Home Bibles ಯೆಶಾಯ 47:11 · ಕನ್ನಡ ಬೈಬಲ್
ಯೆಶಾಯ 47:11 · ಕನ್ನಡ ಬೈಬಲ್

ಆದದರಿಂದ ನೀನು ಮಂತ್ರಿಸಿ ನಿವಾರಿಸ ಲಾರದ ಕೇಡು ನಿನ್ನ ಮೇಲೆ ಬರುವದು. ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನಿನಗೆ ತಿಳಿಯದ ನಾಶನವು ಪಕ್ಕನೆ ನಿನ್ನ ಮೇಲೆ ಬರುವದು.

Cross references

ನಿರ್ಗಮಕಾಂಡ 12:29

ಮಧ್ಯರಾತ್ರಿಯಲ್ಲಿ ನಡೆದದ್ದೇನಂದರೆ, ಸಿಂಹಾ ಸನದ ಮೇಲೆ ಕೂತುಕೊಂಡ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನ ವರೆಗೂ ಅಂದರೆ ಐಗುಪ್ತದೇಶ ದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವನ್ನೂ ಕರ್ತನು ಸಂಹರಿಸಿದನು.

ನೆಹೆಮ್ಯ 4:11

ನಮ್ಮ ವೈರಿಗಳು--ಅವರು ತಿಳಿಯದ ಹಾಗೆಯೂ ನೋಡದ ಹಾಗೆಯೂ ನಾವು ಅವರ ನಡುವೆ ಬಂದು ಅವರನ್ನು ಕೊಂದುಹಾಕಿ ಕೆಲಸವನ್ನು ನಿಲ್ಲಿಸಿ ಬಿಡುವೆವು ಅಂದರು.

ಕೀರ್ತನೆಗಳು 50:22

ದೇವರನ್ನು ಮರೆತು ಬಿಡುವವರೇ, ನಾನು ನಿಮ್ಮನ್ನು ಹರಿದು ಚೂರುಮಾಡ ದಂತೆ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವವರು ಯಾರೂ ಇರುವದಿಲ್ಲವೆಂಬದನ್ನು ಗ್ರಹಿಸಿಕೊಳ್ಳಿರಿ.ಸ್ತೊತ್ರವನ್ನು ಅರ್ಪಿಸುವವನು ನನ್ನನ್ನು ಘನ ಪಡಿಸುತ್ತಾನೆ; ತನ್ನ ನಡವಳಿಕೆಯನ್ನು ಕ್ರಮಪಡಿಸಿ ಕೊಳ್ಳುವವನಿಗೆ ದೇವರ ರಕ್ಷಣೆಯನ್ನು ನಾನು ತೋರಿಸುವೆನು.

ಯೆಶಾಯ 37:36

ಆಗ ಕರ್ತನ ದೂತನು ಹೊರಟು ಬಂದು ಅಶ್ಶೂರ್ಯರ ಪಾಳೆಯದಲ್ಲಿ ಲಕ್ಷದ ಎಂಭತ್ತೈದು ಸಾವಿರ ಮಂದಿಯನ್ನು ಹೊಡೆದನು. ಇನ್ನೂ ಮೊಬ್ಬಿರು ವಾಗಲೇ ಎದ್ದಾಗ ಇಗೋ, ಅವರು ಸತ್ತ ಹೆಣಗಳಾ ಗಿದ್ದರು.

ದಾನಿಯೇಲ 5:25

ಆ ಬರಹವು ಏನಂದರೆ ಮೆನೇ ಮೆನೇ ತೇಕಲ್‌ ಉಫ ರ್ಸಿನ್‌,

ದಾನಿಯೇಲ 5:28

ಪೆರೇಸ್‌ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.

ಮತ್ತಾಯ 18:34

ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.

ಲೂಕ 12:59

ನೀನು ಕೊನೆಯ ಕಾಸನ್ನು ಸಲ್ಲಿಸುವವರೆಗೂ ಅಲ್ಲಿಂದ ಬರುವದೇ ಇಲ್ಲವೆಂದು ನಾನು ನಿನಗೆ ಹೇಳುತ್ತೇನೆ ಅಂದನು.

1 ತೆಸಲೋನಿಕದವರಿಗೆ 5:3

ಆದರೆ--ಸಮಾಧಾನವಾಗಿಯೂ ಸುರಕ್ಷಿತವಾಗಿಯೂ ಇರುತ್ತೇ ವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.

ಪ್ರಕಟನೆ 3:3

ಆದದರಿಂದ ನೀನು ಹೊಂದಿದ್ದನ್ನೂ ಕೇಳಿದ್ದನ್ನೂ ನೆನಪಿಗೆ ತಂದುಕೊಂಡು ಅದನ್ನು ಬಿಗಿಯಾಗಿ ಹಿಡಿದುಕೋ, ಮಾನಸಾಂತರ ಪಡು. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ನಾನು ನಿನ್ನ ಮೇಲೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯದು.

ಪ್ರಕಟನೆ 18:9

ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು.

Interlinear

Choose Theme