Home Bibles ಯೆಶಾಯ 41:23 · ಕನ್ನಡ ಬೈಬಲ್
ಯೆಶಾಯ 41:23 · ಕನ್ನಡ ಬೈಬಲ್

ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ.

Cross references

ಯೆಶಾಯ 19:12

ಅವರು ಎಲ್ಲಿದ್ದಾರೆ? ನಿನ್ನ ಜ್ಞಾನಿಗಳು ಎಲ್ಲಿ? ಅವರು ನಿನಗೆ ಹೇಳಲಿ. ಸೈನ್ಯಗಳ ಕರ್ತನು ಐಗುಪ್ತ್ಯರ ವಿಷಯವಾಗಿ ಉದ್ದೇಶಿಸಿದ್ದನ್ನು ಅವರು ತಿಳಿದು ಕೊಳ್ಳಲಿ.

ಯೆಶಾಯ 42:9

ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.

ಯೆಶಾಯ 44:7

ನಾನು ಪುರಾತನ ಕಾಲ ದವರನ್ನು ಇಟ್ಟಂದಿನಿಂದ ನನ್ನ ಹಾಗೆ ಕರೆದು, ತಿಳಿಸಿ ಅದನ್ನು ಸರಿಯಾಗಿ ನನಗೋಸ್ಕರ ಸಿದ್ಧಮಾಡಿದವನು ಯಾರು? ಮುಂದೆ ಬರುವವುಗಳನ್ನು ಬರಬೇಕಾದದ್ದನ್ನು ಅವರು ಅವರಿಗೆ ತಿಳಿಸಲಿ.

ಯೆಶಾಯ 45:3

ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು.

ಯೆಶಾಯ 45:7

ನಾನು ಬೆಳಕನ್ನು ರೂಪಿಸುವವನೂ ಕತ್ತಲನ್ನು ನಿರ್ಮಿಸುವವನೂ ಸಮಾಧಾನವನ್ನು ಮಾಡು ವವನೂ ಕೆಟ್ಟದ್ದನ್ನು ನಿರ್ಮಿಸುವವನೂ ನಾನೇ; ಕರ್ತ ನಾದ ನಾನೇ ಇವುಗಳನ್ನೆಲ್ಲಾ ಮಾಡುತ್ತೇನೆ.

ಯೆಶಾಯ 46:7

ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.

ಯೆಶಾಯ 46:9

ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.

ಯೆರೆಮಿಯ 10:5

ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.

ಯೋಹಾನ 13:19

ಅದು ಆಗುವಾಗ ನಾನೇ ಆತನೆಂದು ನೀವು ನಂಬುವಂತೆ ಅದು ಸಂಭವಿಸುವದಕ್ಕಿಂತ ಮುಂಚೆ ಈಗಲೇ ನಿಮಗೆ ಹೇಳುತ್ತೇನೆ.

ಅಪೋಸ್ತಲರ ಕೃತ್ಯಗಳು 15:18

ದೇವರು ತನ್ನ ಕಾರ್ಯಗಳನ್ನೆಲ್ಲಾ ಲೋಕಾದಿಯಿಂದ ತಿಳಿದಿದ್ದಾನೆ.

Interlinear

Choose Theme