Home Bibles ಯೆಶಾಯ 47:5 · ಕನ್ನಡ ಬೈಬಲ್
ಯೆಶಾಯ 47:5 · ಕನ್ನಡ ಬೈಬಲ್

ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ.

Cross references

1 ಸಮುವೇಲ 2:9

ಆತನು ತನ್ನ ಪರಿಶುದ್ಧರ ಕಾಲುಗಳನ್ನು ಕಾಯು ವನು; ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು; ಶಕ್ತಿಯಿಂದ ಒಬ್ಬನೂ ಜಯಿಸನು.

ಕೀರ್ತನೆಗಳು 31:17

ಓ ಕರ್ತನೇ, ನಿನಗೆ ಮೊರೆಯಿಟ್ಟಿದ್ದೇನೆ; ನಾನು ಆಶಾಭಂಗಪಡ ದಂತೆ ಮಾಡು; ದುಷ್ಟರು ಆಶಾಭಂಗಪಡಲಿ; ಅವರು ಸಮಾಧಿಯಲ್ಲಿ ಮೌನವಾಗಿರಲಿ.

ಕೀರ್ತನೆಗಳು 46:10

ಶಾಂತ ವಾಗಿರ್ರಿ, ನಾನೇ ದೇವರಾಗಿದ್ದೇನೆಂದು ತಿಳುಕೊಳ್ಳಿರಿ; ಜನಾಂಗಗಳಲ್ಲಿ ಉನ್ನತನಾಗಿರುವೆನು; ಭೂಮಿಯಲ್ಲಿ ನಾನು ಹೆಚ್ಚಿಸಲ್ಪಡುವೆನು.ಸೈನ್ಯಗಳ ಕರ್ತನು ನಮ್ಮ ಸಂಗಡ ಇದ್ದಾನೆ; ಯಾಕೋಬನ ದೇವರು ನಮಗೆ ಆಶ್ರಯವಾಗಿದ್ದಾನೆ. ಸೆಲಾ.

ಯೆಶಾಯ 13:10

ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ.

ಯೆಶಾಯ 13:19

ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್‌ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.

ಯೆಶಾಯ 14:4

ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.

ಯೆಶಾಯ 14:23

ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.

ಯೆಶಾಯ 47:1

ಬಾಬೆಲಿನ ಕುಮಾರ್ತೆಯಾದ ಓ ಕನ್ಯಾ ಸ್ತ್ರೀಯೇ, ಕೆಳಕ್ಕೆ ಇಳಿದು ಬಂದು ದೂಳಿ ನಲ್ಲಿ ಕುಳಿತುಕೋ, ಓ ಕಸ್ದೀಯರ ಕುಮಾರಿಯೇ ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಳಿತುಕೋ. ಯಾಕಂದರೆ ಇನ್ನು ಮೇಲೆ ನೀನು ಕೋಮಲೆ ಮತ್ತು ನಾಜೂಕಾದವಳು ಎಂದು ಕರೆಯಲ್ಪಡುವದಿಲ್ಲ.

ಯೆಶಾಯ 47:7

ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ.

ಯೆರೆಮಿಯ 8:14

ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್‌ ದೇವತೆ ಗಳ ಹಿಂದೆಯೂ ನಡೆದರು.

ಯೆರೆಮಿಯ 25:10

ಯೆಹೂದದ ಪ್ರಧಾನರು ಈ ಸಂಗತಿಗಳನ್ನು ಕೇಳಿ ಅರಸನ ಮನೆಯಿಂದ ಕರ್ತನ ಆಲಯಕ್ಕೆ ಬಂದು ಕರ್ತನ ಆಲಯದ ಹೊಸ ಬಾಗಲಿನ ಪ್ರವೇಶದಲ್ಲಿ ಕೂತುಕೊಂಡರು.

ವಿಲಾಪಗಳು 1:1

ಜನಭರಿತವಾಗಿದ್ದ ನಗರಿಯು ಹೇಗೆ ಒಂಟಿಯಾಗಿ ಕೂತುಕೊಂಡಿದ್ದಾಳೆ! ಅವಳು ಹೇಗೆ ವಿಧವೆಯಾದಳು! ಜನಾಂಗಗಳಲ್ಲಿ ಶ್ರೇಷ್ಠಳಾದವಳೂ ಸಂಸ್ಥಾನಗಳಲ್ಲಿ ರಾಜಕುಮಾರಿಯಾಗಿದ್ದವಳೂ ಹೇಗೆ ಕಪ್ಪವನ್ನು ಕೊಡುವಂಥವಳಾದಳು!

ದಾನಿಯೇಲ 2:37

ಓ ಅರಸನೇ, ನೀನು ಅರಸರಿಗೆ ಅರಸನಾಗಿ ರುವೆ; ಪರಲೋಕದ ದೇವರು ನಿನಗೆ ರಾಜ್ಯವನ್ನೂ ಬಲವನ್ನೂ ಅಧಿಕಾರವನ್ನೂ ಘನವನ್ನೂ ಕೊಟ್ಟಿದ್ದಾನೆ.

ಹಬಕ್ಕೂಕ 2:20

ಆದರೆ ಕರ್ತನು ತನ್ನ ಪರಿಶುದ್ಧ ಮಂದಿರದಲ್ಲಿ ಇದ್ದಾನೆ; ಆತನ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.

ಜೆಕರ್ಯ 2:13

ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.

ಮತ್ತಾಯ 22:12

ಅವನು ಆ ಮನುಷ್ಯನಿಗೆ--ಸ್ನೇಹಿತನೇ, ಮದುವೆಯ ಉಡುಪಿಲ್ಲದೆ ನೀನು ಒಳಗೆ ಹೇಗೆ ಬಂದಿ ಎಂದು ಕೇಳಲು ಅವನು ಸುಮ್ಮನಿದ್ದನು.

ಯೂದ 1:13

ಸ್ವಂತ ಅವಮಾನವೆಂಬ ನೊರೆಯನ್ನು ಕಾರುವ ಸಮುದ್ರದ ಹುಚ್ಚು ತೆರೆಗಳೂ ಆಗಿದ್ದಾರೆ. ಅಲೆಯುವ ನಕ್ಷತ್ರ ಗಳಾದ ಇವರ ಪಾಲಿಗೆ ಕಾರ್ಗತ್ತಲೆಯು ಸದಾಕಾಲ ಇಟ್ಟಿರುವದು.

ಪ್ರಕಟನೆ 17:3

ಆಗ ಅವನು ಆತ್ಮದಲ್ಲಿ ನನ್ನನ್ನು ಎತ್ತಿಕೊಂಡು ಅಡವಿಗೆ ಹೋದನು; ಅಲ್ಲಿ ದೇವದೂಷಣೆಯ ಹೆಸರುಗಳಿಂದ ತುಂಬಿದ್ದು ಏಳು ತಲೆಗಳು ಹತ್ತು ಕೊಂಬುಗಳೂ ಇದ್ದ ಕೆಂಪುಬಣ್ಣದ ಮೃಗದ ಮೇಲೆ ಕೂತಿದ್ದ ಒಬ್ಬ ಸ್ತ್ರೀಯನ್ನು ನಾನು ಕಂಡೆನು.

ಪ್ರಕಟನೆ 17:18

ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಆಳುತ್ತಿರುವ ಮಹಾನಗರಿಯೇ ಎಂದು ಹೇಳಿದನು.

ಪ್ರಕಟನೆ 18:7

ಅವಳು ಎಷ್ಟರಮಟ್ಟಿಗೆ ತನ್ನನ್ನು ಘನಪಡಿಸಿ ಕೊಂಡು ವೈಭವದಲ್ಲಿ ಜೀವಿಸಿದ್ದಳೋ ಅಷ್ಟರಮಟ್ಟಿಗೆ ಅವಳಿಗೆ ಯಾತನೆಯನ್ನೂ ದುಃಖವನ್ನೂ ಕೊಡಿರಿ; ಯಾಕಂದರೆ ಅವಳು ತನ್ನ ಹೃದಯದಲ್ಲಿ--ನಾನು ರಾಣಿ ಯಾಗಿ ಕೂತುಕೊಂಡಿದ್ದೇನೆ, ನಾನು ವಿಧವೆಯಲ್ಲ, ದುಃಖವನ್ನು ಕಾಣುವದೇ ಇಲ್ಲ ಎಂದು ಹೇಳಿಕೊಳ್ಳು

ಪ್ರಕಟನೆ 18:16

ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ,

ಪ್ರಕಟನೆ 18:21

ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.

Interlinear

Choose Theme