ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು.
Cross references
ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.
ಎಲ್ಲಾ ಜನಾಂಗಗಳು ಒಟ್ಟಿಗೆ ಕೂಡಿಕೊಳ್ಳಲಿ, ಎಲ್ಲಾ ಜನರೂ ಸೇರಿಕೊಳ್ಳಲಿ. ಅವರಲ್ಲಿ ಇದನ್ನು ಪ್ರಕಟಿಸುವವರೂ ಹಿಂದಿನವು ಗಳನ್ನು ನಮಗೆ ತೋರಿಸುವವರು ಯಾರು? ನಾವು ನೀತಿವಂತರೆಂದು ಸ್ಥಾಪಿಸಿಕೊಳ್ಳುವದಕ್ಕೆ ಸಾಕ್ಷಿಗಳನ್ನು ಕರತರಲಿ; ಆ ಸಾಕ್ಷಿಗಳು ಇದನ್ನು ಕೇಳಿ ನಿಜವೆಂದು ಹೇಳಲಿ.
ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ.
ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ನೋಡಿ ರಕ್ಷಣೆಯನ್ನು ಹೊಂದಿರಿ; ಯಾಕಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.
ಆರಂಭದಲ್ಲಿಯೇ ಅಂತ್ಯವನ್ನೂ ಪೂರ್ವಕಾಲದಿಂದ ಇನ್ನೂ ನಡೆಯದ ಸಂಗತಿಗಳನ್ನೂ ಪ್ರಕಟಿಸಿದ್ದೇನೆ; ನನ್ನ ಆಲೋಚನೆಯು ನಿಲ್ಲುವ ದೆಂದೂ ನಾನು ಮೆಚ್ಚಿದ್ದನ್ನೆಲ್ಲಾ ಮಾಡುವೆನೆಂದೂ ಅರುಹಿದ್ದೇನೆ.
ನೀವೆಲ್ಲರೂ ಕೂಡಿಕೊಂಡು ಕೇಳಿರಿ. ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವರು ಯಾರು? ಕರ್ತನು ಅವನನ್ನು ಪ್ರೀತಿಮಾಡಿದ್ದಾನೆ. ಆತನು ಬಾಬೆಲಿನಲ್ಲಿ ಅವನ ಇಷ್ಟವನ್ನು ನೆರವೇರಿಸುವನು; ಆತನ ಹಸ್ತವು ಕಸ್ದೀಯರ ಮೇಲಿರುವದು.
ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.
ಆತನು ನನ್ನನ್ನು ಮಹಿಮೆಪಡಿ ಸುವನು; ಆತನು ನನ್ನದರೊಳಗಿಂದ ತೆಗೆದುಕೊಂಡು ನಿಮಗೆ ತಿಳಿಯಪಡಿಸುವನು.