Home Bibles ಯೆಶಾಯ 42:18 · ಕನ್ನಡ ಬೈಬಲ್
ಯೆಶಾಯ 42:18 · ಕನ್ನಡ ಬೈಬಲ್

ಕಿವುಡರೇ, ಕೇಳಿರಿ; ಕುರುಡರೇ ನೀವು ದೃಷ್ಟಿಸಿ ನೋಡಿರಿ.

Cross references

ನಿರ್ಗಮಕಾಂಡ 4:11

ಅದಕ್ಕೆ ಕರ್ತನು ಅವನಿಗೆ--ಮನುಷ್ಯನಿಗೆ ಬಾಯಿ ಕೊಟ್ಟಾತನೂ ಮೂಕರನ್ನೂ ಕಿವುಡರನ್ನೂ ದೃಷ್ಟಿಯುಳ್ಳವರನ್ನೂ ಕುರುಡರನ್ನೂ ಉಂಟುಮಾಡಿ ದಾತನೂ ಯಾರು? ಕರ್ತನಾದ ನಾನೇ ಅಲ್ಲವೋ?

ಸಾಮೇತಿಗಳು 20:12

ಕೇಳುವ ಕಿವಿ ನೋಡುವ ಕಣ್ಣು, ಇವೆರಡನ್ನು ಕರ್ತನು ಮಾಡಿದ್ದಾನೆ.

ಯೆಶಾಯ 29:18

ಆ ದಿನದಲ್ಲಿ ಕಿವುಡರು ಪುಸ್ತಕದ ಮಾತುಗಳನ್ನು ಕೇಳುವರು ಕುರುಡರ ಕಣ್ಣುಗಳು ಕತ್ತಲೆಯೊಳಗಿಂದಲೂ ಅಂಧಕಾರದೊಳಗಿಂದಲೂ ನೋಡುವವು.

ಯೆಶಾಯ 35:5

ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.

ಯೆಶಾಯ 43:8

ಕಣ್ಣಿದ್ದರೂ ಕುರುಡರಾದ, ಕಿವಿಯಿದ್ದರೂ ಕಿವುಡ ರಾದ ಜನರನ್ನು ಕರೆ.

ಮಾರ್ಕ 7:34

ಮತ್ತು ಆತನು ಪರಲೋಕದ ಕಡೆಗೆ ನೋಡುತ್ತಾ ನಿಟ್ಟುಸಿರುಬಿಟ್ಟು ಅವನಿಗೆ--ಎಪ್ಫಥಾ ಅಂದನು. ಅಂದರೆ ತೆರೆಯಲ್ಪಡಲಿ ಎಂದರ್ಥ.

ಲೂಕ 7:22

ತರು ವಾಯ ಯೇಸು ಪ್ರತ್ಯುತ್ತರವಾಗಿ ಅವರಿಗೆ--ಕುರು ಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠ ರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತದೆ ಎಂದು ನೀವು ಕಂಡು ಕೇಳಿದ ಇವು ಗಳನ್ನು

ಪ್ರಕಟನೆ 3:17

ನೀನು--ನಾನು ಐಶ್ವರ್ಯವಂತನು, ಧನವೃದ್ಧಿಯುಳ್ಳವನು, ಯಾವದರ ಲ್ಲಿಯೂ ಕೊರತೆಯಿಲ್ಲದವನು ಎಂದು ಹೇಳಿಕೊಳ್ಳುತ್ತೀ; ಆದರೆ ನೀನು ಕೇವಲ ನಿರ್ಗತಿಕನು, ದರಿದ್ರನು, ಬಡವನು, ಕುರುಡನು, ಬೆತ್ತಲೆಯಾದವನು ಆಗಿರುವ ದನ್ನು ತಿಳಿಯದೆ ಇದ್ದೀ.

Interlinear

Choose Theme