ಯಾವಾತನು ಸಮುದ್ರ ದಲ್ಲಿ ದಾರಿಮಾಡಿ ಜಲಪ್ರವಾಹಗಳಲ್ಲಿ ಮಾರ್ಗವನ್ನು ಏರ್ಪಡಿಸಿದನೋ.
Cross references
ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು. ಆಗ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ಹೋಗುವರು.
ಆಗ ಮೋಶೆಯು ಸಮುದ್ರದ ಮೇಲೆ ತನ್ನ ಕೈಚಾಚಲಾಗಿ ಕರ್ತನು ರಾತ್ರಿಯೆಲ್ಲಾ ಬಲವಾದ ಮೂಡಣ ಗಾಳಿಯಿಂದ ಸಮುದ್ರವು ಹಿಂದಕ್ಕೆ ಹೋಗುವಂತೆ ಮಾಡಿ ಸಮುದ್ರವನ್ನು ಒಣನೆಲವನ್ನಾಗಿ ಮಾಡಿದನು; ಆಗ ನೀರುಗಳು ವಿಭಾಗವಾದವು.
ಆದರೆ ಇಸ್ರಾಯೇಲ್ ಮಕ್ಕಳು ಸಮುದ್ರದ ಮಧ್ಯದಲ್ಲಿ ಒಣ ಗಿದ ನೆಲದಮೇಲೆ ನಡೆದುಹೋದರು. ನೀರು ಅವರಿಗೆ ಎಡಬಲಗಳಲ್ಲಿ ಗೋಡೆಯಾಗಿತ್ತು.
ಆಗ ಆಗುವದೇನಂದರೆ, ಸಮಸ್ತ ಭೂಮಿಗೂ ಕರ್ತನಾಗಿರುವ ಕರ್ತನ ಆ ಮಂಜೂಷ ವನ್ನು ಹೊರುವ ಯಾಜಕರ ಅಂಗಾಲುಗಳು ಯೊರ್ದ ನಿನ ನೀರಲ್ಲಿ ಇಟ್ಟಾಗಲೇ ನದಿಯ ನೀರು ಭೇದಿಸಲ್ಪಟ್ಟು ಮೇಲಿನಿಂದ ಹರಿದು ಬರುವ ನೀರು ಹರಿಯದೆ ರಾಶಿಯಾಗಿ ನಿಲ್ಲುವದು ಎಂದು ಹೇಳಿದನು.
ನೀನು ಅವರ ಮುಂದೆ ಸಮುದ್ರವನ್ನು ವಿಭಾಗಿಸಿದ್ದರಿಂದ ಅವರು ಸಮುದ್ರದ ಮಧ್ಯದಲ್ಲಿ ಒಣ ಭೂಮಿಯಲ್ಲಿ ಹಾದುಹೋದರು. ಆದರೆ ಅವರನ್ನು ಹಿಂದಟ್ಟಿದವರನ್ನು ಅಗಾಧಗಳಲ್ಲಿ ಕಲ್ಲಿನ ಹಾಗೆ ಮಹಾ ಜಲರಾಶಿಗಳಲ್ಲಿ ದೊಬ್ಬಿ ಬಿಟ್ಟಿ.
ನೀನು ನಿನ್ನ ಬಲದಿಂದ ಸಮುದ್ರವನ್ನು ಭೇದಿಸಿದಿ; ತಿಮಿಂಗಿಲಗಳ ತಲೆಗಳನ್ನು ನೀರುಗಳಲ್ಲಿ ಜಜ್ಜಿಬಿಟ್ಟಿ.
ನಿನ್ನ ಮಾರ್ಗವು ಸಮುದ್ರದಲ್ಲಿ ಅದೆ; ನಿನ್ನ ಹಾದಿಯು ಬಹಳ ನೀರುಗಳಲ್ಲಿ ಅವೆ; ನಿನ್ನ ಹೆಜ್ಜೆಗಳು ತಿಳಿಯ ಲ್ಪಡಲಿಲ್ಲ.ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
ಮೋಶೆ ಆರೋನರ ಕೈಯಿಂದ ನಿನ್ನ ಜನರನ್ನು ಮಂದೆಯ ಹಾಗೆ ನಡಿಸಿದಿ.
ಆತನು ಸಮುದ್ರವನ್ನು ವಿಭಾಗಿಸಿ ಅವರನ್ನು ದಾಟಿಸಿದನು; ನೀರನ್ನು ಕುಪ್ಪೆಯಾಗಿ ನಿಲ್ಲಿಸಿ ದನು.
ಆತನು ಕೆಂಪು ಸಮುದ್ರವನ್ನು ಗದರಿಸಲು ಅದು ಒಣಗಿ ಹೋಯಿತು. ಹೀಗೆ ಜಲಾಗಾಧದಲ್ಲಿ, ಅರಣ್ಯ ದಲ್ಲಿದ್ದ ಹಾಗೆಯೇ ಆತನು ಅವರನ್ನು ನಡಿಸಿದನು.
ಸಮುದ್ರವು ನೋಡಿ ಓಡಿಹೋಯಿತು; ಯೊರ್ದನ್ ಹಿಂತಿರುಗಿತು.
ಕೆಂಪು ಸಮುದ್ರವನ್ನು ವಿಭಾಗಿಸಿದಾತನನ್ನು ಕೊಂಡಾ ಡಿರಿ; ಆತನ ಕರುಣೆಯು ಎಂದೆಂದಿಗೂ ಅದೆ.
ಕರ್ತನು ಐಗುಪ್ತ ಸಮುದ್ರದ ನಾಲಿಗೆಯನ್ನು ಸಂಪೂರ್ಣವಾಗಿ ನಾಶಮಾಡುವನು; ಆತನು ತನ್ನ ಬಲವಾದ ಗಾಳಿಯಿಂದ ನದಿಯ ಮೇಲೆ ಕೈಯನ್ನು ಜಾಡಿಸಿ ಅದನ್ನು ಏಳು ಹೊಳೆಗಳಾಗಿ ಹೊಡೆದು ಮನುಷ್ಯರ ಕೆರಗಳು ನೆನೆಯದಂತೆ ದಾಟಿಸು ವನು.ಇದಲ್ಲದೆ ಇಸ್ರಾಯೇಲ್ಯರು ಐಗುಪ್ತದೇಶ ದಿಂದ ಹೊರಟುಬಂದ ಕಾಲದಲ್ಲಿ ಅವರಿಗೆ ಹೇಗೆ ಮಾರ್ಗವು ಇತ್ತೋ ಹಾಗೆಯೇ ಅಶ್ಶೂರದಿಂದ ತಪ್ಪಿಸಿ ಕೊಂಡು ಬರುವ ತನ್ನ ಉಳಿದ ಜನರಿಗೆ ವಿಶಾಲ ವಾದ ಮಾರ್ಗವು ಇರುವದು.
ನೀನು ಜಲರಾಶಿಯನ್ನು ದಾಟಿ ಹೋಗುವಾಗ ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ ಅವು ನಿನ್ನನ್ನು ಮುಳುಗಿಸುವದಿಲ್ಲ; ಬೆಂಕಿಯಲ್ಲಿ ನೀನು ನಡೆಯುವಾಗ ಸುಡಲ್ಪಡುವದಿಲ್ಲ; ಇಲ್ಲವೆ ಜ್ವಾಲೆಯು ನಿನ್ನನ್ನು ದಹಿಸದು.
ಸಮುದ್ರವನ್ನೂ ದೊಡ್ಡ ಅಗಾಧದ ನೀರನ್ನು ಬತ್ತಿಸಿ, ವಿಮುಕ್ತರಾದವರು ಹಾದು ಹೋಗುವದಕ್ಕೆ ಸಮು ದ್ರದ ತಳವನ್ನು ಮಾರ್ಗವನ್ನಾಗಿ ಮಾಡಿದಂಥವನು ನೀನಲ್ಲವೋ?
ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
ಆಗ ಆತನು ಪೂರ್ವಕಾಲದ ದಿನ ಗಳನ್ನು ಮೋಶೆಯನ್ನೂ ತನ್ನ ಜನರನ್ನೂ ಜ್ಞಾಪಕ ಮಾಡಿಕೊಂಡು--ಅವರನ್ನು ತನ್ನ ಮಂದೆಯ ಕುರುಬನ ಸಂಗಡ ಸಮುದ್ರದೊಳಗಿಂದ ಏರ ಮಾಡಿದವನು ಎಲ್ಲಿ? ಅವನ ಮಧ್ಯದಲ್ಲಿ ತನ್ನ ಪರಿಶುದ್ಧಾತ್ಮನನ್ನು ಇಟ್ಟವನು ಎಲ್ಲಿ?
ತಮ್ಮ ಕುಮಾರ ಕುಮಾರ್ತೆಯರನ್ನು ಮೋಲೆಕನಿಗೆ ಬೆಂಕಿ ದಾಟಿಸುವ ಹಾಗೆ ಹಿನ್ನೋಮನ ಮಗನ ಉನ್ನತ ಸ್ಥಳಗಳನ್ನು ಕಟ್ಟಿಸಿದ್ದಾರೆ; ಅದನ್ನು ನಾನು ಅವರಿಗೆ ಆಜ್ಞಾಪಿಸಲಿಲ್ಲ; ಅಂಥಾ ಅಸಹ್ಯ ನಡಿಸಿ, ಯೆಹೂದ ವನ್ನು ಪಾಪ ಮಾಡಿಸುವದು ನನ್ನ ಮನಸ್ಸಿನೊಳಗೆ ಬರಲಿಲ್ಲ.
ಆರನೆಯ ದೂತನು ತನ್ನ ಪಾತ್ರೆಯಲ್ಲಿದ್ದದ್ದನ್ನು ಯೂಫ್ರೇಟೀಸ್ ಮಹಾನದಿಯ ಮೇಲೆ ಹೊಯ್ಯಲು ಮೂಡಣ ದಿಕ್ಕಿನಿಂದ ಬರುವ ರಾಜರಿಗೆ ಮಾರ್ಗವು ಸಿದ್ಧವಾಗುವಂತೆ ಅದರ ನೀರು ಬತ್ತಿ ಹೋಯಿತು.