ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳ ಲಾರದ ಬಡವನು ಹುಳುತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ತಯಾರಿಸುವದಕ್ಕೆ ಕುಯುಕ್ತಿಯ ಕೆಲಸಗಾರರನ್ನು ವಿಚಾರಿಸಿಕೊಳ್ಳುವನು.
Cross references
ಆದರೆ ಅಷ್ಡೋದ್ಯರು ಮಾರನೆ ದಿವಸ ಬೆಳಿಗ್ಗೆ ಬಂದಾಗ ಇಗೋ, ದಾಗೋನ್ ಕರ್ತನ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
ಅವರ ದೇಶವು ವಿಗ್ರಹಗಳಿಂದಲೂ ತುಂಬಿದೆ; ತಮ್ಮ ಬೆರಳುಗಳಿಂದ ಮಾಡಿದ ತಮ್ಮ ಕೈಕೆಲಸವನ್ನೇ ಆರಾಧಿಸುವರು.
ಹಾಗೆಯೇ ಮರಗೆಲಸ ದವನು ಅಕ್ಕಸಾಲಿಗನನ್ನು ಪ್ರೋತ್ಸಾಹಗೊಳಿಸಿದನು, ಸುತ್ತಿಗೆಯಿಂದ ಸಮಮಾಡುವವನು ಬಡಿಗಲ್ಲಿನ ಮೇಲೆ ಹೊಡೆಯುವವನನ್ನು ಧೈರ್ಯಪಡಿಸಿದನು; ಬೇಸಿಗೆ ಚೆನ್ನಾಗಿದೆ ಎಂದು ಹೇಳಿ ಅದು ಕದಲದ ಹಾಗೆ ಮೊಳೆಗಳಿಂದ ಜಡಿದರು.
ಬಡಗಿಯು ನೂಲನ್ನು ಹಿಡಿದು ಗೆರೆ ಎಳೆದು ಬಾಚಿಯಿಂದ ಸಮಮಾಡಿ, ಕೈವಾರದಿಂದ ಗುರುತಿಸಿ, ಆಮೇಲೆ ಮನುಷ್ಯನ ಆಕಾ ರಕ್ಕೆ ತಂದು ಮನೆಯಲ್ಲಿ ವಾಸಿಸ ತಕ್ಕದ್ದಾಗಲೆಂದು ಮನುಷ್ಯನ ಅಂದದಂತೆ ರೂಪಿಸುವನು.
ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.
ಇಸ್ರಾಯೇಲಿನ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಈ ಒಡಂಬಡಿಕೆಯ ಮಾತುಗಳಿಗೆ ವಿಧೇಯನಾಗದ ಮನುಷ್ಯನಿಗೆ ಶಾಪವಿರಲಿ.
ಪರಲೋಕದ ಕರ್ತನಿಗೆ ವಿರೋಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿರುವಿ; ಆತನ ಆಲಯದ ಪಾತ್ರೆಗಳನ್ನು ನಿನ್ನ ಸನ್ನಿಧಿಗೆ ತಂದರು, ಆಗ ನೀನು, ನಿನ್ನ ಪ್ರಭುಗಳು ಮತ್ತು ಪತ್ನಿ ಉಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿಗಳಿಲ್ಲದ ಬೆಳ್ಳಿ ಬಂಗಾರ ಕಂಚು ಕಬ್ಬಿಣ ಮರ ಕಲ್ಲುಗಳ ದೇವರುಗಳನ್ನು ಸ್ತುತಿಸಿದಿ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗಳು ಯಾರ ಅಧೀನದಲ್ಲಿವೆಯೋ ಆ ದೇವರನ್ನು ಘನಪಡಿಸಲೇ ಇಲ್ಲ.