ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು.
Cross references
ಹುಳುವಾದ ಯಾಕೋಬೇ, ಮತ್ತು ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯ ಮಾಡುತ್ತೇನೆಂದು ಕರ್ತನೂ ನಿನ್ನ ವಿಮೋಚಕನೂ ಇಸ್ರಾಯೇಲಿನ ಪರಿಶುದ್ಧನೂ ಹೇಳುತ್ತಾನಲ್ಲಾ!
ನಾನೇ ನಿನ್ನ ಕರ್ತನೂ ದೇವರೂ ಇಸ್ರಾಯೇಲಿನ ಪರಿಶುದ್ಧನೂ ರಕ್ಷಕನೂ ಆಗಿದ್ದೇನೆ. ಐಗುಪ್ತವನ್ನು ನಿನ್ನ ವಿಮೋಚನೆಗೂ ಇಥಿಯೋಪ್ಯ ಮತ್ತು ಸೆಬಾ ಸೀಮೆಗಳನ್ನು ನಿನಗೊಸ್ಕರ ಕೊಟ್ಟಿದ್ದೇನೆ.
ನಿಮ್ಮ ವಿಮೋಚಕನೂ ಇಸ್ರಾಯೇಲಿನ ಪರಿ ಶುದ್ಧನೂ ಆಗಿರುವ ಕರ್ತನು ಇಂತೆನ್ನುತ್ತಾನೆ--ನಾನು ನಿಮಗೋಸ್ಕರ ಬಾಬೆಲಿಗೆ ಕಳುಹಿಸಿ ಅವರ ಘನ ವಂತರನ್ನೆಲ್ಲಾ ಮತ್ತು ಹಡಗುಗಳಲ್ಲಿ ಆರ್ಭಟಿಸುವ ಕಸ್ದೀಯರನ್ನು ತಗ್ಗಿಸಿದೆನು.
ನಾನು ಕರ್ತನಾದ ನಿಮ್ಮ ಪರಿಶುದ್ದನೂ ಇಸ್ರಾಯೇಲನ್ನು ಸೃಷ್ಟಿಸಿದವನೂ ನಿಮ್ಮ ಅರಸನೂ ಆಗಿದ್ದೇನೆ.
ಇಸ್ರಾಯೇಲಿನ ಅರಸನೂ ವಿಮೋಚಕನೂ ಸೈನ್ಯ ಗಳ ಕರ್ತನೂ ಇಂತೆನ್ನುತ್ತಾನೆ--ನಾನೇ ಮೊದಲನೆಯ ವನು, ನಾನೇ ಕಡೆಯವನು, ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.
ನಿನ್ನ ಹಿಂಸಕರಿಗೆ ಅವರ ಮಾಂಸವನ್ನೇ ಅವರಿಗೆ ತಿನ್ನಿಸುವೆನು ಮತ್ತು ಸಿಹಿಯಾದ ದ್ರಾಕ್ಷಾರಸವನ್ನು ಕುಡಿಯುವಂತೆ ಅವರು ತಮ್ಮ ಸ್ವಂತ ರಕ್ತವನ್ನೇ ಕುಡಿಯುವರು. ಆಗ ಕರ್ತನಾದ ನಾನೇ ನಿನ್ನ ರಕ್ಷಕನೂ ನಿನ್ನ ವಿಮೋಚಕನೂ ಯಾಕೋಬ್ಯರ ಶೂರನೂ ಎಂದು ನರಜನ್ಮದವರೆ ಲ್ಲರಿಗೂ ಗೊತ್ತಾಗುವದು.
ಆದರೆ ತೆರೆಗಳು ಭೋರ್ಗರೆಯುವಾಗ ಸಮುದ್ರವನ್ನು ವಿಭಾಗಿ ಸಿದ ನಿನ್ನ ದೇವರಾಗಿರುವ ಕರ್ತನು ನಾನೇ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
ನಿನ್ನನ್ನು ಉಂಟುಮಾಡಿದವನೇ ನಿನ್ನ ಪತಿ; ಸೈನ್ಯಗಳ ಕರ್ತನು ಎಂಬದು ಆತನ ಹೆಸರು; ನಿನ್ನ ವಿಮೋಚಕನು ಇಸ್ರಾ ಯೇಲಿನ ಪರಿಶುದ್ಧನೇ; ಸಮಸ್ತ ಭೂಮಿಯ ದೇವರು ಎಂದು ಆತನು ಕರೆಯಲ್ಪಡುವನು.
ಆಗ ನಾನು ಆಜ್ಞೆ ನಿಯಮಗಳ ಪ್ರಕಾರ ಮುದ್ರೆ ಹಾಕಿದ ಕ್ರಯಪತ್ರವನ್ನೂ ತೆರೆದಿರುವದನ್ನೂ ತಕ್ಕೊಂಡೆನು.
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬೆಲಿನ ಮಗಳು ಇದ್ದಾಳೆ; ಇನ್ನು ಸ್ವಲ್ಪ ಹೊತ್ತಾದ ಮೇಲೆ ಅದಕ್ಕೆ ಸುಗ್ಗೀಕಾಲ ಬರುವದು.