Cross references
ಓ ಇಸ್ರಾಯೇಲೇ, ಕೇಳು, ನಮ್ಮ ದೇವರಾದ ಕರ್ತನು ಒಬ್ಬನೇ ಕರ್ತನು.
ಇಗೋ, ದೇವರೇ ನನ್ನ ರಕ್ಷಣೆಯು; ನಾನು ಭರ ವಸವಿಡುವೆನು ಮತ್ತು ಭಯಪಡೆನು; ಕರ್ತನಾದ ಯೆಹೋವನೇ ನನ್ನ ಬಲವೂ ಕೀರ್ತನೆಯೂ ಆತನೇ ನನಗೆ ರಕ್ಷಣೆಯೂ ಆಗಿದ್ದಾನೆ.
ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
ಹೆದರಬೇಡಿರಿ ಇಲ್ಲವೆ ಭಯಪಡಬೇಡಿರಿ ನಾನು ಪೂರ್ವದಿಂದಲೂ ನಿಮಗೆ ಹೇಳಲಿಲ್ಲವೋ? ಅದನ್ನು ಪ್ರಕಟಿಸಲಿ ಲ್ಲವೋ? ಅಂತೂ ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರು ಇದ್ದಾನೋ? ಹೌದು, ಇನ್ನು ಯಾವ ದೇವರೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.
ನೀವು ಹೇಳಿರಿ ಮತ್ತು ಅವರನ್ನು ಸವಿಾಪಕ್ಕೆ ತನ್ನಿರಿ; ಹೌದು, ಒಟ್ಟಿಗೆ ಅವರು ಆಲೋಚಿಸಲಿ; ಈ ಸಂಗತಿಗಳನ್ನು ಪುರಾತನ ಕಾಲದಿಂದಲೂ ಪ್ರಕಟಿಸಿದವರು ಯಾರು? ಆ ಕಾಲ ದಿಂದ ತಿಳಿಸಿದವನು ಯಾರು? ಕರ್ತನಾದ ನಾನೇ ಅಲ್ಲವೇ? ನನ್ನ ಹೊರತು ಬೇರೆ ದೇವರು ಇಲ್ಲವೇ ಇಲ್ಲ, ನನ್ನ ಹೊರತಾಗಿ ನೀತಿಯುಳ್ಳ ದೇವರೂ ರಕ್ಷಕನೂ ಇಲ್ಲವೇ ಇಲ್ಲ.
ನಾನು ಯೆಹೂದದ ಮನೆತನದವರನ್ನು ಕರುಣಿಸಿ ಅವರನ್ನು ಬಿಲ್ಲಿನಿಂದಲಾದರೂ ಕತ್ತಿಯಿಂದಲಾದರೂ ಯುದ್ಧದಿಂದಲಾದರೂ ಕುದುರೆಗಳಿಂದಲಾದರೂ ಇಲ್ಲವೆ ಕುದುರೆಯ ಸವಾರರಿಂದಲಾದರೂ ರಕ್ಷಿಸು ವದಿಲ್ಲ; ಆದರೆ ಅವರನ್ನು ಅವರ ದೇವರಾದ ಕರ್ತ ನಿಂದ ರಕ್ಷಿಸುವೆನು ಅಂದನು.
ಆದಾಗ್ಯೂ ನಾನು ಐಗುಪ್ತದಿಂದ ನಿನ್ನ ದೇವರಾಗಿರುವ ಕರ್ತನಾಗಿದ್ದೇನೆ, ನೀನು ನನ್ನ ಹೊರತು ಯಾವ ದೇವರನ್ನೂ ತಿಳಿದುಕೊಳ್ಳಬಾರದು; ಯಾಕಂದರೆ ನನ್ನ ಹೊರತು ನಿನಗೆ ಬೇರೆ ರಕ್ಷಕನು ಇಲ್ಲ.
ಆಗ ಕರ್ತನು ಆ ವಿಾನಿಗೆ ಹೇಳಿದ್ದರಿಂದ ಅದು ಯೋನನನ್ನು ಒಣ ಭೂಮಿಯ ಮೇಲೆ ಕಾರಿಬಿಟ್ಟಿತು.
ನನ್ನ ಆತ್ಮವು ನನ್ನ ರಕ್ಷಕನಾದ ದೇವರಲ್ಲಿ ಉಲ್ಲಾಸಗೊಂಡಿದೆ;
ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕನು ಹುಟ್ಟಿದ್ದಾನೆ; ಆತನು ಕರ್ತನಾಗಿರುವ ಕ್ರಿಸ್ತನೇ.
ನಾನು ಅವುಗಳಿಗೆ ನಿತ್ಯಜೀವವನ್ನು ಕೊಡುತ್ತೇನೆ; ಅವು ಎಂದಿಗೂ ನಾಶವಾಗುವದಿಲ್ಲ; ಇಲ್ಲವೆ ಅವು ಗಳನ್ನು ಯಾವನೂ ನನ್ನ ಕೈಯೊಳಗಿಂದ ಕಸಕೊಳ್ಳ ಲಾರನು.
ರಕ್ಷಣೆಯು ಇನ್ನಾರಲ್ಲಿಯೂ ಇಲ್ಲ; ಯಾಕಂದರೆ ಆಕಾಶದ ಕೆಳಗೆ ಮನುಷ್ಯರಲ್ಲಿ ಕೊಡ ಲ್ಪಟ್ಟಿರುವ ಬೇರೆ ಯಾವ ಹೆಸರಿನಿಂದಲೂ ನಮಗೆ ರಕ್ಷಣೆಯಾಗುವದಿಲ್ಲ ಎಂದು ಹೇಳಿದನು.
ಯಾವದನ್ನೂ ಕದ್ದಿಟ್ಟು ಕೊಳ್ಳದೆ ಪೂರಾ ನಂಬಿಗಸ್ತರೆಂದು ತೋರಿಸಿಕೊಂಡು ನಮ್ಮ ರಕ್ಷಕನಾದ ದೇವರ ಉಪದೇಶಕ್ಕೆ ಎಲ್ಲಾ ವಿಷಯ ಗಳಲ್ಲಿ ಅಲಂಕಾರವಾಗಿರಬೇಕೆಂದು ಎಚ್ಚರಿಸು.
ನಾವು ಭಾಗ್ಯಕರವಾದ ನಿರೀಕ್ಷೆಯನ್ನೂ ಮಹತ್ತಾದ ದೇವರ ಮತ್ತು ನಮ್ಮ ರಕ್ಷಕನಾದ ಯೇಸು ಕ್ರಿಸ್ತನ ಪ್ರಭಾವದ ಪ್ರತ್ಯಕ್ಷತೆಯನ್ನೂ ಎದುರು ನೋಡುವವರಾಗಿದ್ದೇವೆ.
ಆದರೆ ನಮ್ಮ ರಕ್ಷಕನಾದ ದೇವರ ದಯೆಯೂ ಪ್ರೀತಿಯೂ ಮನುಷ್ಯನ ಕಡೆಗೆ ಪ್ರತ್ಯಕ್ಷವಾದಾಗ
ಕೃಪೆಯಲ್ಲಿಯೂ ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ವಿಷಯವಾದ ಜ್ಞಾನದಲ್ಲಿಯೂ ಬೆಳೆಯಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆ ಇರಲಿ. ಆಮೆನ್.
ತಂದೆಯು ಮಗನನ್ನು ಲೋಕರಕ್ಷಕನನ್ನಾಗಿ ಕಳುಹಿಸಿಕೊಟ್ಟಿರುವದನ್ನು ನಾವು ನೋಡಿದ್ದೇವೆ ಮತ್ತು ಸಾಕ್ಷಿ ಹೇಳುತ್ತೇವೆ.
ದೇವರ ಮಗನು ಬಂದು ನಾವು ಸತ್ಯವಾಗಿರುವಾತ ನನ್ನು ಅರಿತುಕೊಳ್ಳುವ ಹಾಗೆ ನಮಗೆ ತಿಳುವಳಿಕೆಯನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ನಾವು ಆ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಈತನೇ ಸತ್ಯ ದೇವರೂ ನಿತ್ಯಜೀವವೂ ಆಗಿದ್ದಾನೆ.ಚಿಕ್ಕ ಮಕ್ಕಳೇ, ವಿಗ್ರಹಗಳಿಗೆ ದೂರವಾಗಿರುವಂತೆ ನಿಮ್ಮನ್ನು ಕಾಪಾಡಿಕೊಳ್ಳಿರಿ. ಆಮೆನ್.
ಒಬ್ಬನೇ ಜ್ಞಾನವುಳ್ಳ ನಮ್ಮ ರಕ್ಷಕನಾದ ದೇವರಿಗೆ ಪ್ರಭಾವ ಮಹತ್ವ ಆಧಿಪತ್ಯ ಅಧಿಕಾರಗಳು ಈಗಲೂ ಯಾವಾಗಲೂ ಇರಲಿ. ಆಮೆನ್.
ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
ನಾನು ಆತನನ್ನು ಕಂಡಾಗ ಸತ್ತವನ ಹಾಗೆ ಆತನ ಪಾದಗಳ ಮುಂದೆ ಬಿದ್ದೆನು. ಆತನು ತನ್ನ ಬಲಗೈಯನ್ನು ನನ್ನ ಮೇಲಿಟ್ಟು--ಹೆದರಬೇಡ, ನಾನು ಮೊದಲನೆಯ ವನೂ ಕಡೆಯವನೂ ಆಗಿದ್ದೇನೆ.
ಅವರು--ರಕ್ಷಣೆಯು ಸಿಂಹಾಸನದ ಮೇಲೆ ಕೂತಿರುವ ನಮ್ಮ ದೇವರಿಗೂ ಕುರಿಮರಿಯಾದಾತನಿಗೂ ಸೇರಿದ್ದು ಎಂದು ಮಹಾ ಶಬ್ದದಿಂದ ಕೂಗಿದರು.