Home Bibles ಯೆಶಾಯ 5:4 · ಕನ್ನಡ ಬೈಬಲ್
ಯೆಶಾಯ 5:4 · ಕನ್ನಡ ಬೈಬಲ್

ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?

Cross references

ನಿರ್ಗಮಕಾಂಡ 37:22

ಅದರ ಗೂಡುಗಳೂ ಕೊಂಬೆಗಳೂ ಅದರಿಂದಲೇ ಉಂಟಾಗಿದ್ದವು; ಅದೆಲ್ಲಾ ಚೊಕ್ಕ ಬಂಗಾರದ ಒಂದೇ ಕಲಾಕೃತಿಯಾಗಿತ್ತು.

2 ದಿನವೃತ್ತಾಂತ 36:14

ಇದಲ್ಲದೆ ಯಾಜಕರಲ್ಲಿರುವ ಎಲ್ಲಾ ಪ್ರಧಾನರೂ ಜನರೂ ಜನಾಂಗಗಳ ಅಸಹ್ಯ ಗಳನ್ನು ಹಿಂಬಾಲಿಸಿ ಬಹಳವಾಗಿ ಅಪರಾಧ ಮಾಡಿ ಕರ್ತನು ಯೆರೂಸಲೇಮಿನಲ್ಲಿ ಪರಿಶುದ್ಧ ಮಾಡಿದ ಆತನ ಆಲಯವನ್ನು ಹೊಲೆ ಮಾಡಿದರು.

ಯೆಶಾಯ 1:5

ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.

ಯೆರೆಮಿಯ 2:5

ಕರ್ತನು ಹೀಗೆ ಹೇಳುತ್ತಾನೆ, ನಿಮ್ಮ ತಂದೆಗಳು ನನಗೆ ದೂರವಾಗಿ ವ್ಯರ್ಥತ್ವವನ್ನು ಹಿಂದಟ್ಟಿ ವ್ಯರ್ಥವಾಗುವ ಹಾಗೆ ನನ್ನಲ್ಲಿ ಯಾವ ಅಕ್ರಮವನ್ನು ಕಂಡಿದ್ದಾರೆ?

ಯೆರೆಮಿಯ 2:30

ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.

ಯೆರೆಮಿಯ 6:29

ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;

ಯೆಹೆಜ್ಕೇಲ 24:13

ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ.

ಹೊಶೇಯ 10:1

ಇಸ್ರಾಯೇಲು ಬರಿದಾದ ದ್ರಾಕ್ಷೇಬಳ್ಳಿಯಾಗಿದೆ, ಅವನು ತನಗಾಗಿ ಫಲಫಲಿ ಸುತ್ತಾನೆ; ತನ್ನ ಬಹಳ ಫಲದ ಪ್ರಕಾರವಾಗಿ ಅವನು ಬಲಿಪೀಠಗಳನ್ನೂ ಹೆಚ್ಚಿಸಿದ್ದಾನೆ. ತನ್ನ ದೇಶದ ಒಳ್ಳೆಯ ತನದ ಪ್ರಕಾರ ಅಂದವಾದ ವಿಗ್ರಹಗಳನ್ನು ಮಾಡಿ ದ್ದಾನೆ.

ಮೀಕ 6:3

ನನ್ನ ಜನರೇ, ನಾನು ನಿನಗೆ ಏನು ಮಾಡಿದ್ದೇನೆ? ಯಾವದರಿಂದ ನಿನಗೆ ಬೇಸರ ಮಾಡಿದ್ದೇನೆ? ನನಗೆ ವಿರೋಧವಾಗಿ ಸಾಕ್ಷಿಕೊಡು.

ಮತ್ತಾಯ 23:37

ಓ ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳನ್ನು ಕೊಲ್ಲುವವಳೇ, ನಿನ್ನ ಬಳಿಗೆ ಕಳುಹಿಸ ಲ್ಪಟ್ಟವರನ್ನು ಕಲ್ಲೆಸೆಯುವವಳೇ, ಕೋಳಿಯು ಮರಿಗಳನ್ನು ತನ್ನ ರೆಕ್ಕೆಗಳ ಕೆಳಗೆ ಕೂಡಿಸುವಂತೆ ನಿನ್ನ ಮಕ್ಕಳನ್ನು ಕೂಡಿಸುವದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನ

ಅಪೋಸ್ತಲರ ಕೃತ್ಯಗಳು 7:51

ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.

Interlinear

Choose Theme