Home Bibles ☰ Books ಯೆಶಾಯ 41:27 · ಕನ್ನಡ ಬೈಬಲ್
ಯೆಶಾಯ 41:27 · ಕನ್ನಡ ಬೈಬಲ್

ನಾನು ಮೊದಲನೆಯವನಾಗಿ ಚೀಯೋನಿಗೆ ಇಗೋ, ಅವ ರನ್ನು ನೋಡು ಎಂದು ಹೇಳಿ, ಶುಭ ಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.

Cross references

ಎಜ್ರಾ 1:1

ಯೆರೆವಿಾಯನ ಮುಖಾಂತರ ಕರ್ತನು ಹೇಳಿದ ವಾಕ್ಯವು ಈಡೇರುವ ಹಾಗೆ ಪಾರಸಿಯ ಅರಸನಾದ ಕೋರೆಷನ ಮೊದಲನೇ ವರುಷದಲ್ಲಿ ಕರ್ತನು ಪಾರಸಿಯ ಅರಸನಾದ ಕೋರೆಷನ ಆತ್ಮವನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲಿ ಎಲ್ಲೆಲ್ಲಿಯೂ ಸಾರೋಣದಿಂದಲೂ ಬರಹದಿಂದಲೂ ಹೇಳಿದ್ದೇನಂದರೆ--

ಯೆಶಾಯ 40:9

ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.

ಯೆಶಾಯ 41:4

ಇದನ್ನೆಲ್ಲಾ ನಡೆಯಿಸಿ ನೆರವೇರಿ ಸಿದವನು ಆದಿಯಿಂದ ತಲತಲಾಂತರಗಳನ್ನು ಬರ ಮಾಡಿದವನು ಯಾರು? ಕರ್ತನಾಗಿರುವ ನಾನೇ ಮೊದಲನೆಯವನು ಅಂತ್ಯಕಾಲದಲ್ಲಿ ಸಂಗಡಿಗನು ಆಗಿರುವಾತನೇ ನಾನು.

ಯೆಶಾಯ 43:10

ಕರ್ತನು ಹೇಳುವದೇನಂದರೆ--ನೀವು ನನ್ನ ಸಾಕ್ಷಿಗಳಾಗಿದ್ದೀರಿ; ನಾನೇ ಆತನೆಂದು ನೀವು ತಿಳಿದು ನಂಬಿ ಗ್ರಹಿಸುವ ಹಾಗೆಯೇ ನಾನು ನಿನ್ನನ್ನು ಸೇವಕನನ್ನಾಗಿ ಆರಿಸಿಕೊಂಡಿದ್ದೇನೆ. ನನಗಿಂತ ಮುಂಚೆ ಯೂ ನನ್ನ ನಂತರದಲ್ಲಿಯೂ ಯಾವ ದೇವರೂ ಇರಲಿಲ್ಲ.

ಯೆಶಾಯ 44:6

ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.

ಯೆಶಾಯ 44:28

ಕೋರೆಷನ ವಿಷಯ ವಾಗಿ--ಅವನು ನನ್ನ ಕುರುಬನು; ನನ್ನ ಇಚ್ಛೆಯನ್ನೆಲ್ಲಾ ಪೂರೈಸುವವನೂ ಯೆರೂಸಲೇಮಿಗೆ--ನೀನು ಕಟ್ಟಲ್ಪ ಡುವಿ; ದೇವಾಲಯಕ್ಕೆ--ನಿನ್ನ ಅಸ್ತಿವಾರವು ಹಾಕಲ್ಪಡು ವದೆಂದು ಅನ್ನುವವನು ನಾನೇ.

ಯೆಶಾಯ 48:3

ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು.

ಯೆಶಾಯ 48:12

ಓ ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು; ಆತನು--ನಾನೇ; ನಾನೇ ಮೊದಲನೆಯವನು, ನಾನೇ ಕಡೆಯವನು.

ಯೆಶಾಯ 52:7

ಒಳ್ಳೆಯ ಶುಭಸಮಾಚಾರವನ್ನು ತರುವವನ, ರಕ್ಷಣೆಯನ್ನು ಪ್ರಕಟಿಸುವವನ, ಚೀಯೋನಿಗೆ ನಿನ್ನ ದೇವರು ದೊರೆತನ ಮಾಡುತ್ತಾನೆ ಎಂದು ಹೇಳಿ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಪ್ರಕಟಿಸಿ ಹೇಳುವಾತನ ಪಾದಗಳು ಪರ್ವತಗಳ ಮೇಲೆ ಎಷ್ಟೋ ಅಂದವಾಗಿವೆ!

ನಹೂಮ 1:15

ಇಗೋ, ಬೆಟ್ಟಗಳ ಮೇಲೆ ಶುಭಸಮಾಚಾರವನ್ನು ತಂದು ಸಮಾಧಾನವನ್ನು ತಿಳಿಸುವವನ ಪಾದಗಳನ್ನು ನೋಡು. ಯೆಹೂದವೇ, ನಿನ್ನ ಪರಿಶುದ್ಧ ಹಬ್ಬಗಳನ್ನು ನಡೆಸು, ನಿನ್ನ ಪ್ರಮಾಣ ಗಳನ್ನು ಸಲ್ಲಿಸು; ಯಾಕಂದರೆ ಇನ್ನು ಮೇಲೆ ದುಷ್ಟನು ನಿನ್ನನ್ನು ಹಾದುಹೋಗನು; ಅವನು ಸಂಪೂರ್ಣವಾಗಿ ಕಡಿದು ಬಿಡಲ್ಪಟ್ಟಿದ್ದಾನೆ.

ಲೂಕ 2:10

ಆದರೆ ದೂತನು ಅವರಿಗೆ--ಹೆದರಬೇಡಿರಿ; ಯಾಕಂದರೆ ಇಗೋ, ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಒಳ್ಳೇಸಮಾಚಾರ ವನ್ನು ನಾನು ನಿಮಗೆ ತಿಳಿಯಪಡಿಸುತ್ತೇನೆ.

ರೋಮಾಪುರದವರಿಗೆ 10:15

ಇದ ಲ್ಲದೆ ಸಾರುವವರನ್ನು ಕಳುಹಿಸದಿದ್ದರೆ ಅವರು ಸಾರು ವದು ಹೇಗೆ? ಮತ್ತು--ಸಮಾಧಾನದ ಸುವಾರ್ತೆ ಯನ್ನು ಸಾರುವವರ ಮತ್ತು ಸಂತೋಷದ ಸುವರ್ತ ಮಾನವನ್ನು ತರುವವರ ಪಾದಗಳು ಎಷ್ಟೋ ಅಂದ ವಾಗಿವೆ ಎಂದು ಬರೆದದೆ.

ಪ್ರಕಟನೆ 2:8

ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ: ಮೊದ ಲನೆಯವನೂ ಕಡೆಯವನೂ ಸತ್ತವನಾಗಿದ್ದು ಈಗ ಬದುಕುವಾತನೂ ಹೇಳುವವುಗಳು ಯಾವವೆಂದರೆ,

Interlinear

Choose Theme