Home Bibles ☰ Books ಯೆಶಾಯ 58:9 · ಕನ್ನಡ ಬೈಬಲ್
ಯೆಶಾಯ 58:9 · ಕನ್ನಡ ಬೈಬಲ್

ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ,

Cross references

ಆದಿಕಾಂಡ 27:18

ಆಗ ಅವನು ತನ್ನ ತಂದೆಯ ಬಳಿಗೆ ಹೋಗಿ--ನನ್ನ ತಂದೆಯೇ ಅಂದನು. ಅದಕ್ಕೆ ಅವನು--ಇಗೋ ಇದ್ದೇನೆ; ನನ್ನ ಮಗನೇ, ನೀನು ಯಾರು ಅಂದನು.

ಲೇವ್ಯಕಾಂಡ 6:5

ಅಥವಾ ಅವನು ಸುಳ್ಳಾಗಿ ಪ್ರಮಾಣಮಾಡಿ ಪಡೆದವುಗಳೆಲ್ಲವುಗಳನ್ನೂ ಅಲ್ಲದೆ ಅವನು ಅದರ ಅಸಲಿಗೆ ಐದನೇ ಪಾಲನ್ನೂ ಕೂಡಿಸಿ ಹಿಂದಕ್ಕೆ ಕೊಡಬೇಕು. ಅತಿಕ್ರಮ ಬಲಿ ಅರ್ಪಿಸುವ ದಿನದಲ್ಲಿ ಅದರ ಯಜಮಾನನು ಯಾವ ನಾಗಿರುವನೋ ಅವನಿಗೆ ಕೊಡಬೇಕು.

1 ಸಮುವೇಲ 3:4

ಅದಕ್ಕ ವನು--ಇಗೋ, ನಾನು ಇಲ್ಲಿ ಇದ್ದೇನೆ ಎಂದು ಹೇಳಿ ಏಲಿಯ ಬಳಿಗೆ ಓಡಿಹೋಗಿ,--ಇಗೋ, ಇಲ್ಲಿ ಇದ್ದೇನೆ; ನೀನು ನನ್ನನ್ನು ಕರೆದಿಯಲ್ಲಾ ಅಂದನು.

ಯೋಬ 22:27

ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ.

ಕೀರ್ತನೆಗಳು 12:2

ಒಬ್ಬೊಬ್ಬನು ತನ್ನ ನೆರೆಯವನ ಸಂಗಡ ವ್ಯರ್ಥವಾದ ಮಾತನ್ನು ಆಡುತ್ತಾನೆ; ಮುಖಸ್ತುತಿಯ ತುಟಿಯಿಂದಲೂ ವಂಚನೆಯ ಹೃದಯದಿಂದಲೂ ಅವರು ಮಾತನಾಡುತ್ತಾರೆ.

ಕೀರ್ತನೆಗಳು 34:15

ಕರ್ತನ ಕಣ್ಣುಗಳು ನೀತಿವಂತರ ಮೇಲೆಯೂ ಆತನ ಕಿವಿಗಳು ಅವರ ಮೊರೆಯ ಕಡೆಗೂ ಅವೆ.

ಕೀರ್ತನೆಗಳು 37:4

ಕರ್ತನಲ್ಲಿ ಆನಂದವಾಗಿರು; ಆಗ ಆತನು ನಿನ್ನ ಹೃದಯದ ಅಪೇಕ್ಷೆಗಳನ್ನು ನಿನಗೆ ಕೊಡುವನು.

ಕೀರ್ತನೆಗಳು 50:15

ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆ; ನಾನು ನಿನ್ನನ್ನು ತಪ್ಪಿಸಿಬಿಡುವೆನು; ಆಗ ನನ್ನನ್ನು ಘನಪಡಿಸುವಿ.

ಕೀರ್ತನೆಗಳು 66:18

ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ.

ಕೀರ್ತನೆಗಳು 91:15

ಅವನು ನನ್ನನ್ನು ಕರೆಯುವನು; ನಾನು ಅವನಿಗೆ ಉತ್ತರ ಕೊಡುವೆನು; ಇಕ್ಕಟ್ಟಿನಲ್ಲಿ ನಾನು ಅವನ ಸಂಗಡ ಇದ್ದು ಅವನನ್ನು ತಪ್ಪಿಸಿ; ಘನಪಡಿಸುವೆನು.ದೀರ್ಘಾಯುಷ್ಯದಿಂದ ಅವನನ್ನು ತೃಪ್ತಿಪಡಿಸಿ ನನ್ನ ರಕ್ಷಣೆಯನ್ನು ಅವನಿಗೆ ತೋರಿಸುವೆನು.

ಕೀರ್ತನೆಗಳು 118:5

ಇಕ್ಕಟ್ಟಿನೊಳಗಿಂದ ಕರ್ತನಿಗೆ ಕೂಗಿದೆನು; ಕರ್ತನು ಉತ್ತರ ಕೊಟ್ಟು ನನ್ನನ್ನು ವಿಶಾಲ ಸ್ಥಳದಲ್ಲಿ ನಿಲ್ಲಿಸಿ ದನು.

ಕೀರ್ತನೆಗಳು 145:18

ಕರ್ತನಿಗೆ ಮೊರೆಯಿಡುವವರು ಯಥಾರ್ಥವಾಗಿ ಮೊರೆಯಿಡುವದಾದರೆ ಆತನು ಹತ್ತಿರವಾಗಿಯೇ ಇದ್ದಾನೆ.

Interlinear

Choose Theme