Home Bibles ☰ Books ಯೆಶಾಯ 50:5 · ಕನ್ನಡ ಬೈಬಲ್
ಯೆಶಾಯ 50:5 · ಕನ್ನಡ ಬೈಬಲ್

ಕರ್ತನಾದ ದೇವರು ನನ್ನ ಕಿವಿಯನ್ನು ತೆರೆದಿದ್ದಾನೆ. ನಾನು ಎದುರುಬೀಳಲಿಲ್ಲ ಇಲ್ಲವೆ ವಿಮುಖನಾಗಲೂ ಇಲ್ಲ.

Cross references

ದ್ವಿತೀಯೋಪದೇಶಕಾಂಡ 18:17

ಆಗ ಕರ್ತನು ನನಗೆ--ಅವರು ಹೇಳಿದ್ದನ್ನು ಚೆನ್ನಾಗಿ ಹೇಳಿ ದ್ದಾರೆ.

ಕೀರ್ತನೆಗಳು 40:6

ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;

ಕೀರ್ತನೆಗಳು 40:7

ಆಗ ನಾನು--ಇಗೋ, ನಾನು ಇದ್ದೇನೆ; ಪುಸ್ತಕದ ಸುರುಳಿಯಲ್ಲಿ ನನ್ನನ್ನು ಕುರಿತು ಬರೆದದೆ.

ಯೆಶಾಯ 35:5

ಆಗ ಕುರುಡರ ಕಣ್ಣುಗಳು ತೆರೆಯಲ್ಪಡು ವವು, ಕಿವುಡರ ಕಿವಿಗಳು ಕೇಳುವವು.

ಯೆಶಾಯ 48:8

ಹೌದು, ನೀನು ಕೇಳಿಲ್ಲ, ತಿಳಿದೂ ಇಲ್ಲ; ಪುರಾತನ ಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ; ಯಾಕಂದರೆ ನೀನು ದೊಡ್ಡ ವಂಚಕನು ಎಂದೂ ಗರ್ಭದಿಂದಲೇ ನೀನು ದ್ರೋಹಿಯೆಂದೂ ನಾನು ತಿಳಿದುಕೊಂಡಿದ್ದೇನೆ.

ಮತ್ತಾಯ 26:39

ಆಮೇಲೆ ಆತನು ಸ್ವಲ್ಪದೂರ ಹೋಗಿ ಅಡ್ಡಬಿದ್ದು ಪ್ರಾರ್ಥಿ ಸುತ್ತಾ--ಓ ನನ್ನ ತಂದೆಯೇ, ಸಾಧ್ಯವಾದರೆ ಈ ಪಾತ್ರೆಯು ನನ್ನನ್ನು ಬಿಟ್ಟು ಹೋಗಲಿ; ಆದಾಗ್ಯೂ ನನ್ನ ಚಿತ್ತದಂತಲ್ಲ; ನಿನ್ನ ಚಿತ್ತದಂತೆಯೇ ಆಗಲಿ ಅಂದನು.

ಯೋಹಾನ 8:29

ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.

ಯೋಹಾನ 14:31

ನಾನು ತಂದೆಯನ್ನು ಪ್ರೀತಿಮಾಡುತ್ತೇನೆಂದು ಲೋಕವು ತಿಳಿಯುವ ಹಾಗೆ ತಂದೆಯು ನನಗೆ ಆಜ್ಞೆ ಕೊಟ್ಟಂತೆಯೇ ನಾನು ಮಾಡುತ್ತೇನೆ. ಏಳಿರಿ, ನಾವು ಇಲ್ಲಿಂದ ಹೋಗೋಣ ಅಂದನು.

ಯೋಹಾನ 15:10

ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ಆತನ ಪ್ರೀತಿಯಲ್ಲಿ ನೆಲೆಯಾಗಿರು ವಂತೆಯೇ ನೀವು ನನ್ನ ಆಜ್ಞೆಗಳನ್ನು ಕೈಕೊಂಡರೆ ನನ್ನ ಪ್ರೀತಿಯಲ್ಲಿ ನೆಲೆಯಾಗಿರುವಿರಿ.

ಅಪೋಸ್ತಲರ ಕೃತ್ಯಗಳು 26:19

ಆದ ಕಾರಣ ಓ ಅಗ್ರಿಪ್ಪ ರಾಜನೇ, ಪರಲೋಕದ ಆ ದರ್ಶನಕ್ಕೆ ನಾನು ಅವಿಧೇಯನಾಗಲಿಲ್ಲ.

ಫಿಲಿಪ್ಪಿಯವರಿಗೆ 2:8

ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಾಗ ತನ್ನನ್ನು ತಗ್ಗಿಸಿ ಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣ ವನ್ನಾದರೂ ಹೊಂದುವಷ್ಟು ವಿಧೇಯನಾದನು.

ಹೆಬ್ರಿಯರಿಗೆ 5:8

ಹೀಗೆ ಆತನು ಮಗನಾಗಿದ್ದರೂ ತಾನು ಅನುಭ ವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತು ಕೊಂಡನು.

ಹೆಬ್ರಿಯರಿಗೆ 10:5

ಆದದರಿಂದ ಆತನು ಭೂಲೋಕದೊಳಗೆ ಬರುವಾಗ--(ದೇವರೇ,) ಯಜ್ಞವೂ ಅರ್ಪಣೆಯೂ ನಿನಗೆ ಇಷ್ಟವಾಗಿರಲಿಲ್ಲ, ಆದರೆ ನನಗೆ ದೇಹವನ್ನು ಸಿದ್ಧಮಾಡಿಕೊಟ್ಟೀ;

Interlinear

Choose Theme