ಯೆಶಾಯ 57:8 · ಕನ್ನಡ ಬೈಬಲ್
ಕದಗಳ ಮತ್ತು ನಿಲುವಿನ ಹಿಂಭಾಗದಲ್ಲಿ ನಿನ್ನ ಜ್ಞಾಪಕ ಚಿಹ್ನೆಯನ್ನು ಇಟ್ಟಿದ್ದೀ. ನನ್ನನ್ನು ಬಿಟ್ಟು ಬೇರೊಬ್ಬನಿಗೆ ನಿನ್ನನ್ನು ತೋರ್ಪಡಿಸಿ ಕೊಂಡಿದ್ದೀ; ಏರಿಹೋಗಿ ನಿನ್ನ ಮಂಚವನ್ನು ಅಗಲ ಮಾಡಿಕೊಂಡು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದೀ; ಅವರ ಮಂಚವನ್ನು ಕಂಡಲ್ಲಿ ಅದನ್ನು ಪ್ರೀತಿಮಾಡಿದ್ದೀ.
Cross references
ಯೆಹೆಜ್ಕೇಲ 8:8
ಆಮೇಲೆ ಆತನು ನನಗೆ--ಮನುಷ್ಯಪುತ್ರನೇ, ಈಗ ಗೋಡೆಯಲ್ಲಿ ಕೊರೆ ಎಂದು ಹೇಳಿದನು. ಯಾವಾಗ ನಾನು ಗೋಡೆಯನ್ನು ಕೊರೆದೆನೋ ಒಂದು ಬಾಗಿಲು ಕಾಣಿಸಿತು.
ಯೆಹೆಜ್ಕೇಲ 16:25
ಪ್ರತಿಯೊಂದು ಕಡೆ ಮೂಲೆ ಮೂಲೆಗೂ ಉನ್ನತ ಸ್ಥಳವನ್ನು ಕಟ್ಟಿ ನಿನ್ನ ಸೌಂದರ್ಯವನ್ನು ದುರುಪಯೋಗಪಡಿಸಿಕೊಂಡು ಹಾದು ಹೋಗುವ ಪ್ರತಿಯೊಬ್ಬರಿಗೂ ನಿನ್ನ ಕಾಲು ಗಳನ್ನು ಅಗಲಿಸಿದಿ; ನಿನ್ನ ವ್ಯಭಿಚಾರವನ್ನು ವೃದ್ಧಿಸಿದಿ.
ಯೆಹೆಜ್ಕೇಲ 16:32
ಆದರೆ ಗಂಡನಿಗೆ ಬದ ಲಾಗಿ ಅನ್ಯರನ್ನು ಅಂಗೀಕರಿಸುವ ವ್ಯಭಿಚಾರಿ ಹೆಂಡತಿ ಯಾಗಿರುವಿ!
ಯೆಹೆಜ್ಕೇಲ 23:2
ಮನುಷ್ಯಪುತ್ರನೇ, ಒಬ್ಬ ತಾಯಿಯ ಮಕ್ಕಳಾದ ಇಬ್ಬರು ಹೆಂಗಸರಿದ್ದರು;
ಯೆಹೆಜ್ಕೇಲ 23:41
ವೈಭವದ ಮಂಚದ ಮೇಲೆ ಕೂತು ಕೊಂಡೆ; ಅವರ ಮುಂದೆ ನನ್ನ ಧೂಪವೂ ನನ್ನ ಎಣ್ಣೆಯೂ ಇರಿಸಲ್ಪಟ್ಟ ಮೇಜೂ ಸಿದ್ಧಮಾಡಲ್ಪಟ್ಟಿತು.