Home Bibles ಯೆಶಾಯ 56:4 · ಕನ್ನಡ ಬೈಬಲ್
ಯೆಶಾಯ 56:4 · ಕನ್ನಡ ಬೈಬಲ್

ಕರ್ತನು ತನ್ನ ಸಬ್ಬತ್ತನ್ನು ಕೈಕೊಂಡು ತನಗೆ ಮೆಚ್ಚಿಕೆಯಾದದ್ದನ್ನು ಆದುಕೊಂಡು ತನ್ನ ಒಡಂಬಡಿಕೆಯನ್ನು ಹಿಡಿದು ಕೊಂಡಿರುವ ನಪುಂಸಕರಿಗೆ--

Cross references

ಯೆಹೋಶುವ 24:15

ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.

2 ಸಮುವೇಲ 23:5

ನನ್ನ ಮನೆ ದೇವರ ಸಮ್ಮುಖದಲ್ಲಿ ಹಾಗೆಯೇ ಅಲ್ಲದಿದ್ದರೂ ನನ್ನ ಸಂಗಡ ನಿತ್ಯವಾದ ಒಡಂಬಡಿಕೆ ಯನ್ನು ಮಾಡಿದ್ದಾನೆ; ಎಲ್ಲಾದರ ವಿಷಯ ಸಿದ್ಧವಾದ ದ್ದಾಗಿಯೂ ಸ್ಥಿರವಾದದ್ದಾಗಿಯೂ ಅದೆ. ಆತನು ಅದನ್ನು ಬೆಳೆಯದೆ ಇದ್ದರೂ ನನ್ನ ಎಲ್ಲಾ ರಕ್ಷಣೆಯೂ ನನ್ನ ಎಲ್ಲಾ ಅಭಿಲಾಷೆಯೂ ಅದೇ.

ಕೀರ್ತನೆಗಳು 25:10

ಆತನ ಒಡಂಬಡಿಕೆಯನ್ನೂ ಸಾಕ್ಷಿಗಳನ್ನೂ ಕೈಕೊಳ್ಳು ವವರಿಗೆ ಕರ್ತನ ದಾರಿಗಳೆಲ್ಲಾ ಕರುಣೆಯೂ ಸತ್ಯವೂ ಉಳ್ಳವು.

ಕೀರ್ತನೆಗಳು 119:111

ನಿನ್ನ ಸಾಕ್ಷಿಗಳನ್ನು ನಿತ್ಯಸ್ವಾಸ್ತ್ಯವಾಗಿ ತೆಗೆದುಕೊಂಡಿದ್ದೇನೆ; ಅವು ನನ್ನ ಹೃದಯಕ್ಕೆ ಆನಂದವಾಗಿವೆ.

ಯೆಶಾಯ 27:5

ಇಲ್ಲದಿದ್ದರೆ ಅವನು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನ ಬಲವನ್ನು ಹಿಡುಕೊ ಳ್ಳಲಿ, ನನ್ನೊಡನೆ ಸಮಾಧಾನ ಮಾಡಿಕೊಳ್ಳಲಿ.

ಯೆಶಾಯ 55:3

ನಿಮ್ಮ ಕಿವಿಗಳನ್ನು ಬಾಗಿಸಿಕೊಂಡು ನನ್ನ ಬಳಿಗೆ ಬನ್ನಿರಿ; ಕೇಳಿರಿ, ನಿಮ್ಮ ಪ್ರಾಣವು ಬದುಕು ವದು; ನಿಶ್ಚಯವಾಗಿ ದಾವೀದನಿಗೆ ಖಂಡಿತವಾಗಿ ಮಾಡಿದ ಕರುಣೆಗಳ ಪ್ರಕಾರ ನಿಮ್ಮ ಸಂಗಡ ನಿತ್ಯ ವಾದ ಒಡಂಬಡಿಕೆಯನ್ನು ಮಾಡುವೆನು.

ಯೆಶಾಯ 56:2

ಇದನ್ನು ಮಾಡುವ ಮನುಷ್ಯನೂ ಇದನ್ನು ಹಿಡಿದು ಕೊಳ್ಳುವವರ ಪುತ್ರನೂ ಅಂದರೆ ಸಬ್ಬತ್‌ ದಿನವನ್ನು ಅಪವಿತ್ರಮಾಡದೆ ಕೈಕೊಳ್ಳುವನೋ ಯಾವ ಕೇಡನ್ನು ಮಾಡದ ಹಾಗೆ ತನ್ನ ಕೈಯನ್ನು ಕಾಯುವನೋ ಅವನು ಧನ್ಯನು.

ಯೆಶಾಯ 56:6

ಕರ್ತನನ್ನು ಸೇವಿಸುವದಕ್ಕೂ ಆತನ ಹೆಸರನ್ನು ಪ್ರೀತಿಮಾಡುವದಕ್ಕೂ ಆತನ ಸೇವಕರಾಗಿ ರುವದಕ್ಕೂ ತಾವೇ ಕರ್ತನೊಂದಿಗೆ ಸೇರಿಕೊಂಡಿರುವ ಅನ್ಯರ ಮಕ್ಕಳನ್ನು ಸಬ್ಬತ್‌ ದಿನವನ್ನು ಅಪವಿತ್ರ ಮಾಡದೆ ಕೈಕೊಳ್ಳುವ ಪ್ರತಿಯೊಬ್ಬನನ್ನೂ ನನ್ನ ಒಡಂಬಡಿಕೆಯನ್ನು ಹಿಡಿದುಕೊಂಡಿರುವವರನೂ

ಯೆರೆಮಿಯ 50:5

ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.

ಲೂಕ 10:42

ಆದರೆ ಅವಶ್ಯವಾದದ್ದು ಒಂದೇ; ಮರಿಯಳು ಆ ಒಳ್ಳೇಭಾಗವನ್ನೇ ಆರಿಸಿ ಕೊಂಡಿದ್ದಾಳೆ. ಅದು ಆಕೆಯಿಂದ ತೆಗೆಯಲ್ಪಡುವದಿಲ್ಲ ಅಂದನು.

ಹೆಬ್ರಿಯರಿಗೆ 6:17

ಅದರಲ್ಲಿ ದೇವರು ತನ್ನ ಸಂಕಲ್ಪವು ನಿಶ್ಚಲವಾದದ್ದೆಂಬದನ್ನು ವಾಗ್ದಾನಕ್ಕೆ ಬಾಧ್ಯರಾಗುವವರಿಗೆ ಬಹು ಸ್ಪಷ್ಟವಾಗಿ ತೋರಿಸ ಬೇಕೆಂದು ಆಣೆಯಿಟ್ಟು ತನ್ನ ಮಾತನ್ನು ಸ್ಥಿರಪಡಿಸಿದನು.

Interlinear

Choose Theme