Home Bibles ☰ Books ಯೆಶಾಯ 45:9 · ಕನ್ನಡ ಬೈಬಲ್
ಯೆಶಾಯ 45:9 · ಕನ್ನಡ ಬೈಬಲ್

ತನ್ನನ್ನು ರೂಪಿಸಿದವನ ಸಂಗಡ ವಾದ ಮಾಡುವವ ನಿಗೆ ಅಯ್ಯೋ! ಬೋಕಿಯು ಭೂಮಿಯ ಬೋಕಿಯ ಸಂಗಡವಾದ ಮಾಡಲಿ; ಮಣ್ಣು ರೂಪಿಸುವವನಿಗೆ --ನೀನು ಏನು ಮಾಡುತ್ತೀ ಎಂದೂ ನಿನ್ನ ಕೆಲಸವು --ಅವನಿಗೆ ಕೈಯಿಲ್ಲ ಅಂದೀತೇ?

Cross references

ನಿರ್ಗಮಕಾಂಡ 9:16

ಆದರೆ ನಿಶ್ಚಯವಾಗಿ ನನ್ನ ಬಲವನ್ನು ನಿನಗೆ ತೋರಿಸುವ ಹಾಗೆಯೂ ನನ್ನ ಹೆಸರು ಭೂಲೋಕದಲ್ಲೆಲ್ಲಾ ತಿಳಿಸಲ್ಪಡುವಂತೆಯೂ ನಿನ್ನನ್ನು ಎಬ್ಬಿಸಿದ್ದೇನೆ.

ಯೋಬ 9:4

ಆತನು ಹೃದಯದಲ್ಲಿ ಜ್ಞಾನಿಯೂ ಬಲದಲ್ಲಿ ಶಕ್ತನೂ ಆಗಿದ್ದಾನೆ; ಆತನಿಗೆ ವಿರೋಧವಾಗಿ ತನ್ನನ್ನು ಕಠಿಣಪಡಿಸಿಕೊಂಡು ವೃದ್ಧಿಯಾಗುವವನು ಯಾರು?

ಯೋಬ 9:12

ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು?

ಯೋಬ 10:9

ಕುಂಬಾ ರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀ ಎಂದು ಜ್ಞಾಪಕ ಮಾಡಿಕೋ ಎಂದು ಬೇಡಿಕೊಳ್ಳುತ್ತೇನೆ; ಆದಾಗ್ಯೂ ನನ್ನನ್ನು ಧೂಳಿಗೆ ತಿರುಗಿಸುತ್ತಿಯೋ?

ಯೋಬ 15:24

ಇಕ್ಕಟ್ಟೂ ಸಂಕಟವೂ ಅವನನ್ನು ಹೆದರಿಸಿ, ಯುದ್ದಕ್ಕೆ ಸಿದ್ಧವಾದ ಅರಸನಂತೆ ಅವನ ಮೇಲೆ ಬೀಳುತ್ತವೆ.

ಯೋಬ 40:2

ಸರ್ವಶಕ್ತನ ಸಂಗಡ ವಾದಿಸುವವನು ಆತನಿಗೆ ಶಿಕ್ಷಣ ಕೊಡುವನೋ? ದೇವರನ್ನು ಗದರಿಸು ವವನು ಅದಕ್ಕೆ ಉತ್ತರಕೊಡಲಿ ಎಂದು ಹೇಳಿದನು.

ಯೋಬ 40:8

ನೀನು ನನ್ನ ನ್ಯಾಯತೀರ್ವಿಕೆಯನ್ನು ತೆಗೆದುಹಾಕುವಿಯೋ? ನೀನು ನೀತಿವಂತ ನಾಗುವ ಹಾಗೆ ನನ್ನನ್ನು ಖಂಡಿಸುವಿಯೋ?

ಕೀರ್ತನೆಗಳು 2:2

ಕರ್ತನಿಗೆ ವಿರೋಧ ವಾಗಿಯೂ ಆತನ ಅಭಿಷಕ್ತನಿಗೆ ವಿರೋಧವಾಗಿಯೂ ಭೂರಾಜರು ನಿಂತುಕೊಳ್ಳುತ್ತಾರೆ; ಪ್ರಭುಗಳು ಒಟ್ಟಾಗಿ ಆಲೋಚಿಸುತ್ತಾರೆ.

ಸಾಮೇತಿಗಳು 21:30

ಕರ್ತನಿಗೆ ವಿರೋಧವಾಗಿ ಯಾವ ಜ್ಞಾನವೂ ವಿವೇಕವೂ ಆಲೋಚನೆಯೂ ಇಲ್ಲ.ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ; ಭದ್ರತೆಯು ಕರ್ತನಿಂದಲೇ.

ಸಭಾಪ್ರಸಂಗಿ 6:10

ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.

ಯೆಶಾಯ 10:15

ಕೊಡಲಿಯು ಕಡಿಯುವವನಿಗೆ ವಿರುದ್ಧವಾಗಿ ಕೊಚ್ಚಿಕೊಂಡೀತೆ? ಇಲ್ಲವೆ ಗರಗಸವು ತನ್ನನ್ನು ಎಳೆಯುವವನ ಮೇಲೆ ಹೆಚ್ಚಿಸಿ ಕೊಂಡೀತೇ? ಕೋಲು ತನ್ನನ್ನು ಎತ್ತಿದವನ ಮೇಲೆಯೇ ಬೀಸುವಂತೆ ಅಥವಾ ಬೆತ್ತವು ತಾನು ಮರವಲ್ಲ ಎಂಬಂತೆ ತನ್ನನ್ನು ತಾನು ಎತ್ತಿಕೊಂಡ ಹಾಗೆ ಇರುವದು.

ಯೆಶಾಯ 29:16

ಖಂಡಿತವಾಗಿಯೂ ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿ ಮಣ್ಣಿನಂತೆ ಎಣಿಸಲ್ಪಡುವದು; ಮಾಡಿದವನಿಗೆ ಮಾಡ ಲ್ಪಟ್ಟದ್ದು--ಆತನು ನನ್ನನ್ನು ಮಾಡಲಿಲ್ಲ ಎಂದು ಹೇಳು ವದೋ? ಇಲ್ಲವೆ ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸ ಲ್ಪಟ್ಟದ್ದು--ಆತನಿಗೆ ವಿವೇಕವಿಲ್ಲವೆಂದು ಹೇಳುವ ದೋ?

ಯೆಶಾಯ 64:7

ನಿನ್ನ ಹೆಸರನ್ನು ಕರೆಯುವವನೂ ನಿನ್ನನ್ನು ಹಿಡು ಕೊಳ್ಳುವದಕ್ಕೆ ತನ್ನನ್ನು ಪ್ರೇರಿಸಿಕೊಳ್ಳುವವನು ಒಬ್ಬನೂ ಇಲ್ಲ; ನಿನ್ನ ಮುಖವನ್ನು ನಮಗೆ ಮರೆಮಾಡಿದ್ದೀ; ನಮ್ಮ ಅಕ್ರಮಗಳಿಗಾಗಿ ನಮ್ಮನ್ನು ದಹಿಸಿಬಿಟ್ಟಿದ್ದೀ.

ಯೆಶಾಯ 64:8

ಆದರೆ ಈಗ ಓ ಕರ್ತನೇ, ನಮ್ಮ ತಂದೆಯು ನೀನೇ; ನಾವು ಮಣ್ಣು, ನೀನು ನಮ್ಮ ಕುಂಬಾರನು; ನಾವೆ ಲ್ಲರೂ ನಿನ್ನ ಕೈಕೆಲಸವೇ.

ಯೆರೆಮಿಯ 18:6

ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಇಗೋ, ದಿನಗಳು ಬರುವವು; ಆಗ ಈ ಸ್ಥಳವು ಇನ್ನು ತೋಫೆತೆಂದು, ಹಿನ್ನೋಮನ ಮಗನ ತಗ್ಗೆಂದು ಅಲ್ಲ, ಕೊಲೆಯ ತಗ್ಗೆಂದು ಕರೆಯಲ್ಪಡುವದು.

Interlinear

Choose Theme