್ಯಕ್ಷತೆಯನ್ನೂ ನಿಮಗೆ ತಿಳಿಯಪಡಿಸಿದ್ದರಲ್ಲಿ ಚಮತ್ಕಾರದಿಂದ ಕಲ್ಪಿಸಿದ ಕಥೆಗಳನ್ನು ನಾವು ಅನುಸರಿ ಸುವವರಾಗಿರಲಿಲ್ಲ. ಆತನ ಮಹತ್ತನ್ನು ಕಣ್ಣಾರೆ ಕಂಡವ ರಾಗಿಯೇ ತಿಳಿಯಪಡಿಸಿದೆವು.
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ