ಕರ್ತನು ಮನುಷ್ಯರನ್ನು ದೂರಮಾಡುವ ವರೆಗೂ ಅವರನ್ನು ದೇಶದ ಮಧ್ಯದಿಂದ ತೊಲಗಿಸಿಬಿಡುವ ವರೆಗೂ ಅದು ಇರುವುದು;ಆದರೆ ಹತ್ತನೆಯ ಪಾಲು ಉಳಿದಿದ್ದರೂ ಸಹ ಅದು ಹಿಂತಿರುಗುವದ ರಿಂದ ಅದನ್ನು ತಿಂದು ಬಿಡುವದು; ಏಲಾಮರವೂ ಓಕ್ ಮರವೂ ತಮ್ಮ ಎಲೆಗಳನ್ನು ಬಿಡುವಾಗ ತಮ್ಮ ಸಾರವು ತಮ್ಮೊಳಗೆ ಇರುವಂತೆಯೇ ಪರಿಶುದ್ಧ ಸಂತಾನವು ಅದರ ಆಧಾರವಾಗಿರುವದು ಎಂದು ಉತ್ತರ ಕೊಟ್ಟನು.
Cross references
ಇದ ಲ್ಲದೆ ಕರ್ತನು ನಿನ್ನನ್ನು ಭೂಮಿಯ ಈ ಮೇರೆಯಿಂದ ಆ ಮೇರೆಯ ವರೆಗೂ ಎಲ್ಲಾ ಜನಗಳಲ್ಲಿ ಚದರಿಸು ವನು; ಅಲ್ಲಿ ನೀನೂ ನಿನ್ನ ಪಿತೃಗಳೂ ತಿಳಿಯದಂಥ ಮರವೂ ಕಲ್ಲೂ ಆಗಿರುವಂಥ ಬೇರೆ ದೇವರುಗಳನ್ನು ಸೇವಿಸುವಿ.
ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು.
ಜನಾಂಗವನ್ನು ಹೆಚ್ಚಿಸಿದ್ದೀ, ಓ ಕರ್ತನೇ, ಜನಾಂಗ ವನ್ನು ಹೆಚ್ಚಿಸಿದ್ದೀ, ನೀನು ಮಹಿಮೆ ಹೊಂದಿದ್ದೀ; ನೀನು ದೇಶದ ಮೇರೆಗಳನ್ನೆಲ್ಲಾ ಭೂಮಿಯ ಕಟ್ಟಕಡೆ ಯ ವರೆಗೂ ವಿಸ್ತರಿಸಿದ್ದೀ.
ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
ಆಗ ನಾನು ಯೂಫ್ರೇಟೀಸಿಗೆ ಹೋಗಿ ಅಗೆದು ಆ ದಟ್ಟಿಯನ್ನು ನಾನು ಅಡಗಿಸಿದ್ದಲ್ಲಿಂದ ತೆಗೆದೆನು; ಇಗೋ, ಆ ದಟ್ಟಿಯು ಯಾವ ಕೆಲಸಕ್ಕಾದರೂ ಬಾರದೆ ಕೆಟ್ಟು ಹೋಗಿತ್ತು.
ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು.
ಆದಕಾರಣ ನೀನು ನಮ್ಮನ್ನು ಮರೆಯು ವದೇಕೆ? ಯಾಕೆ ನಮ್ಮನ್ನು ಇಷ್ಟು ಕಾಲ ಕೈಬಿಟ್ಟಿದ್ದೀ?
ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.
ಅವರನ್ನು ತಳ್ಳುವದರಿಂದ ಲೋಕವು ಸಮಾಧಾನವಾಗು ವದಾದರೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದು ಬಂದಂತಾಗುವದಿಲ್ಲವೇ.