ದೇವರನ್ನು ರೂಪಿ ಸುವವರೂ ಇಲ್ಲವೆ ಕೆತ್ತಿದ ವ್ಯರ್ಥವಾದ ವಿಗ್ರಹವನ್ನು ಎರಕ ಹೊಯ್ಯುವವರು ಯಾರು?
Cross references
ಎಂದು ಅರಸನು ಆಲೋ ಚನೆ ಕೇಳಿಕೊಂಡು ಎರಡು ಬಂಗಾರದ ಹೋರಿಗ ಳನ್ನು ಮಾಡಿಸಿ ಜನರಿಗೆ--ಯೆರೂಸಲೇಮಿನ ವರೆಗೂ ಹೋಗುವದು ನಿಮಗೆ ಕಷ್ಟವಾಗಿದೆ. ಓ ಇಸ್ರಾಯೇಲೇ, ಇಗೋ, ಐಗುಪ್ತದಿಂದ ನಿನ್ನನ್ನು ಬರಮಾಡಿದ ನಿನ್ನ ಈ ದೇವರುಗಳು ಅಂದನು.
ಅವರ ವಿಗ್ರಹಗಳು ಬೆಳ್ಳಿಯೂ ಬಂಗಾರವೂ ಮನುಷ್ಯನ ಕೈಕೆಲಸವೂ ಆಗಿವೆ.
ಇಗೋ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ಶೂನ್ಯವೇ. ಅವರ ಕೆತ್ತಿದ ವಿಗ್ರಹಗಳು ಗಾಳಿ ಮತ್ತು ಗಲಿಬಿಲಿಯೇ.
ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
ಈ ದಿನ ಇರುವ ಹಾಗೆ ಹಾಲೂ ಜೇನೂ ಹರಿಯುವ ದೇಶವನ್ನು ಅವರಿಗೆ ಕೊಡುವದಕ್ಕೆ ನಿಮ್ಮ ತಂದೆಗಳಿಗೆ ಆಣೆ ಇಟ್ಟ ಪ್ರಮಾಣವನ್ನು ಈಡೇರಿಸುವೆನು ಎಂಬದೇ ಆಗ ನಾನು ಉತ್ತರಕೊಟ್ಟು--ಓ ಕರ್ತನೇ, ಹಾಗೆಯೇ ಆಗಲಿ ಅಂದೆನು.
ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು.
ಆಗ ನೆಬೂಕದ್ನೆಚ್ಚರನು ಮಾತನಾಡಿ ಅವರಿಗೆ--ಶದ್ರಕ್ ಮೇಷಕ್ ಅಬೇದೆನೆಗೋ ಎಂಬ ವರೇ ನೀವು ಬೇಕೆಂದು ನನ್ನ ದೇವರನ್ನು ಸೇವಿಸದೆ ನಾನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾ ಧಿಸದೆ ಇರಬೇಕೆಂದಿರುವಿರೋ?
ಅದನ್ನು ಕೆತ್ತಿ ರೂಪಿಸಿದವನ ಕೆತ್ತಿದ ವಿಗ್ರಹದಿಂದ ಪ್ರಯೋಜನವೇನು? ಸುಳ್ಳನ್ನು ಬೋಧಿಸುವಂಥ, ಅದನ್ನು ರೂಪಿಸಿದವನು ಮೂಕ ಬೊಂಬೆಗಳನ್ನು ಮಾಡಿ ಅದರಲ್ಲಿ ನಂಬಿಕೆಯಿಡು ವಂಥ, ಎರಕದ ವಿಗ್ರಹದಿಂದ ಪ್ರಯೋಜನವೇನು?
ಆದರೆ ಕೈಯಿಂದ ಮಾಡಿದವುಗಳು ದೇವರುಗಳಲ್ಲವೆಂದು ಈ ಪೌಲನು ಹೇಳಿ ಎಫೆಸದಲ್ಲಿ ಮಾತ್ರವಲ್ಲದೆ ಸ್ವಲ್ಪ ಕಡಿಮೆ ಆಸ್ಯ ಸೀಮೆಯಲ್ಲೆಲ್ಲಾ ಬಹಳ ಜನರನ್ನು ಒಡಂಬಡಿಸಿ ತಿರುಗಿಸಿ ಬಿಟ್ಟಿದ್ದಾನೆಂಬದನ್ನು ನೀವು ನೋಡುತ್ತೀರಿ
ವಿಗ್ರಹಗಳಿಗೆ ಸಮರ್ಪಣೆ ಮಾಡಿದವುಗಳನ್ನು ತಿನ್ನುವದರ ವಿಷ ಯದಲ್ಲಿ ನಾನು ಹೇಳುವದೇನಂದರೆ, ಜಗತ್ತಿನಲ್ಲಿ ವಿಗ್ರಹವು ಏನೂ ಅಲ್ಲವೆಂದೂ ಒಬ್ಬ ದೇವರಿದ್ದಾನೆ ಹೊರತು ಬೇರೆ ದೇವರಿಲ್ಲವೆಂದೂ ನಾವು ಬಲ್ಲೆವು.