ಆಕಾಶವೇ, ಹರ್ಷಿಸು; ಭೂಮಿಯೇ, ಉಲ್ಲಾಸಪಡು! ಪರ್ವತ ಗಳೇ ಹರ್ಷಧ್ವನಿಗೈಯಿರಿ. ಯಾಕಂದರೆ ಕರ್ತನು ತನ್ನ ಜನರನ್ನು ಆದರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.
Cross references
ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
ನಿನಗೆ ಪರಾಕ್ರಮವುಳ್ಳ ತೋಳು ಉಂಟು; ಕೈ ಬಲವುಳ್ಳದ್ದು. ನಿನ್ನ ಬಲಗೈ ಉನ್ನತವಾ ದದ್ದು.
ಆಕಾಶಗಳು ಸಂತೋಷಿಸಲಿ; ಭೂಮಿಯು ಉಲ್ಲಾಸಪಡಲಿ; ಸಮುದ್ರವೂ ಅದರ ಪರಿಪೂರ್ಣ ತೆಯೂ ಘೋಷಿಸಲಿ.
ಹೊಲವೂ ಅದರಲ್ಲಿರುವ ಸಮಸ್ತವೂ ಉತ್ಸಾಹಪಡಲಿ; ಅಡವಿಯ ಮರಗಳೆಲ್ಲಾ ಕರ್ತನ ಮುಂದೆಯೇ ಉತ್ಸಾಹಧ್ವನಿ ಮಾಡಲಿ.ಆತನು ಬರುತ್ತಾನೆ, ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ; ಲೋಕಕ್ಕೆ ನೀತಿಯಿಂದಲೂ ಜನಗಳಿಗೆ ತನ್ನ ಸತ್ಯದಿಂದಲೂ ನ್ಯಾಯತೀರಿಸುವನು.
ಸಮಸ್ತ ಭೂಮಿಯೇ; ಕರ್ತನಿಗೆ ಉತ್ಸಾಹಧ್ವನಿ ಮಾಡಿರಿ, ಗಟ್ಟಿಯಾದ ಧ್ವನಿಯಿಂದ ಸಂತೋಷಿಸಿ ಕೀರ್ತಿಸಿರಿ.
ಬೆಟ್ಟಗಳೇ, ಎಲ್ಲಾ ಗುಡ್ಡಗಳೇ, ಹಣ್ಣಿನ ಮರಗಳೇ, ಎಲ್ಲಾ ದೇವದಾರುಗಳೇ,
ಆ ದಿನದಲ್ಲಿ ನೀನು ಹೇಳುವದೇನಂದರೆ --ಓ ಕರ್ತನೇ, ನಿನ್ನನ್ನು ಸ್ತುತಿಸು ವೆನು; ನನ್ನ ಮೇಲೆ ನೀನು ಕೋಪಿಸಿದ್ದಾಗ್ಯೂ ನಿನ್ನ ಕೋಪದಿಂದ ತಿರುಗಿಕೊಂಡು ನನ್ನನ್ನು ಆದರಿಸಿದ್ದೀ.
ನೀವು ನನ್ನ ಜನರನ್ನು ಸಂತೈಸಿರಿ, ಸಂತೈಸಿರಿ ಎಂದು ನಿಮ್ಮ ದೇವರು ಹೇಳುತ್ತಾನೆ.
ಸಮುದ್ರ ಪ್ರಯಾಣಿಕರೇ, ಸಕಲ ಜಲಚರಗಳೇ, ದ್ವೀಪಗಳೇ, ಅದರ ನಿವಾಸಿಗಳೇ, ಕರ್ತನಿಗೆ ಹೊಸ ಹಾಡನ್ನು ಹಾಡಿರಿ. ಭೂಮಿಯ ಕಟ್ಟಕಡೆಯಿಂದ ಆತನಿಗೆ ಸ್ತೋತ್ರ ಮಾಡಿರಿ.
ಓ ಆಕಾಶಗಳೇ, ಹಾಡಿರಿ; ಕರ್ತನು ತಾನೇ ಅದನ್ನು ಮಾಡಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭ ಟಿಸು; ಪರ್ವತಗಳೇ, ಓ ವನವೇ, ಅದರಲ್ಲಿರುವ ಎಲ್ಲಾ ಮರಗಳೇ, ಉತ್ಸಾಹ ಧ್ವನಿಮಾಡಿರಿ; ಯಾಕಂದರೆ ಕರ್ತನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾ ಯೇಲಿನಲ್ಲಿ ತನ್ನನ್ನು ಮಹಿಮೆಪಡಿಸಿದ್ದಾನೆ.
ಕರ್ತನು ಚೀಯೋನನ್ನು ಆದರಿಸುವನು; ಆತನು ಅದರ ಹಾಳಾದ ಸ್ಥಳಗ ಳನ್ನು ಸುಧಾರಿಸುವನು; ಅದರ ಅರಣ್ಯವನ್ನು ಏದೆನ್ ಹಾಗೆಯೂ ಮರುಭೂಮಿಯನ್ನು ಕರ್ತನ ತೋಟದ ಹಾಗೆಯೂ ಮಾಡುವನು. ಅಲ್ಲಿ ಆನಂದವೂ ಉಲ್ಲಾ ಸವೂ ಉಪಕಾರ ಸ್ತುತಿಯೂ ಇಂಪಾದ ಸ್ವರವೂ ಕಂಡುಬರುವವು.
ಯೆರೂಸಲೇಮಿನ ಹಾಳಾದ ಸ್ಥಳಗಳೇ, ಆನಂದ ಧ್ವನಿಗೈಯಿರಿ ಒಟ್ಟಾಗಿ ಹಾಡಿರಿ; ಯಾಕಂದರೆ ಕರ್ತನು ತನ್ನ ಪ್ರಜೆಗಳನ್ನು ಆದರಿಸಿದ್ದಾನೆ, ಆತನು ಯೆರೂಸ ಲೇಮನ್ನು ವಿಮೋಚಿಸಿದ್ದಾನೆ.
ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.ಮುಳ್ಳಿಗೆ ಬದಲಾಗಿ ಫರ್ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.
ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
ಒಬ್ಬ ನನ್ನು ಅವನ ತಾಯಿ ಆದರಿಸುವ ಪ್ರಕಾರವೇ ನಾನು ನಿಮ್ಮನ್ನು ಆದರಿಸುವೆನು; ಯೆರೂಸಲೇಮಿನಲ್ಲಿ ಆದ ರಣೆ ಹೊಂದುವಿರಿ.
ಅವರ ಮುಂದೆ ನಾನು ಬಾರೂಕನಿಗೆ ಅಪ್ಪಣೆ ಕೊಟ್ಟದ್ದೇ ನಂದರೆ--
ಫಕ್ಕನೆ ಪರಲೋಕ ಸೈನ್ಯದ ಸಮೂಹವು ಆ ದೂತನ ಸಂಗಡ ಇದ್ದು ದೇವರನ್ನು ಕೊಂಡಾಡುತ್ತಾ--
ಅದೇ ಪ್ರಕಾರ ಮಾನಸಾಂತರಪಡುವ ಒಬ್ಬ ಪಾಪಿಯ ವಿಷಯವಾಗಿ ದೇವದೂತರ ಮುಂದೆ ಸಂತೋಷವಾಗುವದೆಂದು ನಾನು ನಿಮಗೆ ಹೇಳುತ್ತೇನೆ ಅಂದನು.
ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.
ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.
ಆತನು ಆ ಪುಸ್ತಕವನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಮುಂದೆ ಅಡ್ಡಬಿದ್ದರು; ಅವರೆಲ್ಲರ ಕೈಗಳಲ್ಲಿ ವೀಣೆಗಳೂ ಪರಿ ಶುದ್ಧರ ಪರಿಮಳವಾದ ಪ್ರಾರ್ಥನೆಗಳಿಂದ ತುಂಬಿದ್ದ ಚಿನ್ನದ ಪಾತ್ರೆಗಳೂ ಇದ್ದವು.
ಇದಾದ ಮೇಲೆ ಇಗೋ, ನಾನು ನೋಡಲಾಗಿ ಸಮಸ್ತ ಜನಾಂಗ ಕುಲ ಪ್ರಜೆ ಭಾಷೆಗಳೊಳಗಿಂದ ಯಾರೂ ಎಣಿಸಲಾಗದಂತ ಮಹಾ ಸಮೂಹವು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡವರಾಗಿ ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡು ಸಿಂಹಾಸನದ ಮುಂದೆಯೂ ಕುರಿಮರಿಯಾದಾತನ ಮುಂದೆಯೂ