ನಿಮ್ಮ ಅಕ್ರಮಗಳೇ ನಿಮ್ಮನ್ನು ನಿಮ್ಮ ದೇವರಿಂದ ಅಗಲಿಸಿಯವೆ; ನಿಮ್ಮ ಪಾಪಗಳೇ ಆತನು ಕೇಳದ ಹಾಗೆ ಆತನ ಮುಖವನ್ನು ನಿಮಗೆ ಮರೆಮಾಡಿಯವೆ.
Cross references
ಆ ದಿವಸದಲ್ಲಿ ನನ್ನ ಕೋಪವು ಅವರ ಮೇಲೆ ಉರಿಯು ವದು. ನಾನು ಅವರನ್ನು ಬಿಟ್ಟುಬಿಟ್ಟು ನನ್ನ ಮುಖವನ್ನು ಅವರಿಗೆ ಮರೆಮಾಡುವೆನು; (ವಿರೋಧಿಗಳು) ಅವ ರನ್ನು ನುಂಗಿ ಬಿಡುವರು; ಬಹಳ ಕೇಡುಗಳೂ ಇಕ್ಕಟ್ಟು ಗಳೂ ಅವರಿಗೆ ಸಂಭವಿಸುವವು; ಆ ದಿವಸದಲ್ಲಿ ಅವರು--ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ಈ ಕೇಡುಗಳು ನಮ್ಮನ್ನು ಹಿಡಿದವಲ್ಲಾ ಎಂದು ಹೇಳುವರು.
ಕರ್ತನು ಅದನ್ನು ನೋಡಿ ಕೋಪದಿಂದ ತನ್ನ ಕುಮಾರ ಕುಮಾರ್ತೆಯರನ್ನು ಅಸಹ್ಯಿಸಿಕೊಂಡನು.
ಇಸ್ರಾಯೇಲ್ಯರು ಪಾಪಮಾಡಿ ನಾನು ನಿಮಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ವಿಾರಿದರು; ಅವರು ವಂಚನೆಮಾಡಿ ಶಾಪಕ್ಕೀಡಾದ ದ್ದರಲ್ಲಿ ಕಳವುಮಾಡಿ ತೆಗೆದುಕೊಂಡು ಅದನ್ನು ತಮ್ಮ ಸಾಮಾನುಗಳಲ್ಲಿ ಬಚ್ಚಿಟ್ಟುಕೊಂಡಿದ್ದಾರೆ.
ಜನರು ಪಾಳೆಯಕ್ಕೆ ಬಂದಾಗ ಇಸ್ರಾಯೇಲಿನ ಹಿರಿಯರು--ಈ ಹೊತ್ತು ಕರ್ತನು ಫಿಲಿಷ್ಟಿಯರ ಮುಂದೆ ನಮ್ಮನ್ನು ಹೊಡೆಸಿ ದ್ದೇನು? ಕರ್ತನ ಒಡಂಬಡಿಕೆಯ ಮಂಜೂಷವು ನಮ್ಮಲ್ಲಿದ್ದು ನಮ್ಮನ್ನು ನಮ್ಮ ಶತ್ರುಗಳಿಂದ ತಪ್ಪಿಸಿ ರಕ್ಷಿಸುವ ಹಾಗೆ ನಾವು ಅದನ್ನು ಶೀಲೋವಿನಿಂದ ತರಿಸೋಣ ಅಂದರು.
ಕರ್ತನು ದುಷ್ಟರಿಗೆ ದೂರ; ನೀತಿವಂತರ ಪ್ರಾರ್ಥನೆಯನ್ನು ಆತನು ಕೇಳುತ್ತಾನೆ.
ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
ಕರ್ತನು ಹೀಗನ್ನುತ್ತಾನೆ--ನಾನು ಬಿಟ್ಟು ಬಿಟ್ಟದ್ದಕ್ಕೆ ನಿನ್ನ ತಾಯಿಯ ತ್ಯಾಗಪತ್ರವು ಎಲ್ಲಿ? ಇಲ್ಲವೆ ನಾನು ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟೇನು? ಇಗೋ, ನಿಮ್ಮ ಅಕ್ರಮ ಗಳ ನಿಮಿತ್ತ ನಿಮ್ಮನ್ನು ನೀವೇ ಮಾರಿಕೊಂಡಿದ್ದೀರಿ; ನಿಮ್ಮ ದ್ರೋಹಗಳ ನಿಮಿತ್ತವೇ ನಿಮ್ಮ ತಾಯಿಯನ್ನು ಬಿಟ್ಟಿದ್ದೇನೆ.
ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪ ಗೊಂಡು ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತ ನಾದೆನು; ಅವನು ಮೊಂಡತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.
ಇಗೋ, ವ್ಯಾಜ್ಯ ಕ್ಕೂ ಹೋರಾಟಕ್ಕೂ ದುಷ್ಟತ್ವದ ಮುಷ್ಟಿಯಿಂದ ಹೊಡೆಯುವದಕ್ಕೂ ನೀವು ಉಪವಾಸಮಾಡುತ್ತೀರಿ. ನಿಮ್ಮ ಸ್ವರವು ಮೇಲಕ್ಕೆ ಕೇಳಿಸುವಂತೆ ಈ ದಿವಸ ಉಪವಾಸ ಮಾಡಿದ ಹಾಗೆ ನೀವು ಮಾಡಬೇಡಿರಿ.
ಹೊಲಕ್ಕೆ ಹೊರಡಬೇಡ; ದಾರಿಯಲ್ಲಿ ನಡೆಯಬೇಡ; ಯಾಕಂದರೆ ಶತ್ರುವಿನ ಕತ್ತಿಯೂ ಅಂಜಿಕೆಯೂ ಸುತ್ತಲು ಆವೆ.
ಇಸ್ರಾಯೇಲನ ಮನೆತನದವರು ತಮ್ಮ ಅಕ್ರಮಗಳ ನಿಮಿತ್ತವಾಗಿ ಸೆರೆಗೆ ಹೋದರೆಂದು ಅನ್ಯಜನಾಂಗಗಳು ತಿಳಿಯುವವು; ಅವರು ನನಗೆ ವಿರೋಧವಾಗಿ ದ್ರೋಹ ಮಾಡಿದ್ದರಿಂದ ನಾನು ಅವರಿಗೆ ನನ್ನ ಮುಖವನ್ನು ಮರೆಮಾಡಿಕೊಂಡು ಅವರನ್ನು ಅವರ ವೈರಿಗಳ ಕೈಗೆ ಒಪ್ಪಿಸಿದೆನು. ಹೀಗೆ ಅವರೆಲ್ಲರೂ ಕತ್ತಿಯಿಂದ ಹತರಾದರು.
ಅವರ ಅಶುದ್ಧತ್ವದ ಪ್ರಕಾರವೂ ಅಕ್ರಮಗಳ ಪ್ರಕಾರವೂ ನಾನು ಅವರನ್ನು ದಂಡಿಸಿ, ನನ್ನ ಮುಖವನ್ನು ಅವರಿಂದ ಮರೆಮಾಡಿದ್ದೇನೆ.
ಇಲ್ಲವೇ ನಾನು ನನ್ನ ಮುಖವನ್ನು ಎಂದಿಗೂ ಮರೆಮಾಡುವದಿಲ್ಲ; ನಾನು ನನ್ನ ಆತ್ಮವನ್ನು ಇಸ್ರಾ ಯೇಲಿನ ಮನೆತನದವರ ಮೇಲೆ ಸುರಿದಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ.
ಆಗ ಅವರು ಕರ್ತನಿಗೆ ಮೊರೆಯಿಡುವರು; ಆದರೆ ಆತನು ಅವರಿಗೆ ಉತ್ತರ ಕೊಡುವದಿಲ್ಲ. ಅವರು ಕೆಟ್ಟ ಕ್ರಿಯೆಗಳನ್ನು ಮಾಡಿದ ಪ್ರಕಾರವೇ, ಆ ಕಾಲದಲ್ಲಿ ಅವರಿಗೆ ತನ್ನ ಮುಖವನ್ನು ಮರೆಮಾಡುವನು.